ಕೆರೆ ಸಂಜೀವಿನಿ ಯೋಜನೆ ಅಡಿ 650 ಕೆರೆ ಅಭಿವೃದ್ಧಿ : ಅಪರ ಜಿಲ್ಲಾಧಿಕಾರಿ
Team Udayavani, Feb 8, 2021, 1:02 PM IST
ದೇವನಹಳ್ಳಿ: ಅಳಿವಿನ ಅಂಚಿನಲ್ಲಿರುವ ಕೆರೆಗಳಿಗೆ ಮೂಲ ಸ್ವರೂಪ ನೀಡಿ, ಜಲಸಂರಕ್ಷಣೆ ಮಾಡಲು ಸ್ಥಳೀಯರ ಸಹಕಾರ ಅತಿಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. ನಾಯಕ ತಿಳಿಸಿದರು.
ತಾಲೂಕಿನ ವಿಶ್ವನಾಥಪುರ ಗ್ರಾಮದ ಕೆರೆ ಅಂಗಳದಲ್ಲಿ ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಯೋಜನೆಯ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕರೆ ಹೂಳೆತ್ತಿದರೆ ಅಂತರ್ಜಲಮಟ್ಟ ಹೆಚ್ಚಿ ಜನ-ಜಾನುವಾರು, ಪ್ರಾಣಿ ಸಂಕುಲಕ್ಕೆ ನೀರು ದೊರೆಯಲಿದೆ. ಜಿಲ್ಲೆಯಲ್ಲಿ ಅಂತರ್ಜಲ ಪ್ರಮಾಣ ನಿರೀಕ್ಷೆಗಿಂತಲೂ ಕೆಳಮಟ್ಟಕ್ಕೆ ಹೋಗುತ್ತಿದೆ. ಜಿಲ್ಲೆಯಲ್ಲಿ 650 ಕೆರೆ ಗುರುತಿಸಿದೆ. ಕೆರೆ ಸಂಜೀವಿನಿ ಯೋಜನೆಯಲ್ಲಿ ಅಭಿವೃದ್ಧಿ ಪಡಿಸಲು ಜಿಲ್ಲಾಡಳಿತಮುಂದಾಗಿದೆ ಎಂದರು.
30 ಕೆರೆ ಅಭಿವೃದ್ಧಿ: ಹೆಬ್ಟಾಳ ನಾಗವಾರ, ಕೆರೆಗಳಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಈಗಾಗಲೇ 9 ಕೆರೆಗಳಿಗೆ ತುಂಬಿಸಲು ಸರ್ಕಾರ ಮುಂದಾಗಿದೆ. ಸುಮಾರು 2 ವರ್ಷದ ಹಿಂದೆ ಸಿಎಸ್‌ಆರ್ ಯೋಜನೆಯಡಿ ಶೇ.2ರಷ್ಟು ಖಾಸಗಿ ಕಂಪನಿಗಳ ಅನುದಾನ ಸ್ಥಳೀಯರ, ಗ್ರಾಮಸ್ಥರ ಹಾಗೂ ದಾನಿಗಳ ಸಹಕಾರದಿಂದ 30 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.
ಇದನ್ನೂ ಓದಿ :ವಿಧಾನಸೌಧದಲ್ಲಿ ಒಡೆಯರ್ ಭಾವಚಿತ್ರ ಅಳವಡಿಕೆಗೆ ಸ್ಪೀಕರ್ ಸಕಾರಾತ್ಮಕ ಸ್ಪಂದನೆ: ಸೋಮಶೇಖರ್
ಹೂಳೆತ್ತುವ ಕಾರ್ಯ: ಜಿಲ್ಲಾ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ನಾಯಕ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಗ್ರಾಮೀಣ ಭಾಗದ ಕೆರೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. 42 ಎಕರೆ ವಿಸ್ತೀರ್ಣದ ಕೆರೆಯಲ್ಲಿ 15 ಲಕ್ಷ ರೂ.ವೆಚ್ಚದ ಹೂಳು ತೆಗೆಯುವ ಕಾರ್ಯ ಆಗುತ್ತಿದೆ ಎಂದರು.
ವಿಶ್ವನಾಥಪುರ ಗ್ರಾಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷ ವಿನಯ್ ಕುಮಾರ್, ತಾಪಂ ಸದಸ್ಯೆ ಶೈಲಜಾ ಜಗದೀಶ್, ಜಿಲ್ಲಾಧಿಕಾರಿ ಕಚೇರಿಯ ಆರ್‌ಎಚ್‌ಎಂ ಪಿ. ಗಂಗಾಧರ್, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಅಕ್ಷತಾ ರೈ, ಪಿಡಿಒ ಉಷಾ, ಕಾರ್ಯದರ್ಶಿ ಪದ್ಮ, ಮುಖಂಡ ಮನಗೊಂಡನಹಳ್ಳಿ ಜಗದೀಶ್, ನಾರಾಯಣಸ್ವಾಮಿ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.