ಅಲ್ಪಸಂಖ್ಯಾತರ ಅಭಿವೃದ್ಧಿಗೆ ಜೆಡಿಎಸ್ ಪಕ್ಷ ಒತ್ತು
Team Udayavani, Dec 14, 2022, 4:53 PM IST
ದೇವನಹಳ್ಳಿ: ತಾಲೂಕಿನಲ್ಲಿ ಅಲ್ಪಸಂಖ್ಯಾತ ಘಟಕವನ್ನು ಬೂತ್‌ಮಟ್ಟದಿಂದ ಸಂಘಟಿಸಬೇಕು. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ಕೊಡಲಾಗಿದೆ ಎಂದು ಶಾಸಕ ಎಲ್.ಎನ್. ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆಯಲ್ಲಿ ಮಾತ ನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು. ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ಗೆ ಬೆಂಬಲಿಸುವಂತೆ ಆಗಬೇಕು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿ ಅಲ್ಪಸಂಖ್ಯಾತರಿಗೆ ಅನೇಕ ಯೋಜನೆಗಳನ್ನು ರೂಪಿಸಿದ್ದರು ಎಂದು ಹೇಳಿದರು.
ಬೂತ್‌ಗಳಲ್ಲಿ ಪಕ್ಷವನ್ನು ಗಟ್ಟಿಗೊಳಿಸಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ದೊಂದಿಗೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತರಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತಾರೆ. ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ತಮ್ಮ ತಮ್ಮ ಬೂತ್‌ಗಳಲ್ಲಿ ಪಕ್ಷವನ್ನು ಗಟ್ಟಿಗೊಳಿಸಬೇಕು. ಪ್ರತಿ ಚುನಾವಣೆಯಲ್ಲೂ ಜೆಡಿಎಸ್ ಪಕ್ಷ ಜಯಭೇರಿ ಬಾರಿಸುತ್ತಿದೆ. ಮುಂದಿನ 2023ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಹೆಚ್ಚು ಮತಗಳನ್ನು ಬರುವಂತೆ ಮಾಡಬೇಕು ಎಂದು ಹೇಳಿದರು.
ರಾಜ್ಯದ ಸರ್ವಾಂಗೀಣ ಪ್ರಗತಿ: ಅಲ್ಪಸಂಖ್ಯಾತರಿಗೆ ತಾಲೂಕಿನಲ್ಲಿ ಹೆಚ್ಚು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತನ್ನು ನೀಡಿದ್ದೇನೆ. ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಅಜೆಂಡಾ ಆಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಧಿಕಾರ ನೀಡುವ ವಿಶ್ವಾಸವಿದೆ. ತಾಲೂಕಾದ್ಯಂತ ಪಂಚರತ್ನ ಯೋಜನೆ ರಥ ಬಂದಾಗ ಪ್ರತಿ ಗ್ರಾಮದಲ್ಲೂ ಅದ್ಭುತ ಸ್ವಾಗತ ಮಾಡಿದ್ದಾರೆ. ಜೆಡಿಎಸ್ ಸರ್ಕಾರ ರಾಜ್ಯದಲ್ಲಿ ಬಂದರೆ ಪಂಚರತ್ನ ಯೋಜನೆಗಳನ್ನು ರಾಜ್ಯದ ಎಲ್ಲಾವರ್ಗದ ಜನರಿಗೆ ಅನುಕೂಲವಾಗುವ ಯೋಜನೆ ಇದಾಗಿದ್ದು, ಜೆಡಿಎಸ್ ಅನುಷ್ಠಾನಕ್ಕೆ ಬಂದಲ್ಲಿ ಪಂಚರತ್ನ ಯೋಜನೆ ಅನುಷ್ಠಾನದಿಂದ ರಾಜ್ಯದ ಸರ್ವಾಂಗೀಣ ಪ್ರಗತಿ ಆಗಲಿದೆ ಎಂದು ಭರವಸೆ ನೀಡಿದರು.
ಅಲ್ಪಸಂಖ್ಯಾತರ ಸಮಾವೇಶ: ರಾಷ್ಟ್ರೀಯ ಪಕ್ಷಗ ಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುವುದಿಲ್ಲ. ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಕರೆಸಿ ಅಲ್ಪಸಂಖ್ಯಾತರ ಸಮಾ ವೇಶವನ್ನು ಮಾಡಲಾಗುವುದು ಎಂದು ಹೇಳಿದರು.
ಅಭಿವೃದ್ಧಿ ಕಾರ್ಯ ಮನೆ ಮನೆಗೆ ತಿಳಿಸಿ: ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಮುನೇಗೌಡ ಮಾತನಾಡಿ, ಅಲ್ಪಸಂಖ್ಯಾತ ಘಟಕದ ಸಭೆಯನ್ನು ಕರೆದು ಮುಂದಿನ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತಿದೆ. ತಾಲೂಕಿನಲ್ಲಿ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಪ್ರತಿ ಮನೆ ಮನೆಗೆ ತಿಳಿಸಬೇಕು ಎಂದು ಹೇಳಿದರು.
ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಸಿಪ್ ಅಧ್ಯಕ್ಷತೆಯನ್ನು ವಹಿಸಿದರು. ಜೆಡಿಎಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಚಾರಸಮಿತಿ ಅಧ್ಯಕ್ಷ ನೆರಗನಹಳ್ಳಿ ಶ್ರೀನಿವಾಸ್, ಗ್ರಾಪಂ ಸದಸ್ಯ ನಾಗೇಶ್, ತಾಪಂ ಮಾಜಿ ಸದಸ್ಯ ಕಾರಹಳ್ಳಿ ಶ್ರೀನಿವಾಸ್, ತಾಲೂಕು ಸೊಸೈಟಿ ಅಧ್ಯಕ್ಷ ಎ. ದೇವರಾಜ್, ಅಲ್ಪಸಂಖ್ಯಾತ ಮುಖಂಡ ನಜೀರ್ ಅಹಮದ್, ಆಸಿಪ್, ನವೀದ್ ಅಹಮದ್, ಆರಿಪ್, ಸಾದಿಕ್, ಅನೀಸ್, ಆಸಿಪ್ ವುಲ್ಲಾ ಖಾನ್ ಹಾಗೂ ಅಲ್ಪಸಂಖ್ಯಾತ ಮುಖಂಡರುಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.