ಗ್ರಾಮೀಣ ಮಕ್ಕಳ ಪ್ರತಿಭೆ ಬೆಳಗಲಿ
Team Udayavani, Aug 15, 2020, 12:22 PM IST
ನೆಲಮಂಗಲ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಾಧನೆ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆಯಾಗಿದ್ದು, ಪ್ರತಿಭಾವಂತ ಮಕ್ಕಳ ಪ್ರತಿಭೆಗಳು ಅನಾವರಣವಾಗಬೇಕಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪ ಅಭಿಪ್ರಾಯಪಟ್ಟರು.
ನಗರದ ಸೊಂಡೆಕೊಪ್ಪ ಬೈಪಾಸ್ ಸಮೀಪದ ದಿವ್ಯಜ್ಯೋತಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತ ನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿ ಗಳು ಮನೆಯಿಂದಲೇ ಪಾಠ ಕಲಿಯುವ ಅನಿವಾರ್ಯತೆ ಎದುರಾಗಿದ್ದು, ಗ್ರಾಮೀಣ ಮಕ್ಕಳಿಗೆ ಕಷ್ಟವಾಗುತಿದೆ. ಅವರಿಗೆ ಉತ್ತಮ ಶಾಲಾ ಕಾಲೇಜುಗಳ ಆಸರೆ ಹಾಗೂ ಶಿಕ್ಷಕರ ಮಾರ್ಗದರ್ಶನ ಬೇಕಾಗಿದೆ. ಆ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ನೀಡುವ ಜನರಿಗೆ ಸರ್ಕಾರ ಸಹಕಾರ ನೀಡಬೇಕು ಎಂದರು.
ಚಿತ್ರದುರ್ಗದ ಶ್ರೀ ಮಾದಾರ ಚೆನ್ನಯ್ಯ ಮಹಾಸ್ವಾಮೀಜಿ ಮಾತನಾಡಿ, ಕಾಲೇಜಿನ ನೂತನ ಕಟ್ಟಡ ಕೊರೊನಾದಂತಹ ಕಷ್ಟದ ಸಂದರ್ಭದಲ್ಲಿ ಆರಂಭವಾಗಿದ್ದು, ಪರಿಶ್ರಮ ಪಟ್ಟವರಿಗೆ ಯಶಸ್ಸು ದೊರೆಯಲಿದೆ ಎಂದರು.
ಮಾಜಿ ಸಂಸದ ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕಾಂತರಾಜು, ಎನ್‌ಡಿಎ ಮಾಜಿ ಅಧ್ಯಕ್ಷ ಹೇಮಂತ್‌ಕುಮಾರ್, ಆರ್‌ಟಿಐ ಮಾಜಿ ಆಯುಕ್ತ ಎಲ್.ಕೃಷ್ಣಮೂರ್ತಿ, ಕಾಲೇಜು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ರಂಗಶಿಕ್ಷಣ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿದ್ದರಾಜು, ಎಪಿಎಂಸಿ ಸದಸ್ಯ ಬೂದಿಹಾಳ್ ಗೋವಿಂದರಾಜು, ಪ್ರಾಂಶುಪಾಲ ಶ್ರೀನಿವಾಸ್, ಮುಖಂಡರಾದ ಬೂದಿಹಾಳ್‌ಕಿಟ್ಟಿ, ಪಿಳ್ಳಪ್ಪ, ಜಯರಾಮು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.