ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನಿಸುತ್ತಿದ್ದ ಐವರು ಪೊಲೀಸರ ವಶಕ್ಕೆ
Team Udayavani, Mar 29, 2022, 1:02 PM IST
ಕನಕಪುರ: ದರೋಡೆ ಮಾಡಲು ಮಾರಕಾಸ್ತ್ರಗಳನ್ನು ಹಿಡಿದು ಹೊಂಚು ಹಾಕುತ್ತಿದ್ದ ಐವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಚನ್ನೇಗೌಡನ ದೊಡ್ಡಿ ಶರತ್ ಕುಮಾರ್ (29) ಕೈಲಾಂಚ ಹೋಬಳಿ ಸಿಬಕಟ್ಟೆ ಗ್ರಾಮದ ರೇವಣ್ಣ ಅಲಿಯಾಸ್ ರೇವ (25) ಬಿಡದಿ ಹೋಬಳಿಯ ಪುಟ್ಟಿರಮ್ಮನ ದೊಡ್ಡಿ ಹರೀಶ್ ಅಲಿಯಾಸ್ ಜೋಗಯ್ಯ (32) ಮಳವಳ್ಳಿ ತಾಲೂಕು ಕಿರುಗಾವಲು ಹೋಬಳಿಯ ಕೂದೇನಕೊಪ್ಪಲು ಗ್ರಾಮದ ಸಿದ್ದರಾಜು (19) ಹಾಗೂ ಮದ್ದೂರು ಮೂಲದ ಸುರೇಶ್ ಬಂಧಿತ ಆರೋಪಿಗಳು.ತಾಲೂಕಿನ ಹಾರೋಹಳ್ಳಿ ಹೋಬಳಿಯ ಕೂದೆನಕೊಪ್ಪಲು ಗ್ರಾಮದ ಸಿದ್ದರಾಜು (19) ಹಾಗೂ ಮದ್ದೂರು ಮೂಲದ ಸುರೇಶ್ ಬಂಧಿತ ಆರೋಪಿಗಳು.
ಬಿಡದಿ ದೊಡ್ಡಮುದವಾಡಿ ರಸ್ತೆಯಲ್ಲಿರುವ ದೊಂಬರದೊಡ್ಡಿ ಗ್ರಾಮದ ಬಳಿ ಮಾ.24ರಂದು ತಡರಾತ್ರಿ 1 ಗಂಟೆ ಸಮಯದಲ್ಲಿ ಐವರು ದರೋಡೆಕೋರರು ಮಾರಕಾಸ್ತ್ರಗಳನ್ನು ಹಿಡಿದು ದರೋಡೆ ಮಾಡಲು
ಹೊಂಚು ಹಾಕುತ್ತಿದ್ದರು. ಈ ಕುರಿತ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣೆಯ ಪಿಎಸ್‌ಐ ಹೇಮಂತ್ ಕುಮಾರ್ ನೇತೃತ್ವದಲ್ಲಿ ಎಎಸ್‌ಐ ಪದ್ಮ ಶಂಕರ್, ಸಿಬ್ಬಂದಿಗಳಾದ ರಮೇಶ, ಜಯಣ್ಣ, ಮನು ಪೂಜಾರಿ, ಸುರೇಶ್, ಚಾಲಕ ಶಿವಪ್ಪ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 1.07 ಲಕ್ಷ ರೂ. ನಗದು, ಎರಡು ದ್ವಿಚಕ್ರ ವಾಹನ, 4 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ : ಕಪಾಳ ಮೋಕ್ಷ: ಕ್ರಿಸ್ ರಾಕ್ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ವಿಲ್ ಸ್ಮಿತ್
ಪ್ರಕರಣವನ್ನು ಭೇದಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.