ಡೇರಿ ಆಡಳಿತ ಪಾರದರ್ಶಕವಾಗಿರಲಿ
Team Udayavani, Sep 25, 2020, 12:25 PM IST
ದೊಡ್ಡಬಳ್ಳಾಪುರ: ಹಾಲು ಉತ್ಪಾದಕರ ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುವಲ್ಲಿ ಅಧ್ಯಕ್ಷರು, ಆಡಳಿತ ಮಂಡಳಿ ಪಾತ್ರ ಮುಖ್ಯವಾಗಿದ್ದು ಪಾರದರ್ಶಕ ಆಡಳಿತವಿದ್ದರೆ ಸಂಘ ಪ್ರಗತಿ ಹೊಂದುತ್ತದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್‌ಕುಮಾರ್ ಹೇಳಿದರು.
ನಗರದ ಹಾಲು ಶೀಥಲ ಕೇಂದ್ರದ ಸಭಾಂಗಣದಲ್ಲಿ ಬುಧವಾರ ನಡೆದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಕಾಲಕ್ಕೆ ಲೆಕ್ಕಪತ್ರ ಮಂಡಿಸಿ: ಸಂಘದ ಸದಸ್ಯರಿಗೆ ವಿಶ್ವಾಸ ಮೂಡಲು ಆಡಳಿತದಲ್ಲಿ ಪಾರದರ್ಶಕತೆ ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಅಧ್ಯಕ್ಷರು ಸಕಾಲಕ್ಕೆ ಸರ್ವ ಸದಸ್ಯರ ಸಭೆ ನಡೆಸಿ ಲೆಕ್ಕಪತ್ರಗಳನ್ನು ಮಂಡಿಸಬೇಕು. ಇದರಿಂದ ಸಂಘ ಲಾಭದಾಯಕವಾಗಿ ನಡೆಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಹಾಲಿನ ಗುಣಮಟ್ಟ ಕಾಪಾಡಿ: ಹಾಲು ಒಕ್ಕೂಟದಿಂದ ರೈತರಿಗೆ ಸಾಕಷ್ಟು ಸೌಲಭ್ಯ ನೀಡಲಾಗುತ್ತಿದ್ದು ಈ ಬಗ್ಗೆ ಸಂಘದ ಅಧ್ಯಕ್ಷರು ಮೊದಲು ಸರಿಯಾದ ಮಾಹಿತಿ ಪಡೆದು ಸದಸ್ಯರಿಗೆ ತಿಳಿಸಬೇಕು. ಹಾಲಿನ ಗುಣಮಟ್ಟದ ಕಡೆಗೆ ಗಮನಹರಿಸಬೇಕೆಂದು ಸಲಹೆ ನೀಡಿದರು.
ಹಾಲು ಉತ್ಪಾದನೆ ಹೆಚ್ಚಳ: ಲಾಕ್‌ಡೌನ್ ನಂತರ ಹೈನುಗಾರಿಕೆ ಉದ್ಯಮದತ್ತ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಹೋಟೆಲ್, ಶುಭ ಸಮಾರಂಭ ಪೂರ್ಣ ಪ್ರಮಾಣದಲ್ಲಿ ಆರಂಭವಾಗದೇ ಇರುವ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಕುಸಿತವಾಗಿದ್ದು ಹಾಲಿನ ಉತ್ಪಾದನೆ ಮಾತ್ರ ಹೆಚ್ಚಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಹಾಲು ಶೀಥಲ ಕೇಂದ್ರ ಶಿಬಿರ ಕಚೇರಿ ಉಪ ವ್ಯವಸ್ಥಾಪಕ ಡಾ.ಗೋಪಾಲಕೃಷ್ಣ, ಅಪ್ಪಕಾರನಹಳ್ಳಿ ಎಂಪಿಸಿಎಸ್ ಅಧ್ಯಕ್ಷ ರಾಮಣ್ಣ, ವಿಸ್ತರಣಾಧಿಕಾರಿ ಎಂ.ಅಶ್ವತ್ಥಪ್ಪ ಮತ್ತಿತರರು ಉಪಸ್ಥಿತರಿದ್ದರು.
ಕೋವಿಡ್ ಹಿನ್ನೆಲೆ ಹಾಲಿನ ಖರೀದಿ ಬೆಲೆಯಲ್ಲಿಕಡಿಮೆ ಮಾಡಲಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ಮತ್ತೆ ಹಾಲಿನ ಬೆಲೆ ಏರಿಕೆ ಆಗಲಿದೆ.– ಬಿ.ಸಿ.ಆನಂದ್‌ಕುಮಾರ್, ಕೆಎಂಎಫ್ ನಿರ್ದೇಶಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.