ಲಕ್ಷ್ಮೀನರಸಿಂಹ ಸ್ವಾಮಿ ಅದ್ದೂರಿ ಬ್ರಹ್ಮರಥೋತ್ಸವ

Team Udayavani, Feb 16, 2019, 7:30 AM IST

lakshmi.jpg

ನೆಲಮಂಗಲ: ಪಟ್ಟಣದ ಬಳಿಯ ಕಮ್ಮಸಂದ್ರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ರಾಜ್ಯದ ಸಾವಿರಾರು ಭಕ್ತರು ಭಾಗವಹಿಸಿದ್ದರು. ಅಗಸ್ತ್ಯ ಮುನಿಗಳ ಕಾಲದಲ್ಲಿ ಪ್ರತಿಷ್ಠಾಪಿಸಲಾಗಿರುವ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇಗುಲ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿ ಕಮ್ಮಸಂದ್ರ ಗ್ರಾಮದಲ್ಲಿದ್ದು, 18ನೇ ವರ್ಷದ ಬ್ರಹ್ಮರಥೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು.

ವಿಶೇಷ ಪೂಜೆ: ಬ್ರಹ್ಮರಥೋತ್ಸವದ ಅಂಗವಾಗಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿಗೆ ಗರುಡೋತ್ಸವ, ನಿತ್ಯ ಹೋಮ, ಶ್ರೀ ಸ್ವಾಮಿಗೆ ಕಲ್ಯಾಣೋತ್ಸವ, ಅಶ್ವಾರೋಹಣೋತ್ಸವ, ಶುಕ್ರವಾರ ಬೆಳಗ್ಗೆ 6ಕ್ಕೆ ಸುಪ್ರಭಾತ ಸೇವೆ, ರಥಸ್ನಪನ, ರಥಬಲಿ, ಮಹಾ ಸುರ್ದಶನ ಹೋಮ, ವಹಿತ ಹೋಮ, ಮಂಟಪೋತ್ಸವ ಸೇವೆ ನಡೆಸಿ, ನಂತರ ಶ್ರೀ ಸ್ವಾಮಿಗೆ ವಿಶೇಷ ಪುಷ್ಪಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು.

ಬ್ರಹ್ಮ ರಥೋತ್ಸವ: ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿಗೆ ಪುರಾತನ ಕಾಲದಿಂದ ಅದ್ದೂರಿ ಜಾತ್ರೆ ಮಾಡಲಾಗುತ್ತಿದೆ. 18 ವರ್ಷಗಳಿಂದ ಬ್ರಹ್ಮರಥೋತ್ಸವ ನಡೆಯುತ್ತಿದ್ದು, ಶುಕ್ರವಾರ ಮಧ್ಯಾಹ್ನ 12.30ಕ್ಕೆ ಅಭಿಜಿತ್‌ ಲಗ್ನದಲ್ಲಿ ರಥೋತ್ಸವ ಹಾಗೂ ರಾತ್ರಿ 7 ಗಂಟೆಗೆ ನಡೆದ ಮುತ್ತಿನ ಪಲ್ಲಕ್ಕಿ ಉತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳ ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದರು.

ಅಧಿಕಾರಿಗಳ ಪರಿಶೀಲನೆ: ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಭಕ್ತರಿಗಾಗಿ ತಯಾರಿಸಿದ್ದ ಪ್ರಸಾದವನ್ನು ತಾಲೂಕು ಅಧಿಕಾರಿಗಳು ಪರಿಶೀಲಿಸಿದರು. ಆ ನಂತರ ಭಕ್ತರಿಗೆ ಪ್ರಸಾದ ನಿಯೋಗ ಮಾಡಲಾಯಿತು.  

ಭಕ್ತರ ಸೇವೆ: ಬ್ರಹ್ಮರಥೋತ್ಸವದ ಅಂಗವಾಗಿ ಕಮಾನು ಸೇವೆ, ಹೂವಿನ ಸೇವೆ, ಹಾಲಿನ ಸೇವೆ, ಲಡ್ಡು ಸೇವೆ, ತುಪ್ಪದ ಸೇವೆ, ಹಣ್ಣಿನ ಸೇವೆ ಸೇರಿದಂತೆ ಶ್ರೀ ಸ್ವಾಮಿಗೆ ಭಕ್ತರು ವಿವಿಧ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪಂಡಿತ ವಿಜಯ್‌ಕುಮಾರ್‌, ಮುಖಂಡರಾದ ಕೇಶವಮೂರ್ತಿ, ಗಂಗಾಧರ್‌, ಶಿವಣ್ಣ, ಗೋಪಾಲ್‌, ಕೆಂಚಪ್ಪ, ತಿಮ್ಮೇಗೌಡ, ಬೈರಪ್ಪ, ತಮ್ಮಯ್ಯ ಮತ್ತಿತರರು ಹಾಜರಿದ್ದರು. 

ಟಾಪ್ ನ್ಯೂಸ್

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

sanjeev-ramya

Ramya: ಗೆಳೆಯನ ಜತೆಗಿನ ರಮ್ಯಾ ಫೋಟೋ ವೈರಲ್‌

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.