500 ಮನೆ ನಿರ್ಮಾಣಕ್ಕೆ ಭೂಮಿ ಪೂಜೆ


Team Udayavani, Feb 1, 2019, 7:04 AM IST

500mane.jpg

ದೊಡ್ಡಬಳ್ಳಾಪುರ: ನಗರದ ಕೊಳಗೇರಿಗಳ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನೀಡಲಾ ಗಿರುವ 500 ಮನೆಗಳ ಭೂಮಿ ಪೂಜೆಯನ್ನು ಫೆ.4ರಂದು ನೆರವೇರಿಸಲಾಗು ವುದು ಎಂದು ಶಾಸಕ ಟಿ.ವೆಂಕಟರಮಣಯ್ಯ ಭರವಸೆ ನೀಡಿದರು. ನಗರಸಭೆ ವ್ಯಾಪ್ತಿಯ ಕನಕದಾಸ ನಗರ, ಭುವನೇಶ್ವರಿ ನಗರ ವಾರ್ಡ್‌ಗಳಿಗೆ ಭೇಟಿ ನೀಡಿದ ಅವರು, ಸಾರ್ವಜನಿಕರ ಕುಂದುಕೊರತೆ ವಿಚಾರಿಸಿ ಮಾತನಾಡಿದರು.

ವೀರಭದ್ರನಪಾಳ್ಯ ಹಾಗೂ ಕಚೇರಿಪಾಳ್ಯದ ವ್ಯಾಪ್ತಿಯಲ್ಲಿನ ನಿವಾಸಿಗಳಿಗಾಗಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 500 ಮನೆಗಳ ನಿರ್ಮಾಣಕ್ಕೆ ಸರಕಾರ ಅವಕಾಶ ಕಲ್ಪಿಸಿದೆ. ಸೋಮವಾರ ನಗರಸಭೆ ಅಧ್ಯಕ್ಷರು, ಪೌರಾ ಯುಕ್ತರು ಹಾಗೂ ಸ್ಥಳೀಯ ಸದಸ್ಯರ ಸಮ್ಮುಖ ದಲ್ಲಿ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ಸದಸ್ಯರು ಸಮರ್ಪ ಕವಾಗಿ ಕಾರ್ಯನಿರ್ವಹಿಸಿದರೆ ಜನತೆ ಸಮಸ್ಯೆಯನ್ನು ಶಾಸಕರ ವರೆಗೆ ತರುವಂತಹ ಸ್ಥಿತಿ ಬರುವುದಿಲ್ಲ. ನಗರದ ಅಭಿವೃದ್ಧಿಗೆ ಕಟಿಬದ್ಧ ವಾಗಿದ್ದು, ನಗರೋತ್ಥಾನ ಯೋಜನೆಯಡಿ ಸುಮಾರು 8 ಕೋಟಿ ರೂ.ಅನುದಾನದಲ್ಲಿ ವಾರ್ಡ್‌ವಾರು ಸಮಸ್ಯೆ ಆಲಿಸಿ ಕಾಮಗಾರಿ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಈ ವರೆಗೆ 13 ವಾರ್ಡ್‌ ಮುಗಿಸಿದ್ದು, ಪ್ರತಿನಿತ್ಯ ಎರಡು ವಾರ್ಡ್‌ ಗಳಿಗೆ ಭೇಟಿ ನೀಡಲಾಗುವುದೆಂದು ತಿಳಿಸಿದರು.

ಈ ವೇಳೆ ಸಾರ್ವಜನಿಕರು ರಸ್ತೆ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನಕ್ಕೆ ತಂದಿದ್ದು, ಕನಕದಾಸ ರಸ್ತೆಯ ಚರಂಡಿ ಕಾಮಗಾರಿ ಸಮರ್ಪಕವಾಗಿಲ್ಲ. ಹಾಗಾಗಿ, ರಸ್ತೆ ಕಾಮಗಾರಿ ಪೂರ್ಣಗೊಂಡ ನಂತರ ಮಳೆ ನೀರು ಮನೆಗಳಿಗೆ ನುಗ್ಗುವ ಆತಂಕವಿದೆ. ಸಮರ್ಪಕವಾಗಿ ಕಾಮಗಾರಿ ನಡೆಸುವಂತೆ ಇಂಜಿನಿಯರ್‌ಗಳಿಗೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು.

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಶಾಸಕರ ಅನುದಾನದಲ್ಲಿ ರಸ್ತೆ ಕಾಮಗರಿಗಳಿಗೆ ಪಟ್ಟಿ ಮಾಡುವಂತೆ ಹಾಗೂ ಮನೆಗಳಿಗೆ ನೀರು ನುಗ್ಗದಂತೆ ಚರಂಡಿ ಕಾಮಗಾರಿ ನಡೆಸಲು ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಶಿವಣ್ಣರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮೀ ನಟರಾಜ್‌, ನಾಮಿನಿ ಸದಸ್ಯ ಆಂಜನಮೂರ್ತಿ, ನಗರ ಬ್ಲಾಕ್‌ ಅಧ್ಯಕ್ಷ ಕೆ.ಜಿ.ಅಶೋಕ್‌, ಪ್ರಧಾನ ಕಾರ್ಯದರ್ಶಿ ಯೋಗ ನಟರಾಜ್‌, ಯುವ ಘಟಕದ ಅಧ್ಯಕ್ಷ ಜವಾಜಿ ರಾಜೇಶ್‌, ಎಸ್ಸಿ ಘಟಕದ ಅಧ್ಯಕ್ಷ ಮುನಿರಾಜ್‌, ನಗರಸಭೆ ಮಾಜಿ ಸದಸ್ಯ ಹೆಮಂತರಾಜ್‌, ಮುಖಂಡರಾದ ಕಾಂತರಾಜ್‌, ಪಾಂಡು, ಅಶ್ವತ್ಥ್, ಭಾರ್ಗವ, ರಾಮಾಂಜಿನಪ್ಪ, ಶೇಖರ್‌, ಚಂದ್ರಣ್ಣ, ಮಂಜು ನಾಥ್‌, ಭವಾನಿ, ದೊಡ್ಡಯ್ಯ ಸೇರಿದಂತೆ ಸ್ಥಳೀಯ ನಾಗರಿಕರು, ಮತ್ತಿತರರು ಶಾಸಕರ ಜತೆಗೆ ಹಾಜರಿದ್ದರು.

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.