ಕೆಂಪೇಗೌಡರು ಒಂದು ಜಾತಿಗೆ ಸೀಮಿತವಲ್ಲ
Team Udayavani, Jun 29, 2021, 10:27 AM IST
ವಿಜಯಪುರ: ನಾಡಪ್ರಭು ಕೆಂಪೇ ಗೌಡರು ಒಂದು ಜಾತಿಗೆ ಸೀಮಿತರಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಹೊಸಕೋಟೆ ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿಒಕ್ಕಲಿಗರ ಸಂಘದಿಂದ ನಡೆದ ನಾಡ ಪ್ರಭುಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ನಾಡಪ್ರಭು ಕೆಂಪೇಗೌಡ ಜಯಂತಿ ಯನ್ನು ರಾಜ್ಯದಲ್ಲಿ ಸರಳವಾಗಿ ಸಂಭ್ರಮದಿಂದ ಆಚರಣೆ ಮಾಡಲಾ ಗುತ್ತಿದೆ. 39 ವರ್ಷಗಳ ಕಾಲ ಬೆಂಗ ಳೂರುನಗರವನ್ನುಕಟ್ಟಿ ರಾಜಕೀಯ, ಆರ್ಥಿಕ, ಸ್ವಾವಲಂಬಿ ಶಕ್ತಿಯನ್ನು ತುಂಬಿ ಬೆಂಗಳೂರು ನಗರವನ್ನು ವಿಶ್ವ ವಿಖ್ಯಾತಿಗೊಳಿಸಿದ ಕೀರ್ತಿ ಕೆಂಪೇ ಗೌಡರಿಗೆ ಸಲ್ಲುತ್ತದೆ ಎಂದು ಹೇಳಿದರು.
ವೇಗವಾಗಿ ಬೆಳೆದಿದೆ ಬೆಂಗಳೂರು: ಬೆಂಗಳೂರಿಗೆ ವಿಶೇಷವಾದ ಆದ್ಯತೆ ನೀಡಿ, ನಾಲ್ಕು ದಿಕ್ಕುಗಳಲ್ಲಿ ಗೋಪುರಗಳನ್ನು ಕಟ್ಟಿದ್ದು, ಇಂದು ಅದನ್ನು ಮೀರಿ ಬೆಂಗಳೂರು ಅತಿವೇಗವಾಗಿ ಬೆಳೆದಿದೆ. ಅಂತಹ ನಾಯಕರ ಜನ್ಮ ದಿನಾಚರಣೆ ನಮ್ಮ ಭಾಗ್ಯ. ಈ ಪ್ರತಿಮೆ ನಾನು ಶಾಸಕನಾಗಿದ್ದಾಗ ನಮ್ಮ ಅವಧಿಯಲ್ಲಿ ನಿರ್ಮಾಣಗೊಂಡಿದ್ದು, ನಮಗೆ ಸಂತೋಷ ತಂದಿದೆ. ನಾಡಪ್ರಭು ಕೆಂಪೇಗೌಡರು ಒಕ್ಕಲಿಗರಾಗಿ ಹುಟ್ಟಿದ್ದು, ಯಾವುದೇ ಒಂದು ಜಾತಿಗೆಸೀಮಿತರಾಗಿಲ್ಲ. ಅಂತಹ ವ್ಯಕ್ತಿತ್ವ ಅವರದ್ದು. ಸಮಾನತೆ ಸಹ ಬಾಳ್ವೆ ಅವರ ಕನಸಾಗಿತ್ತು. ಅಂತಹ ಮಹಾನ್‌ನಾಯಕ ಕೆಂಪೇಗೌಡರು ಈ ನಾಡಲ್ಲಿಮತ್ತೆ ಹುಟ್ಟಿ ಬರಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಮುನಿರಾಜು ಹೆಗ್ಗಡೆ, ಬಿ.ಎಂ.ಆರ್.ಡಿ ಅಧ್ಯಕ್ಷ ಸಿ.ನಾಗರಾಜ್,ಕೆ.ಸತೀಶ್, ಸೋಣ್ಣೇಗೌಡ, ಶಂಕರೇಗೌಡ, ಲಕ್ಷ್ಮಣ್ ಗೌಡ, ನಗರಸಭೆ ಅಧ್ಯಕ್ಷ ಅರುಣ್ ಕುಮಾರ್ ಮತ್ತು ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.