ರೀಲರ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ರೈತರ ಮೇಲಿನ ಗೂಂಡಾಗಿರಿ ಅಕ್ಷಮ್ಯವಾಗಿದ್ದು, ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ

Team Udayavani, Jan 20, 2022, 5:34 PM IST

ರೀಲರ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಚನ್ನಪಟ್ಟಣ: ರಾಮನಗರ ರೇಷ್ಮೆ ಗೂಡಿನ ಮಾರುಕಟ್ಟೆ ಯಲ್ಲಿ ರೈತರ ಮೇಲೆ ರೀಲರುಗಳು ನಡೆಸಿದ ದೌರ್ಜನ್ಯ ದಬ್ಟಾಳಿಕೆ ಖಂಡಿಸಿ ಹಾಗೂ ಹಲ್ಲೆ ನಡೆಸಿದ ರೀಲರ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ಯುವಘಟಕದ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಬಿಜೆಪಿ ರೈತಮೋರ್ಚಾ ತಾಲೂಕು ಅಧ್ಯಕ್ಷ ಬುಕ್ಕ ಸಾಗರ ಕುಮಾರ್‌ ನೇತೃತ್ವದಲ್ಲಿ ತಹಶೀಲ್ದಾರ್‌ ಕಚೇರಿಗೆ ತೆರಳಿದ ರೈತಮೋರ್ಚಾ ಕಾರ್ಯಕರ್ತರು, ತಹಶೀಲ್ದಾರ್‌ ಪರವಾಗಿ ಕಚೇರಿ ಶಿರಸ್ತೇದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿ, ಕೂಡಲೇ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕಾನೂನು ಕ್ರಮ ಜರುಗಿಸ ಬೇಕು. ಯಾವುದೇ ಕಾರಣಕ್ಕೂ, ಈ ವಿಚಾರದಲ್ಲಿ ಲೋಪವೆಸಗಿ ರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ
ಆಗ್ರಹಿಸಿದರು.

ಗೂಂಡಾಗಿರಿ ಸಹಿಸಲ್ಲ: ಈ ಸಂದರ್ಭದಲ್ಲಿ ಮಾತನಾಡಿದ ರೈತಮೋರ್ಚಾ ಅಧ್ಯಕ್ಷ ಬುಕ್ಕಸಾಗರ ಕುಮಾರ್‌, ಮಾರುಕಟ್ಟೆಗೆ ಗೂಡು ತರುವ ರೈತರು, ಕಷ್ಟಪಟ್ಟು ಬೆಳೆದ ಗೂಡನ್ನು ತರುತ್ತಾರೆ. ಇದನ್ನು ಅಲ್ಲಿನ ರೀಲರ್‌ ಗಳು ಕಳ್ಳಮಾರ್ಗದಲ್ಲಿ ಕಸಿಯುವುದು, ಪ್ರಶ್ನಿಸುವ ರೈತರ ಮೇಲೆ ಹಲ್ಲೆ ಮಾಡುವುದು ಸೇರಿದಂತೆ ರಾಮ ನಗರ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ರೈತರ ಮೇಲಿನ ಗೂಂಡಾಗಿರಿ ಅಕ್ಷಮ್ಯವಾಗಿದ್ದು, ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಕಾನೂನು ಕ್ರಮ ಜರುಗಿಸಿ: ಕೋವಿಡ್‌ ಹಿನ್ನೆಲೆ ಸರಳವಾಗಿ ನಮ್ಮ ಪ್ರತಿಭಟನೆ ನಡೆಸುತ್ತಿದ್ದೇವೆ. ಇಲ್ಲವಾದಲ್ಲಿ ನಮ್ಮ ರೈತ ಘಟಕದ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುತಿತ್ತು ಎಂದು ಎಚ್ಚರಿಸಿದರು. ಜಿಲ್ಲಾಡಳಿತ ಈ ವಿಚಾರದಲ್ಲಿ ಉದಾಸೀನ ಮಾಡದೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ನಿಂಗೇಗೌಡ, ಉಪಾಧ್ಯಕ್ಷ ನೆರಳೂರು ರಾಮೇಗೌಡ, ಮೈಲನಾಯಕನ ಹೊಸಹಳ್ಳಿ ಉಮೇಶ್‌, ಕಾರ್ಯದರ್ಶಿ ವಿಜ ಯ್‌ ಕುಮಾರ್‌ ಹಾರೋಕೊಪ್ಪ, ಜಿಲ್ಲಾಕಾರ್ಯದರ್ಶಿ ಗರಕಹಳ್ಳಿ ಸಿದ್ದಪ್ಪ , ಯುವಮೋರ್ಚಾ ಅಧ್ಯಕ್ಷ ನಾಗವಾರ ಶಿವಕುಮಾರ್‌, ಕೋಟೆ ಚೇತನ್‌, ತಾಲೂಕು ಬಿಜೆಪಿ ಕಾರ್ಯದರ್ಶಿ ರಾಂಪುರ ಸತೀಶ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

7

BBK11: ತಾಯಿಯನ್ನು ನೆನೆದು ಬಿಗ್‌ ಬಾಸ್‌ ವೇದಿಕೆಯಲ್ಲೇ ಕಣ್ಣೀರಿಟ್ಟ ಕಿಚ್ಚ ಸುದೀಪ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

25-kota

Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.