ಜಾನಪದ ಕಲೆ ಮನೆ ಮನ ತಲುಪಲಿ

Team Udayavani, Oct 14, 2019, 3:00 AM IST

janapada

ನೆಲಮಂಗಲ: ಹಳ್ಳಿಗಾಡಿನ ಜನರಿಂದ ಹುಟ್ಟಿ ಜಗತ್ತಿನ ಮನುಕುಲಕ್ಕೆ ಸಂಸ್ಕೃತಿ ಪರಿಚಯಿಸಿದ ಜಾನಪದ ಕಲೆಗಳು ಪ್ರತಿಯೊಬ್ಬರ ಮನೆಮನ ತಲುಪಬೇಕು ಎಂದು ತಾಪಂ ಸದಸ್ಯ ಬೆಟ್ಟೇಗೌಡ ಅಭಿಪ್ರಾಯಪಟ್ಟರು. ತಾಲೂಕಿನ ಯಲಚಗೆರೆ ಗ್ರಾಮದಲ್ಲಿ ಸಿಂಚನ ಕಲಾಕೇಂದ್ರ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಾನಪದ ಕಲಾ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.

ಆಧುನಿಕತೆ ಜೊತೆ ತಂತ್ರಜ್ಞಾನದ ಬೆಳವಣಿಗೆ ಹೆಚ್ಚಾದಂತೆ ಜಾನಪದ ಕಲೆಗಳು, ಗ್ರಾಮೀಣ ವೈಭವಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಪ್ರದೇಶದ ಜಾತ್ರೆಗಳಿಗೆ ನೂರಾರು ಕೀಲೋ.ಮೀಟರ್‌ ದೂರದ ನಗರದ ಬಂಧುಗಳು ಆಗಮಿಸಿ ಸಂಸ್ಕೃತಿಯ ರುಚಿಯನ್ನು ಸವಿಯುತ್ತಿದ್ದರು, ಆದರೆ ಅನೇಕ ಕಡೆಗಳಲ್ಲಿ ಈ ಸಂಪ್ರದಾಯ ಮರೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಗ್ರಾಮಗಳಲ್ಲಿ ಜಾನಪದ ಕಲೆಗಳ ಮಹೋತ್ಸವದ ಮೂಲಕ ಕಲೆ ಹಾಗೂ ಕಲಾವಿದರನ್ನು ಪರಿಚಯಿಸುತ್ತಿರುವುದು ಉತ್ತಮ ಕಾರ್ಯ ಎಂದರು.

ಶ್ರೀನಿವಾಸಪುರ ಗ್ರಾಪಂ ಸದಸ್ಯ ಹನುಮಂತರಾಜು ಮಾತನಾಡಿ, ಗ್ರಾಮೀಣ ಭಾಗದ ಜನರು ಮರೆಯುತ್ತಿರುವ ಕಲೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಸರಕಾರ ಜಾನಪದ ಕಲೆಗಳ ಉಳಿವಿಗಾಗಿ ಮುಂದಾಗಿರುವುದು ಸ್ವಾಗತಾರ್ಹ. ಹಳ್ಳಿಗಳಲ್ಲಿ ಈ ಹಿಂದೆ ಪೌರಾಣಿಕ ನಾಟಕಗಳ ಮೂಲಕ ರೈತರು ಆಯಾಸ ಮರೆಯುತಿದ್ದರು. ಅಂತಹ ಕಲೆಗಳನ್ನು ಹಳ್ಳಿಗಾಡಿನ ಜನರಿಗೆ ನೆನಪಾಗುವಂತೆ ಮಾಡಿದ ಕಲಾವಿದರಿಗೆ ಧನ್ಯವಾದಗಳು ಎಂದರು.

ಜನಪದ ಝೇಂಕಾರ: ಯಲಚಗೆರೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಾನಪದ ಕಲಾ ಮಹೋತ್ಸವದಲ್ಲಿ ಸುಗಮ ಸಂಗೀತ, ಜನಪದ ಗಾಯನ, ಸೋಬಾನೆ ಪದ, ಭಕ್ತಿಗೀತೆ, ಚೌಡಿಕೆ ಪದ, ತಮಟೆ ವಾದನ, ತತ್ವ ಪದ, ಕಂಸಾಳೆ, ಜಾಗೃತಿ ಗೀತೆ, ಭರತನಾಟ್ಯ, ಭಜನೆ ಸೇರಿದಂತೆ ಇನ್ನೂ ಅನೇಕ ಜಾನಪದ ಕಲೆಗಳನ್ನು ವಿವಿಧ ಕಲಾವಿದರು ನಡೆಸಿಕೊಟ್ಟರು.

ಯುವನಾಯಕ ಪ್ರಶಸ್ತಿ ಪ್ರದಾನ: ಯಲಚಗೆರೆ ಗ್ರಾಮದ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ, ಸಮಾಜ ಸೇವೆಯನ್ನು ಗುರುತಿಸಿ ಶ್ರೀನಿವಾಸಪುರ ಗ್ರಾಮ ಪಂಚಾಯಿತಿ ಸದಸ್ಯ ಹನುಮಂತರಾಜುವಿಗೆ ಸಿಂಚನ ಕಲಾ ಕೇಂದ್ರ ಟ್ರಸ್ಟ್‌ನಿಂದ ಯುವನಾಯಕ ಎಂಬ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ವೇಳೆ ತಾಪಂ ಸದಸ್ಯ ರುದ್ರೇಶ್‌, ಶ್ರೀನಿವಾಸಪುರ ಗ್ರಾಪಂ ಅಧ್ಯಕ್ಷ ಗೋವಿಂದರಾಜು, ಸದಸ್ಯ ಹನುಮಂತರಾಯಪ್ಪ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರಾಮುಜೋಗಿಹಳ್ಳಿ, ಸಿಂಚನ ಕಲಾ ಕೇಂದ್ರ ಟ್ರಸ್ಟ್‌ ಅಧ್ಯಕ್ಷ ಸಿ.ಹೆಚ್‌ ಸಿದ್ದಯ್ಯ ಮತ್ತಿತರರಿದ್ದರು.

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.