ಶಿಕ್ಷಕರು ಅಧ್ಯಯನಶೀಲರಾಗಲಿ
Team Udayavani, Apr 13, 2019, 3:00 AM IST
ದೊಡ್ಡಬಳ್ಳಾಪುರ: ಇಂದಿನ ಜಾಗತಿಕ ಬದಲಾವಣೆಗೆ ಪೂರಕವಾಗಿ ಶಿಕ್ಷಕ ಸಮುದಾಯ ಅಧ್ಯಯನ ಶೀಲರಾಗಬೇಕಾಗಿದೆ ಎಂದು ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಂ.ಅಶ್ವತ್ಥಯ್ಯ ಹೇಳಿದರು.
ಇಲ್ಲಿನ ಕೊಂಗಾಡಿಯಪ್ಪ ಶಿಕ್ಷಕರ ತರಬೇತಿ ಮಹಾವಿದ್ಯಾಲಯದಲ್ಲಿ ಅಂತಿಮ ಬಿ.ಇಡಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದ ಅವರು, ಜಾಗತಿಕ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸಲು ಶ್ರಮಿಸಬೇಕೆಂದು ಸಲಹೆ ನೀಡಿದರು.
ಬಿ.ಇಡಿ ಪದವಿ ಪಡೆಯುವ ಪ್ರಶಿಕ್ಷಣಾರ್ಥಿಗಳು ಹಲವು ಶಾಲಾ, ಕಾಲೇಜುಗಳಲ್ಲಿ ಬೋಧಕ ವೃತ್ತಿ ಪಡೆಯುವ ಕನಸು ಹೊಂದಿರುತ್ತಾರೆ. ಕೆಲವೊಮ್ಮೆ ಅವರ ಪ್ರತಿಭೆಗೆ ಪೂರಕವಾದ ಅವಕಾಶಗಳು ದೊರೆಯುವುದಿಲ್ಲ.
ಹೀಗಾಗಿ, ಸ್ಥಳೀಯ ಸಂಪನ್ಮೂಲಗಳನ್ನು ವ್ಯವಸ್ಥಿತವಾಗಿ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ಹಾಗೂ ಸುತ್ತಮುತ್ತಲಿನ ಅನೇಕ ಖಾಸಗಿ ಶಾಲಾ, ಕಾಲೇಜುಗಳನ್ನು ಸಂಪರ್ಕಿಸಿ, ಅರ್ಹ ಪ್ರಶಿಕ್ಷಣಾರ್ಥಿಗಳನ್ನು ಉದ್ಯೋಗಕ್ಕೆ ಪರಿಗಣಿಸುವಂತೆ ಕೋರಲಾಗಿತ್ತು.
ಅದಕ್ಕೆ ಪೂರಕವಾಗಿ ಹಲವು ವಿದ್ಯಾ ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದು ತಿಳಿಸಿದರು. ಉದ್ಯೋಗ ಮೇಳದಲ್ಲಿ 70 ಅರ್ಹ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. 18 ಶಾಲೆಗಳು ಹಾಗೂ 3 ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ ಖಜಾಂಚಿ ಡಿ.ಪ್ರಭುದೇವಯ್ಯ, ನಿರ್ದೇಶಕರಾದ ವಿ.ತಿಮ್ಮಶೆಟ್ಟಪ್ಪ, ಕೆ.ಎಂ.ಕೃಷ್ಣಮೂರ್ತಿ, ಪಿ.ವಿ.ಶ್ರೀನಿವಾಸಮೂರ್ತಿ, ಎಸ್.ರಾಜಲಕ್ಷ್ಮೀ, ಲಲಿತಮ್ಮ, ಜಗದೀಶ್‌ಬಾಬು, ಜೆ.ಬಿ.ಮಹೇಶ್, ಪ್ರಾಂಶುಪಾಲ ಬಿ.ಕೆ.ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.