Farmers: ಜಿಲ್ಲೆಯಲ್ಲಿ 38 ವಾರಕ್ಕಾಗುವಷ್ಟು ಮೇವು ಲಭ್ಯ


Team Udayavani, Oct 26, 2023, 3:29 PM IST

TDY-10

ದೇವನಹಳ್ಳಿ: ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಮಳೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಾನುವಾರು ಗಳ ಮೇವಿಗೆ ಸಮಸ್ಯೆ ಉಂಟಾಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 38 ವಾರಗಳಿಗಾಗುವಷ್ಟು ಮೇವು ಲಭ್ಯ ವಿರುವುದರಿಂದ ಯಾವುದೇ ಕೊರತೆ ಇಲ್ಲ. ಮಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ರಾಗಿ ಬೆಳೆ ಪ್ರಮುಖ ಬೆಲೆಯಾಗಿದ್ದು. ರಾಗಿ ಬೆಳೆದು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಮಳೆರಾಯ ಕೈ ಕೊಟ್ಟಿರುವುದರಿಂದ ರಾಗಿ ಬೆಳೆಗೆ ಇಳುವರಿ ಕುಸಿತಗೊಳ್ಳಲಿದೆ. ರಾಗಿ ಬರೆದಿದ್ದರೂ ಸಹ ರೈತರಿಗೆ ರಾಗಿ ಹುಲ್ಲು ಲಭ್ಯವಾಗುತ್ತದೆ. ಒಂದು ವಾರಗಳ ಕಾಲ ಉತ್ತಮ ಮಳೆಯಾದರೆ ಮಾತ್ರ ರಾಗಿ ಹುಲ್ಲು ಬರಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮುಂದಿನ ಬೇಸಿಗೆಗೆ ಮೇವಿಗೆ ಹೆಚ್ಚಿನ ಸಮಸ್ಯೆ ತೋರಿಸಬೇಕಾಗುತ್ತದೆ ಎಂದು ರೈತರು ಹೇಳುತ್ತಾರೆ.

ಪ್ರತಿ ದೇವರನ್ನು ಪೂಜಿಸುತ್ತಿದ್ದೇವೆ. ದೇವರನ್ನು ಬೇಡಿಕೊಳ್ಳುತ್ತಿದ್ದೇವೆ. ಮಳೆ ಬಾರಪ್ಪ ಬಾರಪ್ಪ ಎಂದು ಕರೆಯುತ್ತಿದ್ದರು. ಸಹ ಮಳೆ ಬರುತ್ತಿಲ್ಲ ಎಂದು ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಜಾನುವಾರುಗಳಿಗೆ ಅನುಗುಣವಾಗಿ ಸರಾಸರಿ 38 ವಾರಗಳಿಗಾಗುವಷ್ಟು ಮೇವು ಲಭ್ಯವಿದೆ. ಒಳ್ಳೆ ಮಳೆಯಾಗಿ ಹಾಗೆ ಇಳುವರಿ ಬಂದರೆ ಮುಂದಿನ ಬೇಸಿಗೆಯಲ್ಲಿ ಸಮಸ್ಯೆ ಕಾಣುವುದು ತಪ್ಪುತ್ತದೆ ಎಂಬ ಲೆಕ್ಕಾಚಾರ ವಾಗಿದೆ.

ಹೈನು ಉದ್ಯಮಕ್ಕೆ ಹೆಸರುವಾಸಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೈನು ಉದ್ಯಮಕ್ಕೆ ಹೆಸರುವಾಸಿಯಾಗಿದೆ. ಆಗಾಗ ಕಾಡುವ ಬರದಿಂದ ರೈತರು ಬೇವಿನ ಸಮಸ್ಯೆಯನ್ನು ಎದುರಿಸುತ್ತಲೇ ಇದ್ದಾರೆ. ಈ ಬಾರಿಯೂ ಅನಾವೃಷ್ಟಿಯಿಂದ ಬೆಳೆಗಳು ನಾಶವಾಗಿವೆ. ನೀವು ಒದಗಿಸುವ ರಾಗಿ ಮುಸುಕಿನ ಜೋಳ ಸೇರಿದಂತೆ ಹಲವು ಬೆಳೆಗಳು ಸಂಪೂರ್ಣವಾಗಿ ಕೈಕೊಟ್ಟಿವೆ. ಇದರಿಂದ ಮುಂಬರುವ ದಿನ ಗಳಲ್ಲಿ ಹಾಹಾಕಾರ ಉಂಟಾಗುವ ಆತಂಕ ರೈತರಲ್ಲಿದ್ದು, ಇದಕ್ಕೆ ಈಗಿನಿಂದಲೇ ಮೇವಿನ ದಾಸ್ತಾನು ಮಾಡಿಕೊಳ್ಳುವಲ್ಲಿ ರೈತ ನಿರತರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಶುಪಾಲನ ಇಲಾಖೆಯಿಂದ ಮೇವು ಉತ್ಪಾದನೆ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಿನಿ ಕಿಟ್‌ ತಳಿಸಿ ರೈತರಿಗೆ ನೀಡಲು ಮುಂದಾಗಿದೆ.

ಈ ಬಾರಿ ಬರಗಾಲ ಇರುವುದರಿಂದ ನೀರಿನ ಸೌಲಭ್ಯ ಹೊಂದಿರುವ ರೈತರಿಗೆ 40,000 ಮಿನಿ ಕಿಟ್‌ ವಿತರಿಸಲು ಸರ್ಕಾರಕ್ಕೆ ಪಶುಪಾಲನ ಇಲಾಖೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಕಳೆದ ಬಾರಿ 4493 ಮಿನಿ ಕಿಟ್‌ಗಳನ್ನು ನಾಲ್ಕು ತಾಲೂಕುಗಳಿಗೆ ವಿತರಿಸಲಾಗಿತ್ತು. ಜೋಳದ ಬೀಜಗಳನ್ನು ನೀಡಲಾಗುತ್ತಿದೆ.

ಹೈನುಗಾರಿಕೆ, ರೇಷ್ಮೆ ಎರಡು ಕಣ್ಣುಗಳಿದ್ದಂತೆ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಜಿಲ್ಲಾ ಕೇಂದ್ರ ಕಚೇರಿಗಳು ತಾಲೂಕಿಗೆ ಬಂದಿರುವುದು. ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಡಿಬಿ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಜಿಲ್ಲೆಯಲ್ಲಿ ಸಾಕಷ್ಟು ಭೂಮಿಗಳು ಭೂಸ್ವಾಧೀನವಾಗಿದ್ದರೂ ಸಹ ಜಿಲ್ಲೆಯ ರೈತರು ಇರುವ ಅಲ್ಪಸ್ವಲ್ಪದ ನೀರಿನಲ್ಲಿಯೇ ಹಸಿರು ಮೇವನ್ನು ಬೆಳೆಯುತ್ತಾರೆ. ತಾಲೂಕಿನಲ್ಲಿ ಇಂದಿಗೂ ಹೈನುಗಾರಿಕೆ ಮತ್ತು ರೇಷ್ಮೆ ರೈತರ ಪಾಲಿಗೆ ಎರಡು ಕಣ್ಣುಗಳಿದ್ದಂತೆ. ಬೋರ್‌ ವೆಲ್‌ ಗಳನ್ನು ಕೊರೆಸಿದರೆ 1200 ರಿಂದ 1500ಅಡಿಗೆ ಕೊರೆಸಿದರೂ ಸಹ ನೀರು ಸಿಗುವುದಿಲ್ಲ. ಕಳೆದ ವರ್ಷ ಉತ್ತಮ ಮಳೆಯಾಗಿರುವುದರಿಂದ ಮೇವಿನ ಸಮಸ್ಯೆ ಮತ್ತು ಕೆರೆಗಳಲ್ಲಿ ನೀರು ಇರುವುದರಿಂದ ಅಂತರ್ಜಲ ಮಟ್ಟ ಹೆಚ್ಚಳ ಹಾಗೂ ನೀರಿನ ಸಮಸ್ಯೆ ಹಾಗೂ ಮೇವಿನ ಸಮಸ್ಯೆ ಇಲ್ಲದಂತಾಗಿದೆ.

ಮಳೆ ಇಲ್ಲದೇ ಇರುವುದರಿಂದ ಮೇವಿಗೆ ಯಾವುದೇ ಸಮಸ್ಯೆ ಜಿಲ್ಲೆಯಲ್ಲಿ ಬಂದಿಲ್ಲ. 38 ವಾರಕ್ಕೆ ಆಗುವಷ್ಟು ಮೇವು ಸಂಗ್ರಹಿಸಲಾಗಿದೆ. ಮಳೆ ಬರದೇ ಇದ್ದರೆ ಮುಂದೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸ ಬೇಕಾಗುತ್ತದೆ. 40,000 ಮೇವಿನ ಮಿನಿ ಕಿಟ್‌ ವಿತರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. – ಡಾ.ಜಗದೀಶ್‌, ಉಪನಿರ್ದೇಶಕರು ಪಶುಪಾಲನ ಇಲಾಖೆ

ಮಳೆ ಇಲ್ಲದೆ ಬರಗಾಲವನ್ನು ಎದುರಿಸು ತ್ತಿದ್ದೇವೆ. ಮಳೆ ನಾಲ್ಕೈದು ದಿನದಲ್ಲಿ ಬರೆದಿದ್ದರೆ ಮೇವಿಗೆ ಸಮಸ್ಯೆ ಎದುರಿಸ ಬೇಕಾಗುತ್ತದೆ. ಅಂತರ್ಜಲ ಮಟ್ಟ ಕುಸಿಯ ತೊಡಗಿದೆ. ಮೇವಿನ ಸಮಸ್ಯೆ ಎದುರಾಗುವ ಲಕ್ಷಣಗಳು ಗೋಚರಿಸುತ್ತಿದ್ದು, ಇದರಿಂದ ಮೇವಿಗೆ ಈಗ ಹೆಚ್ಚಿನ ಬೇಡಿಕೆ ಶುರುವಾಗಿದೆ. ● ರಾಜಣ್ಣ, ರೈತ

– ಎಸ್‌.ಮಹೇಶ್‌

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.