ಜನರ ಸಮಸ್ಯೆಯನ್ನೇ “ಬಿಟ್’ ಬಿಟ್ಟ ವಿಪಕ್ಷಗಳು
ಬಿಟ್ ಕಾಯಿನ್ ವಿಚಾರ ಬಿಟ್ಟು ಜನರ ಸಮಸ್ಯೆ ಬಗ್ಗೆ ಚರ್ಚಿಸಿ: ಕೇಂದ್ರ ಸಚಿವ ನಾರಾಯಣಸ್ವಾಮಿ ಸಲಹೆ
Team Udayavani, Nov 14, 2021, 11:58 AM IST
ದೇವನಹಳ್ಳಿ: ಗ್ರಾಮೀಣ ಪ್ರದೇಶಗಳಲ್ಲಿನ ಮೂಲ ಸೌಕರ್ಯ ಕೊರತೆ ಕುರಿತು ಆಗುತ್ತಿರುವ ಲೋಪದೋಷಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಬದಲಾಗಿ ಬಿಟ್ ಕಾಯಿನ್ ವಿಚಾರದಲ್ಲಿ ವಿರೋಧ ಪಕ್ಷಗಳು ಹೆಚ್ಚು ಸಕ್ರಿಯವಾಗಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಆರೋಪಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಅಂದರೆ ಏನು ಎಂದು ಜನರಿಗೆ ತಿಳಿದಿಲ್ಲ. ಶೇ. 95ರಷ್ಟು ಜನರಿಗೆ ಬಿಟ್ ಕಾಯಿನ್ ಬಗ್ಗೆ ಸರಿಯಾದ ಮಾಹಿತಿ ಯಿಲ್ಲ. ಜನ ಏನು ಎಂದು ಕೇಳುತ್ತಾರೆ. ರಾಜಕೀಯ ಕ್ಕಾಗಿ ಏನೆಲ್ಲ ಮಾತನಾಡುತ್ತಾರೆ ಎಂಬುದು ತಿಳಿಯುತ್ತಿದೆ. ಬಹಳಷ್ಟು ದಿನಗಳಿಂದ ಶೋಷಿತ ವರ್ಗಗಳು, ಶೋಷಣೆಗೆ ಒಳಗಾದವರ ಬಗ್ಗೆ ರಾಜಕಾರಣಿಗಳು ಚರ್ಚೆ ಮಾಡುವುದಿಲ್ಲ ಎಂದರು.
ಇದನ್ನೂ ಓದಿ:- ಭಾರತ ವಿರುದ್ಧದ ಟೆಸ್ಟ್ ಸರಣಿಗೆ ತಂಡದಲ್ಲಿ ಬದಲಾವಣೆ ಮಾಡಿಕೊಂಡ ನ್ಯೂಜಿಲ್ಯಾಂಡ್
ಸ್ವಾತಂತ್ರ್ಯ ಬಂದು 75 ವರ್ಷವಾದರೂ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ, ವಸತಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬಡವರು ಸ್ವಾಭಿಮಾನದಿಂದ ಬದುಕು ಸಾಗಿಸುತ್ತಿದ್ದಾರೆ. ಇಂತಹವರ ಸಮಸ್ಯೆ ಬಗ್ಗೆ ಚರ್ಚಿಸುವುದರ ಬದಲು ಬಿಟ್ ಕಾಯಿನ್ ಸೇರಿದಂತೆ ವಿವಿಧ ವಿಚಾರ ಪ್ರಸ್ತಾಪಿಸುತ್ತಿದ್ದು, ಜನರ ಸಮಸ್ಯೆಗಳ ಬಗ್ಗೆ ವಿಪಕ್ಷಗಳು ಚರ್ಚೆ ಮಾಡಲಿ ಎಂದು ಸಲಹೆ ನೀಡಿದರು.
ಸರ್ಕಾರದ ಕಾರ್ಯಕ್ರಮ ಭವನದಲ್ಲೇ ಮಾಡಿ: ಅಂಬೇಡ್ಕರ್ ಮತ್ತು ಜಗಜೀವನ್ ರಾಮ್ ಭವನ ಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಜಿಲ್ಲಾಧಿ ಕಾರಿಗೆ ಕೀ ಅನ್ನು ನೀಡಿದ್ದಾರೆ. ಶೋಷಿತ ವರ್ಗದ ಜನರ ಕಾರ್ಯಕ್ರಮ ಹಾಗೂ ಸಂಘಟನೆಗಳ ಮುಖಂ ಡರ ಕಾರ್ಯಕ್ರಮಗಳಿಗೆ ನೀಡು ವಂತಾಗಬೇಕು. ಸರ್ಕಾರಿ ಅಧಿಕಾರಿಗಳು ಸರ್ಕಾರದ ವಿವಿಧ ಕಾರ್ಯ ಕ್ರಮಗಳನ್ನು ಅಲ್ಲಿಯೇ ಮಾಡ ಬೇಕು. ಕೆಲವು ಅಧಿ ಕಾರಿಗಳು ಅಲ್ಲಿ ಕಾರ್ಯಕ್ರಮ ಮಾಡಲು ಹಿಂಜರಿಯುತ್ತಾರೆ.
ಅಧಿಕಾರಿಗಳು ಅಲ್ಲಿ ಕಾರ್ಯಕ್ರಮ ಮಾಡಿದರೆ ದೇಶವ್ಯಾಪ್ತಿ ಮಾದರಿಯಾಗುತ್ತದೆ ಎಂದು ಹೇಳಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಸಂಘಟನಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್, ತಾಲೂಕು ದಲಿತ ಸಂಘರ್ಷ ಸಮಿತಿ ಪ್ರಧಾನ ಸಂಚಾಲಕ ಅತ್ತಿಬೆಲೆ ನರಸಪ್ಪ, ವಿಜಯಪುರ ಪುರಸಭಾ ಸದಸ್ಯ ನಾರಾಯಣಸ್ವಾಮಿ, ಜಿಲ್ಲಾ ಸಂಚಾಲಕ ಬೀಸನಹಳ್ಳಿ ಮೂರ್ತಿ, ಜಿಲ್ಲಾ ಸಂಘಟನಾ ಸಂಚಾಲಕ ಆವತಿ ತಿಮ್ಮರಾಯಪ್ಪ, ಜೋಗಿಹಳ್ಳಿ ನಾರಾಯಣ ಸ್ವಾಮಿ ಮತ್ತಿತರರು ಇದ್ದರು.
ಮುಖ್ಯಮಂತ್ರಿ ಬದಲಾವಣೆ ಇಲ್ಲ: ಕೇಂದ್ರ ಸಚಿವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ಮೇಲೆ ಹೊಸ ಹೊಸ ಕಾರ್ಯಕ್ರಮ ಮಾಡುತ್ತಿದ್ದಾರೆ. ಕೆಲವು ಬದಲಾವಣೆಗಳನ್ನು ಸಹ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.