ಕುಂದಾಣ ರಾಜಸ್ವ ನಿರೀಕ್ಷಕರ ಅಮಾನತಿಗೆ ಆಗ್ರಹ


Team Udayavani, Apr 12, 2021, 11:47 AM IST

ಕುಂದಾಣ ರಾಜಸ್ವ ನಿರೀಕ್ಷಕರ ಅಮಾನತಿಗೆ ಆಗ್ರಹ

ದೇವನಹಳ್ಳಿ: ತಾಲೂಕಿನ ಕುಂದಾಣ ಹೋಬಳಿಯ ತೈಲಗೆರೆ ಗ್ರಾಮದ ಸರ್ವೆ ನಂ. 110ರಲ್ಲಿ 80 ಎಕರೆ 20 ಗುಂಟೆ ಜಾಗವನ್ನು 20 ಜನರ ಹೆಸರಿಗೆ ಅಕ್ರಮವಾಗಿ ನಮೂದು ಮಾಡಿರುವ ಆರೋಪದ ಮೇಲೆ ರಾಜಸ್ವ ನಿರೀಕ್ಷಕ ಟಿ.ಎನ್‌.ಮಂಜುನಾಥ್‌ ಅವರನ್ನು ಅಮಾನತು ಮಾಡಬೇಕು ಎಂದು ಆರ್‌ ಟಿಐ ಕಾರ್ಯಕರ್ತರಾದ ಬೀರಸಂದ್ರ ರವಿ, ಕೊಯಿರಾ ಚಿಕ್ಕೇಗೌಡ ಆಗ್ರಹಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಾಖಲೆ ಪ್ರದರ್ಶಿಸಿ ಮಾತನಾಡಿದ ಅವರು, ಕುಂದಾಣನಾಡಕಚೇರಿಯಲ್ಲಿ ಅಭಿಲೇಖಾಲಯದ ವಿಷಯ ನಿರ್ವಾಹಕಿ ಲಾವಣ್ಯಾರಿಂದ ಬಲವಂತವಾಗಿಬೀರುವಿನ ಬೀಗದ ಕೀ ತೆಗೆದುಕೊಂಡು ಯಾರಗಮನಕ್ಕೂ ತಾರದೆ ಕಾರಹಳ್ಳಿ, ಮೂಡಿಗಾನಹಳ್ಳಿ, ತೈಲಗೆರೆ ಮತ್ತು ಮೀಸಗಾನಹಳ್ಳಿ ಗ್ರಾಮದ 1993-94ರ ಕೈಬರಹದ ಪಹಣಿ ಪುಸ್ತಕ ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿದ್ದಾರೆ.

ಇಲ್ಲ ಎಂದು ಸಮಜಾಯಿಸಿ: ಈ ಬಗ್ಗೆ ಕಚೇರಿಯಲ್ಲಿ ಅಟಲ್‌ ಜನಸ್ನೇಹಿ ಕೇಂದ್ರದ ಕಂಪ್ಯೂಟರ್‌ಆಪರೇಟರ್‌ ವಿಜಯಕುಮಾರ್‌ ಅವರನ್ನುವಿಚಾರಿಸಿದಾಗ ಅಲ್ಮೇರಾದಲ್ಲಿದ್ದಂತಹ ಕೈಬರಹದ ಪಹಣಿಗಳನ್ನು ರಾಜಸ್ವ ನಿರೀಕ್ಷಕರು ತೆಗೆದುಕೊಂಡು ಹೋಗಿದ್ದಾರೆಂದು ಮಾಹಿತಿ ನೀಡಿದ್ದಾರೆ. ಮತ್ತೆರಾಜ್ಯಸ್ವ ನಿರೀಕ್ಷಕರನ್ನು ಕೇಳಿದ್ರೆ, ನನ್ನ ಬಳಿಯಲ್ಲಿ ಯಾವುದೇ ಕೈಬರಹದ ಪಹಣಿ ಪುಸ್ತಕಗಳು ಇಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

ಅನುಮತಿ ಇಲ್ಲದೆ ತಿದ್ದುಪಡಿ?: ಸರ್ವೆ ನಂ. 110 ಗೋಮಾಳವಾಗಿದ್ದು, ಅಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ತೈಲಗೆರೆ ಗ್ರಾಮದ ರಾಜಸ್ವ ನಿರೀಕ್ಷಕ ಅವರ ಕುಟುಂಬಸ್ಥರ ಹೆಸರಿನಲ್ಲಿ ಹಾಗೂ 20 ಅನಾಮಧೇಯ ಹೆಸರಿನಲ್ಲಿ ಉಪತಹಶೀಲ್ದಾರ್‌ ಅವರ ಅನುಮತಿ ಇಲ್ಲದೆ, ತಹಶೀಲ್ದಾರ್‌ ಗಮನಕ್ಕೂ ತಾರದೆ ಪಹಣಿಗಳಲ್ಲಿ ತಿದ್ದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇಷ್ಟೆಲ್ಲಾ ಅವ್ಯವಹಾರ ಆಗಿರುವುದರಿಂದ ಕೂಡಲೇ ಅವರನ್ನು ಅಮಾನತ್‌ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇವರು ದೊಡ್ಡಬಳ್ಳಾಪುರ, ಹೊಸಕೋಟೆ ತಾಲೂಕಿನ ರಾಜಸ್ವ ನಿರೀಕ್ಷಕರಾಗಿದ್ದಾಗ ಅಮಾನತು ಗೊಂಡಿದ್ದರು. ಇವರಿಗೆ ತಹಶೀಲ್ದಾರ್‌ ಕೂಡ ನೋಟಿಸ್‌ ನೀಡಿದ್ದು, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕುಂದಾಣ ರಾಜಸ್ವ ನಿರೀಕ್ಷಕ ಪಹಣಿ ಪುಸ್ತಕದಲ್ಲಿ ಅನಧಿಕೃತ ಹೆಸರು ನಮೂದು ಮಾಡಿರುವ ಆರೋಪ ನನ್ನಗಮನಕ್ಕೆ ಬಂದಿದೆ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಇನ್ನೆರಡು-ಮೂರು ದಿನಗಳಲ್ಲಿ ಕ್ರಮ ಜರುಗಿಸಲಾಗುವುದು. -ಕೆ.ಶ್ರೀನಿವಾಸ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.