ಕಾನೂನಿನ ಅರಿವು ಎಲ್ಲರಿಗೂ ಇರಲಿ

ನ್ಯಾಯಾಧೀಶ ತ್ಯಾಗರಾಜ್‌ ಇನವಳ್ಳಿ ಅಭಿಮತ  ಬೃಹತ್‌ ಕಾನೂನು ಕಾರ್ಯಾಗಾರ, ಪುಸ್ತಕ ಪ್ರದರ್ಶನ

Team Udayavani, Nov 14, 2021, 11:39 AM IST

ಕಾನೂನಿನ ಅರಿವು ಎಲ್ಲರಿಗೂ ಇರಲಿ

ದೊಡ್ಡಬಳ್ಳಾಪುರ: ಸಮಸ್ಯೆಗಳು ಬಂದಾಗ ಬಗೆಹರಿಸಿ ಕೊಳ್ಳುವುದಕ್ಕಿಂತ ಅವು ಬರದಂತೆ ತಡೆಯುವುದು ಮುಖ್ಯ. ಕಾನೂನಿನ ಅರಿವಿಲ್ಲ ಎಂದ ಮಾತ್ರಕ್ಕೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

ಈ ನಿಟ್ಟಿನಲ್ಲಿ ಕಾನೂನಿನ ಬಗ್ಗೆ ಸಾಮಾನ್ಯ ಜ್ಞಾನ ಎಲ್ಲರಿಗೂ ಇರಬೇಕಿದ್ದು, ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮೂಡಿಸಿ, ಸೇವೆ ನೀಡುವಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಕಾನೂನ್ಮುಖವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ತ್ಯಾಗರಾಜ್‌ ಎನ್‌.ಇನವಳ್ಳಿ ತಿಳಿಸಿದರು.

ನಗರದ ಬಾಬು ಜಗಜೀವನ ರಾಮ್‌ ಸಭಾ ಭವನ ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ತಾಲೂಕು ಆಡಳಿತದ ಸಹ ಯೋಗದಲ್ಲಿ ನಡೆದ ಬೃಹತ್‌ ಕಾನೂನು ಕಾರ್ಯಾಗಾರ ಹಾಗೂ ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಹಕ್ಕೆ ಕಾಯಿಲೆ ಬಂದರೆ ವೈದ್ಯರನ್ನು ಕಾಣುವಂತೆ, ನಮ್ಮ ಬದುಕಿನ ಸಮಸ್ಯೆಗಳಿಗೆ ನಾವು ವಕೀಲರ ಬಳಿ ಹೋಗುತ್ತೇವೆ.

ಆದರೆ, ಯಾರೇ ವಕೀಲರು ಸಮಾಜಕ್ಕೆ ಕೇಡಾಗಲೆಂದು ಬಯಸುವುದಿಲ್ಲ. ನಿತ್ಯ ಜೀವನದಲ್ಲಿ ಕಾನೂನನ್ನು ಪಾಲಿಸಿದರೆ ನೆಮ್ಮದಿ ಕಾಣಬಹುದು ಎಂದರು. ಪ್ರತಿಯೊಬ್ಬರಿಗೂ ಕಾನೂನಿನ ನೆರವು ಪಡೆಯಲು ತೊಂದರೆ ಪಡಬಾರದು. 1980ರಲ್ಲಿ ಮೊದಲ ಬಾರಿಗೆ ಕಾನೂನು ನೆರವು ಮಂಡಳಿ ರಚನೆಯಾಗಿ 1987ರಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಜಾರಿಗೆ ಬಂದ ನಂತರ ಜನರಲ್ಲಿ ಕಾನೂನಿನ ಅರಿವು ಹೆಚ್ಚಾಗಿದೆ.

ಆರ್ಥಿಕವಾಗಿ ಹಿಂದುಳಿದವರಿಗೆ ಜಾತಿ-ಧರ್ಮ ರಹಿತವಾಗಿ ಕಾನೂ ನಿನ ನೆರವು ಸಿಗುತ್ತದೆ. ಸರ್ಕಾರವೇ ಸ್ವಂತ ಖರ್ಚಿನಲ್ಲಿ ಕಾನೂನು ನೆರವು ನೀಡುತ್ತಿದೆ. ಇದಕ್ಕಾಗಿ ಸುಪ್ರೀಂ ಕೋರ್ಟ್‌ ಸಮಿತಿ ರಚಿಸಲು ಸೂಚಿಸಿದೆ. ಈ ಸಮಿತಿ 1995ರ ನಂತರ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದೆ. ನ್ಯಾಯಾಲಯಗಳಲ್ಲಿನ ಹಲವಾರು ಸಿವಿಲ್‌ ಪ್ರಕರಣ, ವ್ಯಾಜ್ಯಗಳ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

ನೆರವು ನೀಡಲು ಪ್ರಾಧಿಕಾರ ಸಿದ್ಧ: ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎ. ಹರೀಶ್‌ ಮಾತನಾಡಿ, ಈ ದೇಶದ ಕಾನೂನು ನಾವು ಪರಿಪಾಲನೆ ಮಾಡಲೇಬೇಕು. ಇಲ್ಲದಿದ್ದರೆ ನಮ್ಮ ಹಕ್ಕುಗಳಿಂದ ವಂಚಿತರಾಗಬೇಕಾಗು ತ್ತದೆ. ಕಾನೂನು ನಮ್ಮ ವಿರುದ್ಧವಾಗಿ ಅಲ್ಲ ನಮ್ಮ ರಕ್ಷಣೆ ಗಾಗಿಯೇ ಇವೆ. ದೇಶದ ಜನರಿಗೆ ಮೂಲ ಹಕ್ಕುಗಳಿಗೆ ಚ್ಯುತಿಯಾಗದಂತೆ ಕಾನೂನಿನ ನೆರವು ನೀಡಲು ಕಾನೂನು ಸೇವೆಗಳ ಪ್ರಾಧಿಕಾರ ಸಿದ್ಧವಾಗಿದೆ ಎಂದರು.

ಇದನ್ನೂ ಓದಿ:- “ಎಣ್ಣೆಗೂ ಹೆಣ್ಣಿಗೂ…’ ಹೆಣ್ಣು ಮಕ್ಕಳಿಗೊಂದು ಬ್ರೇಕಪ್‌ ಸಾಂಗ್‌

ಹಿರಿಯ ಸಿವಿಲ್‌ ನ್ಯಾಯಾಧೀಶ ಸಂದೀಪ್‌ ಸಾಲಿಯಾನ್‌ ಮಾತನಾಡಿ, ಎಲ್ಲ ರಾಜ್ಯದ ಜಿಲ್ಲೆಗಳೂ ಆಯಾ ತಾಲೂಕುಗಳು ಜನಸಾಮಾನ್ಯರಿಗೆ ಉಚಿತ ಕಾನೂನಿನ ಅರಿವು-ನೆರವು ಕಾರ್ಯಕ್ರವನ್ನು ಹಮ್ಮಿಕೊಂಡು ಅರಿವು ಮೂಡಿಸಬೇಕೇಂದು ರಾಷ್ಟ್ರೀಯ ಕಾನೂನು ಪ್ರಾಧಿಕಾರದಿಂದ ನಿರ್ದೇಶನ ನೀಡಲಾಗಿದೆ. ಉಚ್ಚ ನ್ಯಾಯಾಲಯದ ಆದೇಶದಂತೆ ಕಾನೂನು ಸೇವೆಗಳ ಪ್ರಾಧಿಕಾರ ನ. 2ರಿಂದ 17ರವರೆಗೆ ಕಾನೂನು ಅರಿವು ಕಾರ್ಯಾಗಾರಗಳನ್ನು ಗ್ರಾಮಾಂತರ ಮಟ್ಟದಲ್ಲಿಯೂ ನಡೆಸಲಾಗುತ್ತಿದೆ ಎಂದರು.

ನೋಂದಣಿ ಪತ್ರ ವಿತರಣೆ: ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಮೇಸ್ತ್ರಿ ಕಿಟ್‌, ಸುಕ್ಷತಾ ಕಿಟ್‌, ನೋಂದಣಿ ಪತ್ರ ವಿತರಿಸಲಾಯಿತು. ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌, ಹಿರಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶ ಅರವಿಂದ ಸಾಯಿಬಣ್ಣ ಹಾಗರಗಿ, ಹಿರಿಯ ನ್ಯಾಯಾಧೀಶರಾದ ಜ್ಯೋತಿ ಎಸ್‌. ಕಾಳೆ, ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಕೆ.ಆರ್‌.ದೀಪ, ಅಪರ ಸಿವಿಲ್‌ ನ್ಯಾಯಾಧೀಶೆ ಮಮತಾ ಶಿವಪೂಜೆ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಂ ಬೈರೇಗೌಡ, ಕಾರ್ಯದರ್ಶಿ ಕೃಷ್ಣಮೂರ್ತಿ, ತಹಶೀಲ್ದಾರ್‌ ಟಿ. ಎಸ್‌. ಶಿವರಾಜ್‌, ಡಿವೈಎಸ್‌ಪಿ ನಾಗರಾಜು, ಬಿಇಒ ಆರ್‌.ವಿ. ಶುಭಮಂಗಳ, ಟಿಎಚ್‌ಒ ಡಾ.ಪರ ಮೇಶ್ವರ, ಸಿಡಿಪಿಒ ಅನಿತಾಲಕ್ಷ್ಮೀ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್‌.ಆರ್‌.ನಾಗೇಂದ್ರ, ತಾಲೂಕು ಕಾರ್ಮಿಕ ನಿರೀಕ್ಷಕ ಎಂ. ಪ್ರದೀಪ್‌ ಇದ್ದರು.

ಕಾನೂನು ಜ್ಞಾನದಿಂದ ಉತ್ತಮ ಸಮಾಜ ನಿರ್ಮಾಣ ಕಾನೂನು ಸೇವಾ ಸಮಿತಿ ಜನರಿಗೆ ಕಾನೂನಿನ ಬಗ್ಗೆ ಅರಿವು, ಆರ್ಥಿಕ, ಸಾಮಾಜಿಕವಾಗಿ ದುರ್ಬಲರಾದವರಿಗೆ ಕಾನೂನು ನೆರವು ಹಾಗೂ ಲೋಕ ಅದಾಲತ್‌ಗಳನ್ನು ನಡೆಸುವ ಮೂಲಕ ಪ್ರಕರಣ ಶೀಘ್ರ ಇತ್ಯರ್ಥ ಪಡಿಸುವ ಕಾರ್ಯಗಳನ್ನು ಮಾಡುತ್ತಿದೆ.

ಮುಖ್ಯವಾಗಿ ರಾಜಿ ಸಂಧಾನಗಳಿಂದ ಹಲವಾರು ಪ್ರಕರಣ ಇತ್ಯರ್ಥವಾಗಿವೆ. ಗಾಂಧೀಜಿ ವಕೀಲರಾಗಿದ್ದಾಗ ನಡೆಸಿದ ರಾಜಿ ಸಂಧಾನದ ನಿದರ್ಶನ ನೀಡಿದರು. ಆದರೆ, ಈ ಸೇವೆಗಳ ಬಗ್ಗೆ ಜನಸಾಮಾನ್ಯರಿಗೆ ಅರಿವಿಲ್ಲದ ಕಾರಣ ವೃಥಾ ತೊಂದರೆಗೆ ಸಿಲುಕುತ್ತಾರೆ. ಕಾನೂನಿನ ಸಾಮಾನ್ಯ ಜ್ಞಾನ ಎಲ್ಲರಲ್ಲಿಯೂ ಮೂಡಿದರೆ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ತ್ಯಾಗರಾಜ್‌ ಎನ್‌.ಇನವಳ್ಳಿ ಹೇಳಿದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.