Devanahalli: ಜಿಲ್ಲೆಯಲ್ಲಿ ಡಯಾಲಿಸಿಸ್ ಯಂತ್ರ ಸಾಲುತ್ತಿಲ್ಲ
Team Udayavani, Dec 2, 2023, 12:23 PM IST
ದೇವನಹಳ್ಳಿ: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿಗೆ ತಾಂತ್ರಿಕ ಸಿಬ್ಬಂದಿ ಜತೆಗೆ ಯಂತ್ರಗಳ ಕೊರತೆ ಇದ್ದು, ರೋಗಿಗಳಿಗೆ ತೊಂದರೆಯಾಗುತ್ತಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಹೆಚ್ಚಿನ ಸೌಲಭ್ಯ ನೀಡಿ ಬಡವರಿಗೆ ಅನುಕೂಲ ಮಾಡಿಕೊಡಬೇಕು.
ಇತ್ತೀಚಿನ ದಿನಗಳಲ್ಲಿ ಕಿಡ್ನಿ ವೈಫಲ್ಯದಿಂದ ಸಾಕಷ್ಟು ಜನ ಬಳಲುತ್ತಿದ್ದು, ಅವರು ಡಯಾಲಿಸಿಸ್ ಮಾಡಿಸಿಕೊಳ್ಳಲು ಸರ್ಕಾರಿ ಆಸ್ಪತ್ರೆಯಲ್ಲಿ ವಿಳಂಬ ಆಗುತ್ತಿದೆ. ಇದರಿಂದ ಖಾಸಗಿ ಆಸ್ಪತ್ರೆಗೆ ಹೋಗಿ ದುಬಾರಿ ವೆಚ್ಚದಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಿದರೆ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸುವುದು ತಪ್ಪಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹೆಚ್ಚು ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಬೇಕು. ಯಂತ್ರಕ್ಕೆ ತಕ್ಕಂತೆ ವೈದ್ಯಕೀಯ ಸಲಕರಣೆಗಳು, ಹೆಚ್ಚುವರಿ ಸಿಬ್ಬಂದಿ ನಿಯೋಜಿಸಬೇಕು. ಡಯಾಲಿಸಿಸ್‌ಗೆ ಬೇಕಾದ ಸೌಲಭ್ಯಗಳನ್ನು ಸರ್ಕಾರ ನೀಡಬೇಕು ಎಂದು ಡಯಾಲಿಸಿಸ್ ರೋಗಿಗಳು ಹೇಳುತ್ತಾರೆ.
ಒಬ್ಬರಿಗೆ ಡಯಾಲಿಸಿಸ್ ಮಾಡಬೇಕಾದರೆ ಮೂರರಿಂದ ನಾಲ್ಕು ಗಂಟೆ ಬೇಕಾಗುತ್ತದೆ. ದಿನಕ್ಕೆ ಇಬ್ಬರಿಂದ ಮೂವರಿಗೆ ಮಾತ್ರ ಡಯಾಲಿಸಿಸ್ ಮಾಡಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 15 ಡಯಾಲಿಸಿಸ್ ಯಂತ್ರಗಳಿದ್ದು, ಅದರಲ್ಲಿ ದೇವನಹಳ್ಳಿಯಲ್ಲಿ 2 ಯಂತ್ರಗಳ ಪೈಕಿ ಒಂದು ಯಂತ್ರ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಹೊಸಕೋಟೆ ಮತ್ತು ನೆಲಮಂಗಲಗಳಲ್ಲಿ ದಾನಿಗಳ ಸಹಕಾರದಿಂದ ಡಯಾಲಿಸಿಸ್ ಯಂತ್ರಗಳನ್ನು ನೀಡಲಾಗಿದೆ. ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಆರು ಡಯಾಲಿಸಿಸ್ ಯಂತ್ರಗಳನ್ನು ಕೊಡಿಸಲು ಮುಂದೆ ಬಂದಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ 5 ಯಂತ್ರಗಳು ನಿರ್ವಹಿಸುತ್ತಿದೆ. ಹೆಚ್ಚಿನ ಯಂತ್ರಗಳನ್ನು ಅಳವಡಿಸಿದರೆ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ.
ಜಿಲ್ಲೆಯಲ್ಲಿ 15 ಡಯಾಲಿಸಿಸ್ ಯಂತ್ರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಂದ್ರಗಳಲ್ಲಿ ಡಯಾಲಿಸಿಸ್ ತಜ್ಞರು, ಡಯಾಲಿಸಿಸ್ ತಾಂತ್ರಿಕ ತಜ್ಞರು, ನರ್ಸ್‌ಗಳು, ಹಾಗೂ ಹೆಚ್ಚುವರಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ದೊಡ್ಡಬಳ್ಳಾಫುರದಲ್ಲಿ 5 ಯಂತ್ರ, ನೆಲಮಂಗಲ-3, ಹೊಸಕೋಟೆ-5 ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 15 ಡಯಾಲಿಸಿಸ್ ಯಂತ್ರಗಳಿವೆ. ದೇವನಹಳ್ಳಿ 2 ಯಂತ್ರಗಳ ಪೈಕಿ ಒಂದು ಯಂತ್ರ ಮಾತ್ರ ಕಾಲ ನಿರ್ವಹಿಸುತ್ತಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಕಷ್ಟು ವಿಳಂಬ ಆಗಲಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಹಣ ಕಟ್ಟಿ, ಡಯಾಲಿಸಿಸ್ ಮಾಡಿಸಿಕೊಳ್ಳಬೇಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಡಯಾಲಿಸಿಸ್ ಯಂತ್ರ ಅಳವಡಿಸಿ, ಸಿಬ್ಬಂದಿ ನೇಮಿಸಬೇಕು. ●ರವಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ರೋಗಿ
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಯಂತ್ರಗಳು ಕಾರ್ಯನಿರ್ವಹಿಸುತ್ತಿದೆ. ನಾಲ್ಕು ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಯಲ್ಲಿ 15 ಡಯಾಲಿಸಿಸ್ ಯಂತ್ರಗಳು ಇವೆ. ಜಿಲ್ಲೆಯಲ್ಲಿ ಎಲ್ಲಿಯೂ ಸಮಸ್ಯೆ ಇಲ್ಲ. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಮತ್ತಷ್ಟು ಯಂತ್ರ ಅಳವಡಿಸಲು ಚಿಂತಿಸಲಾಗುತ್ತಿದೆ. -ಡಾ| ಸುನಿಲ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ
-ಎಸ್.ಮಹೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.