ಉಮೇದುವಾರರ ಪಟ್ಟಿಯಲ್ಲಿ ಕೆಜೆಪಿ ಹೆಸರು ತಪ್ಪಾಗಿ ಮುದ್ರಣ: ದೂರು

Team Udayavani, Apr 20, 2019, 3:00 AM IST

kjp

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಉಮೇದುವಾರರ ಪಟ್ಟಿಯಲ್ಲಿ ಇಡೀ ಕ್ಷೇತ್ರದ ಮತಗಟ್ಟೆಯ ಮುಂಭಾಗದ ಗೋಡೆಯ ಮೇಲೆ ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಅಂಟಿಸಿದ್ದ ಉಮೇದುದಾರರ ಪಟ್ಟಿಯಲ್ಲಿ ಚುನಾವಣಾಧಿಕಾರಿಗಳ ಬೇಜವಾಬ್ದಾರಿಯಿಂದ ಕರ್ನಾಟಕ ಜನತಾ ಪಕ್ಷ(ಕೆಜೆಪಿ)ದ ಹೆಸರನ್ನು ತಪ್ಪಾಗಿ ನಮೂದಿಸಲಾಗಿತ್ತು ಎಂದು ಕ್ಷೇತ್ರದ ಕೆಜೆಪಿ ಅಭ್ಯರ್ಥಿ ನಾಗೇಂದ್ರ ರಾವ್‌ ಶಿಂಧೆ ಆರೋಪಿಸಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುದ್ರಣ ದೋಷ ಅನ್ನಿಸಲ್ಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಉಮೇದುವಾರರ ಪಟ್ಟಿಯಲ್ಲಿ ಮುದ್ರಣ ದೋಷ ಕಂಡು ಬಂದಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಇದು ಕೇವಲ ಮುದ್ರಣ ದೋಷ ಅನ್ನಿಸುವುದಿಲ್ಲ. ಜಿಲ್ಲಾ ಮುಖ್ಯ ಚುನಾವಣಾಧಿಖಾರಿ ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಪಕ್ಷಕ್ಕೆ ಅನುಕೂಲ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಮತದಾರರಲ್ಲಿ ಗೊಂದಲ: ನಮೂನೆ 7 ಎ ರಲ್ಲಿ ಅನ್ವಯ ಚುನಾವಣೆಗೆ ಸ್ಪರ್ಧಿಸುವ ಕ್ರಮಸಂಖ್ಯೆ 7ರಲ್ಲಿ ಕರ್ನಾಟಕ ಜನತಾ ಪಕ್ಷದ(ಕೆಜೆಪಿ)ಅಭ್ಯರ್ಥಿ ನಾಗೇಂದ್ರ ರಾವ್‌ ಶಿಂಧೆೆ ಹೆಸರಿನ ಮುಂಭಾಗದಲ್ಲಿ ಕರ್ನಾಟಕ ಜನತಾ ಪಕ್ಷದ(ಕೆಜೆಪಿ)ಎಂದು ಮುದ್ರಣಗೊಂಡಿದೆ. ಆ ಸಾಲಿನ ಕೆಳಭಾಗದಲ್ಲಿ ಸಮಾಜವಾದಿ ಜನತಾ ಪಾರ್ಟಿ ಕರ್ನಾಟಕ ಎಂದು ಆಂಗ್ಲ ಭಾಷೆಯಲ್ಲಿ ಪ್ರಕಟಗೊಂಡಿದೆ. ಇದರಿಂದ, ವಿದ್ಯಾವಂತ ಯುವಕರು ಸೇರಿದಂತೆ ಎಲ್ಲಾ ಮತದಾರರು ಗೊಂದಲಕ್ಕೀಡಾದ್ದರು. ಈ ಗೊಂದಲಗಳಿಗೆ ಚುನಾವಣಾಧಿಕಾರಿಗಳೇ ಕಾರಣರಾಗಿದ್ದಾರೆ. ಅವರು ಮಾಡಿರುವ ತಪ್ಪಿನಿಂದ ಪಕ್ಷದ ಹೆಸರಿಗೆ ಚ್ಯುತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೇಲಧಿಕಾರಿಗಳಿಗೆ ದೂರು: ಸಮಾಜವಾದಿ ಜನತಾ ಪಾರ್ಟಿ ಅಭ್ಯರ್ಥಿ ಖಾದರ ಸುಬಾನ್‌ಖಾನ್‌ ಎಂಬುವರ ಹೆಸರು ಹಾಗೂ ಕ್ರಮ ಸಂಖ್ಯೆ 5 ಡಿ.ಪಾಳ್ಯ, ಸಮಾಜವಾದಿ ಜನತಾ ಪಾರ್ಟಿ ಎಂದು ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಮುದ್ರಣಗೊಂಡಿದೆ. ಈ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪು ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ನ್ಯಾಯ ದೊರಕಿಸಿಕೊಡಿ: ಒಳ್ಳೆಯ ನಾಮಫ‌ಲಕದ ಜೊತೆಗೆ ಒಳ್ಳೆಯ ಸಂದೇಶ ತಲುಪಿಸಬೇಕಿದ್ದ ಚುನಾವಣಾ ಅಧಿಕಾರಿಗಳೇ ಈ ತಪ್ಪು ಮಾಡಿರುವುದು ಎಷ್ಟರ ಮಟ್ಟಿಗೆ ಸರಿ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ತನಿಖೆ ನಡೆಸಿ, ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.