![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jun 28, 2019, 8:18 AM IST
ದೇವನಹಳ್ಳಿ: ನಾಡ ಪ್ರಭು ಬೆಂಗಳೂರು ನಿರ್ಮಾಣ ಮಾಡಿದ ಕೆಂಪೇಗೌಡರ ಕೊಡುಗೆ ಅಪಾರವಾದದ್ದು ಕೆಂಪೇಗೌಡರ ದೂರದೃಷ್ಟಿ ಇಂದಿಗೂ ಪ್ರಸ್ತುತವಾಗಿದೆ ಎಂದು ಶಾಸಕ ನಿಸರ್ಗ ಎಲ್.ಎನ್.ನಾರಾಯಣ ಸ್ವಾಮಿ ತಿಳಿಸಿದರು.
ನಗರದ ಮಿನಿವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡರ 509ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಬೆಂಗಳೂರು ನಗರ ಆರಾಧ್ಯರಾಗಿರುವ ಕೆಂಪೇಗೌಡ ಇಡೀ ಪ್ರಾಂತ್ಯದ ಅಭಿವೃದ್ಧಿಗೆ ಮುನ್ನುಡಿ ಬರೆದವರು. ಬೆಂಗಳೂರು ನಗರದ ಹೇಗಿರಬೇಕು ಎಂದು ಯೋಚಿಸಿ ನಗರವನ್ನು ಕಟ್ಟಿದ ಅವರು ಸಾಮಾಜಿಕ ಸುಧಾರಣೆಗಳು ಬೆಂಗಳೂರಿನಲ್ಲಿ ದೇವಾಲಯಗಳ ಮತ್ತು ಜಲಾಶಯಗಳ ನಿರ್ಮಾಣಕ್ಕೂ ಅವರು ಮುಂದಾಗಿದ್ದರು. ಸರ್ಕಾರ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸುತ್ತಿರುವುದು ಸಂತಸ ತಂದಿದೆ. ರಾಜ್ಯದ ಪ್ರತಿ ಜಿಲ್ಲೆ ತಾಲೂಕುಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವನ್ನು ಹಬ್ಬದ ವಾತಾವರಣದಲ್ಲಿ ಆಚರಿಸುತ್ತಿದ್ದೇವೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಸಲ್ಲಿಸಿದ್ದೇನೆ. ಜಿಪಂ ಸಾಮಾನ್ಯ ಸಭೆಯಲ್ಲಿ ಪ್ರತಿಮೆ ನಿರ್ಮಾಣಕ್ಕಾಗಿ ಜಾಗ ನೀಡಲು ಜಿಪಂ ಅಧ್ಯಕ್ಷರೊಂದಿಗೆ ಚರ್ಚಿಸಲಾಗಿದೆ ಎಂದರು.
ವಿಶ್ವಮಾನ್ಯ: ತಾಲೂಕು ಒಕ್ಕಲಿಗರ ಸಂಘದ ಕೋಶಾಧಿಕಾರಿ ಬಿ ಎಮ್ ಬೈರೇಗೌಡ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಆಗಿರುವುದರಿಂದ ಕೆಂಪೇಗೌಡ ವಿವಿಆದರೆ ಎಲ್ಲಾ ಮಕ್ಕಳಿಗೂ ಅನುಕೂಲವಾಗುವುದು. ಕೆಂಪೇಗೌಡರು ವಿಶ್ವಮಾನ್ಯರು ಎಂದು ಹೇಳಿದರು.
ಪ್ರವಾಸಿ ತಾಣವಾಗಿಸಿ: ತಾಪಂ ಅಧ್ಯಕ್ಷೆ ಭಾರತಿ ಮಾತನಾಡಿ, ಕೆಂಪೇಗೌಡರ ವಂಶಸ್ಥರಾದ ರಣಭೈರೇಗೌಡರ ಆವತಿಯಲ್ಲಿ ಬೆಟ್ಟವಿದ್ದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣವನ್ನಾಗಿ ಮಾಡಬೇಕು. ಶಾಸಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಪ್ರವಾಸಿ ತಾಣವಾಗುವಂತೆ ಮಾಡಬೇಕು ಎಂದರು.
ತಹಶೀಲ್ದಾರ್ ಕೇಶವಮೂರ್ತಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಮುರುಡಯ್ಯ, ಶಿರಸೆೆ§ೕದಾರ್ ಬಾಲಕೃಷ್ಣ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಸಿ.ವೆಂಕಟೇಗೌಡ, ಪ್ರಧಾನ ಕಾರ್ಯದರ್ಶಿ ಎ.ಶಿವರಾಮಯ್ಯ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಮಾಜಿ ಅಧ್ಯಕ್ಷ ಆರ್ ಮುನೇಗೌಡ, ಸಿ ಮುನಿರಾಜು, ತಾಪಂ ಉಪಾಧ್ಯಕ್ಷೆ ನಂದಿನಿ, ಸದಸ್ಯರಾದ ಶೈಲಜಾ, ಚೈತ್ರಾ, ಶಶಿಕಲಾ, ಎಸ್.ಮಹೇಶ್, ಭೀಮರಾಜ್ ಇತರರಿದ್ದರು.
You seem to have an Ad Blocker on.
To continue reading, please turn it off or whitelist Udayavani.