ಸಾರ್ವಜನಿಕರೇ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

Team Udayavani, Aug 28, 2022, 5:11 PM IST

TDY-15

ದೇವನಹಳ್ಳಿ: ಗಣಪತಿ ಕೂರಿಸುವುದಕ್ಕೆ ಅನುಮತಿಗಾಗಿ ತಾಲೂಕಿನಲ್ಲಿ ಒಂದೇ ಸೂರಿನಡಿಯಲ್ಲಿ ಅನುಮತಿ ಪಡೆಯಲು ಏಕಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಬೇಕು ಎಂದು ತಹಶೀಲ್ದಾರ್‌ ಶಿವರಾಜ್‌ ತಿಳಿಸಿದರು.

ಪಟ್ಟಣದ ತಾಲೂಕು ಆಡಳಿತ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಪೊಲೀಸ್‌ ಇಲಾಖೆ ಮತ್ತು ಪುರಸಭಾ ಅಧಿಕಾರಿಗಳೊಂದಿಗೆ ಗೌರಿ-ಗಣೇಶ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಸುತ್ತೋಲೆ ಹೊರಡಿಸಿದೆ. ಅದರಂತೆ ಪ್ರತಿ ಅಧಿಕಾರಿಗಳು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲಾ ಪರವಾನಗಿಯನ್ನು ಒಂದೇ ಕಚೇರಿಯಲ್ಲಿ ಸಿಗುವಂತೆ ವ್ಯವಸ್ಥೆ ಕಲ್ಪಿಸಿ ಕೊಡಲಾಗಿದೆ ಎಂದರು.

ಎಲ್ಲಾ ಇಲಾಖೆ ಅಧಿಕಾರಿಗಳು ಒಂದೇ ಕಡೆ ಕೂತು ದೇವನಹಳ್ಳಿ, ವಿಜಯಪುರ, ವಿಶ್ವನಾಥಪುರ ಮತ್ತು ಚನ್ನರಾಯಪಟ್ಟಣ ಪೊಲೀಸ್‌ ಠಾಣೆಯಲ್ಲಿ ಏಕಗವಾಕ್ಷಿ ತೆರೆದು ಕಂದಾಯ, ಪುರಸಭೆ, ಗ್ರಾಪಂ, ಬೆಸ್ಕಾಂ ಮತ್ತು ಇತರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಪರವಾನಗಿಯನ್ನು ನೀಡುವಂತೆ ಮಾಡಲಾಗುತ್ತಿದೆ. ಇದಕ್ಕೆ ಏಕಗವಾಕ್ಷಿ ಕೇಂದ್ರಗಳನ್ನು ತಾಲೂಕಿನ ಪೊಲೀಸ್‌ ಠಾಣೆಗಳಲ್ಲಿ ತೆರೆಯಲಾಗುತ್ತಿದೆ ಎಂದರು.

ಮಣ್ಣಿನ ಗಣಪನ ಆರಾಧನೆ: ಪಿಒಪಿ ಗಣೇಶ ಮೂರ್ತಿ ತಯಾರಿಸುವುದು ಹಾಗೂ ಮಾರಾಟವನ್ನು ಸರ್ಕಾರ ನಿಷೇಧಿಸಿದೆ. ತಾಲೂಕಿನಲ್ಲಿ ಜನ ಬಣ್ಣರಹಿತ ಮಣ್ಣಿನ ಗಣಪನ ಆರಾಧನೆಯ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು. ಸಾರ್ವಜನಿಕ ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಹ್ವಾನ ಕೊಡಬಾರದು. ಕೆರೆಗಳಲ್ಲಿ ಮಳೆಯಿಂದ ಹೆಚ್ಚು ಕೆರೆ ತುಂಬಿರುವುದರಿಂದ ಜಲ ಜೀವರಾಶಿ ಇರುವುದರಿಂದ ಕೆರೆಗಳಲ್ಲಿ ಗಣಪತಿ ವಿಸರ್ಜನೆಗೆ ನಿರ್ಬಂಧ ಹೇರಲಾಗಿದೆ ಎಂದರು.

ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಿ: ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆ ಮಾಡಬೇಕು. ಡ್ರಮ್‌ ಮತ್ತು ಪುರಸಭೆ ಮತ್ತು ಅಧಿಕಾರಿ ವರ್ಗ ಸೂಚಿಸುವ ಜಾಗದಲ್ಲಿ ಗಣಪತಿ ವಿಸರ್ಜನೆ ಮಾಡಬೇಕು. ಸರ್ಕಾರ ಹೊರಡಿಸಿರುವ ಕೆಲವು ಮಾರ್ಗದರ್ಶನಗಳನ್ನು ಪಾಲಿಸಲು ಕಡ್ಡಾಯವಾಗಿ ಅಧಿಕಾರಿಗಳು ಪಾಲಿಸುವಂತೆ ಸೂಚಿಸಬೇಕು. ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಸಲು ಸೂಚಿಸಬೇಕು ಎಂದರು.

ಸಿಸಿ ಕ್ಯಾಮೆರಾ ಅಳವಡಿಸಿ: ಧಾರ್ಮಿಕ ನಾಯಕರನ್ನು ಕರೆಸಿ ಸಭೆಯನ್ನು ಈಗಾಗಲೇ ಮಾಡಲಾಗಿದೆ. ಯಾವ ಸೂಕ್ಷ್ಮ ಪ್ರದೇಶಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಕರೇ ಖುದ್ದಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ. ಈ ಬಾರಿಯ ಗಣೇಶ ಚತುರ್ಥಿ ಯಶಸ್ವಿಯಾಗಿ ನಡೆಯುವಂತಾಗಲಿ ಎಂದು ತಿಳಿಸಿದರು.

ಪೊಲೀಸ್‌ ಇಲಾಖೆ ಅಧಿಕಾರಿ ರಮೇಶ್‌, ನಾಗಪ್ಪ ಅಂಬಿಕೇರ್‌, ವಿರೇಂದ್ರ ಪ್ರಸಾದ್‌, ಪಿಎಸ್‌ಐ ಶಿವಪ್ಪ, ಶರಣಪ್ಪ, ಈರಮ್ಮ, ನಾಗರಾಜ್‌, ದೇವನಹಳ್ಳಿ ಪುರಸಭಾ ಮುಖ್ಯಾಧಿಕಾರಿ ಎ.ಎಚ್‌. ನಾಗರಾಜ್‌, ವಿಜಯಪುರ ಮುಖ್ಯಾಧಿಕಾರಿ ಮೋಹನ್‌ಕುಮಾರ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.