ನಟ ವಿನೋದ್‌ರಾಜ್‌ರ ಒಂದು ಲಕ್ಷ ರೂ. ಕಳ್ಳತನ
Team Udayavani, Sep 29, 2018, 6:20 AM IST
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಟ ವಿನೋದ್‌ರಾಜ್ ಅವರು ಬ್ಯಾಂಕ್‌ನಿಂದ ಡ್ರಾ ಮಾಡಿಕೊಂಡು ಬಂದಿದ್ದ 1 ಲಕ್ಷ ರೂ.ಗಳನ್ನು ಕಳ್ಳರು ದೋಚಿದ್ದಾರೆ.
ನೆಲಮಂಗಲ ತಾಲೂಕಿನ ಗಡಿ ಭಾಗದಲ್ಲಿರುವ ಸೋಲದೇವನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ನಟ ವಿನೋದ್‌ರಾಜ್ ಅವರು ತಮ್ಮ ತಾಯಿ, ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ. ಲೀಲಾವತಿ ಅವರೊಂದಿಗೆ ವಾಸವಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ನೆಲಮಂಗಲ ಪಟ್ಟಣದ ಮುಖ್ಯರಸ್ತೆಯ ದ್ವಾರಕಾ ಪ್ಲಾಜಾದಲ್ಲಿರುವ ಇಂಡಸ್‌ಇಂಡ್ ಬ್ಯಾಂಕ್‌ಗೆ ಆಗಮಿಸಿದ ಅವರು 1 ಲಕ್ಷ ರೂ.ಗಳನ್ನು ಡ್ರಾ ಮಾಡಿಕೊಂಡು, ಹಣವನ್ನು ತಮ್ಮ ಕಾರಿನಲ್ಲಿಟ್ಟುಕೊಂಡು ಹೊರಟಿದ್ದರು. ಅವರ ಜೊತೆ ಸ್ನೇಹಿತ ರಾಮಾಂಜಿನಪ್ಪ ಕೂಡ ಬಂದಿದ್ದರು. ಆಗ ಅವರ ಕಾರಿನ ಬಳಿ ಬಂದ ಇಬ್ಬರು ವ್ಯಕ್ತಿಗಳು, “ಸರ್, ನಿಮ್ಮ ಕಾರಿನ ಟೈಯರ್ ಪಂಚರ್ ಆಗಿದೆ ನೋಡಿ’ ಎಂದರು.
ಇಬ್ಬರೂ ಕೆಳಗಿಳಿದು ಬಂದು ನೋಡುವಷ್ಟರಲ್ಲಿ ಕಾರಿನ ಮುಂದಿನ ಸೀಟಿನಲ್ಲಿ ಇಟ್ಟಿದ್ದ ಸೂಟ್‌ಕೇಸ್‌ನ್ನು ಕಳ್ಳರು ಹಣ ಸಮೇತ ದೋಚಿಕೊಂಡು ಪರಾರಿಯಾಗಿದ್ದಾರೆ. ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಅವರು ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು