ಶಂಕಿತರಿಗೆ ಎಂವಿಜೆ ಆಸ್ಪತ್ರೆಯಲ್ಲಿ ಸ್ಥಳ ಮೀಸಲು

Team Udayavani, Mar 15, 2020, 6:22 PM IST

Udayavani Kannada Newspaper

ಹೊಸಕೋಟೆ: ತಾಲೂಕಿಗೆ ವಿದೇಶದಿಂದ ಆಗಮಿಸುವ ಹಾಗೂ ಕೊರೊನಾ ಸೋಂಕಿನ ಬಗ್ಗೆ ಸಂಶಯಾಸ್ಪದ ವ್ಯಕ್ತಿಗಳಿಗೆ ಸಮೀಪದ ಎಂವಿಜೆ ಆಸ್ಪತ್ರೆಯಲ್ಲಿ ಸ್ಥಳ ಮೀಸಲಿಡಲಾಗಿದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.

ನಗರದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಫೆ.1ರಿಂದ ಇದುವರೆವಿಗೂ ಸಾಮಾನ್ಯ ನೆಗಡಿ, ಕೆಮ್ಮಿಗೆ ಒಳಗಾದ 1982 ವ್ಯಕ್ತಿಗಳನ್ನು ತಪಾಸಣೆ ನಡೆಸಿದ್ದು ಯಾವುದೇ ಕೊರೊನಾ ಶಂಕಿತರು ಕಂಡುಬಂದಿಲ್ಲ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ 300 ಜನರ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿದ್ದು ತಜ್ಞ ವೈದ್ಯರು ಸಂಶಯಾಸ್ಪದ ವ್ಯಕ್ತಿಗಳ ಚಲನವಲನ, ಆರೋಗ್ಯದ ಪರಿಸ್ಥಿತಿ ಬಗ್ಗೆ 14 ದಿನ ನಿಗಾವಹಿಸುವರು. ನಂತರದ 14 ದಿನಗಳ ಕಾಲ  ಶಂಕಿತರೇ ಸ್ವತ: ವೈಯಕ್ತಿಕವಾಗಿ ಗಮನಹರಿಸಿ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ವೈದ್ಯರ ಗಮನಕ್ಕೆ ತರಲು ಸೂಚಿಸಲಾಗಿದೆ.

ಸಮುದಾಯದಲ್ಲಿ ಕೊರೆನಾ ಬಗ್ಗೆ ಅನಾವಶ್ಯಕವಾಗಿ ಭೀತಿಗೊಳಗಾಗದಂತೆ ಸೂಕ್ತ ತಿಳಿವಳಿಕೆ ನೀಡಲು ನಗರಸಭೆ, ಗ್ರಾಮ ಪಂಚಾಯಿತಿ ವತಿಯಿಂದ ಕರಪತ್ರಗಳನ್ನು ವಿತರಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿಗಳನ್ನುಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಹ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಷ್ಟೇ ಅಲ್ಲದೆ ಮಾಸ್ಕ್ಗಳನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆ ಮಾರಾಟ ಮಾಡುವ ಔಷಧ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಂಡು ಪರವಾನಗಿಯನ್ನು ರದ್ದುಪಡಿಸಲು ಸಹ ಅವಕಾಶವಿದೆ. ವೈಯಕ್ತಿಕ ಸ್ವತ್ಛತೆಗೆ ಆದ್ಯತೆ ನೀಡಿ ಉತ್ತಮ ಆರೋಗ್ಯ ಕಾಪಾಡಿಕೊಂಡು ಪರಿಸ್ಥಿತಿಯನ್ನು ನಿಯಂತ್ರಿಸಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ: ಮಂಜುನಾಥ್‌ ಮಾತನಾಡಿ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಬೆಂಗಳೂರಿನ ರಾಜೀವ್‌ ಗಾಂಧಿ ಎದೆರೋಗ ಆಸ್ಪತ್ರೆಗೆ ಕಳುಹಿಸಿ ತಪಾಸಣೆಗೆ ಒಳಪಡಿಸಲಾಗುವುದು. ಆಸ್ಪತ್ರೆಯಲ್ಲಿ ಶಂಕಿತರು ವಾಸ್ತವ್ಯ ವಿರುವ ಸ್ಥಳವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಸಾರ್ವಜನಿಕರು ಜನಸಂದಣೆ ಸ್ಥಳಗಳಲ್ಲಿ ಸೇರುವುದರಿಂದ ಮುಕ್ತರಾಗಿ ಇಲಾಖೆ ನೀಡಿರುವ ಮಾರ್ಗದರ್ಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಇಓ ಸಿ.ಎಸ್‌. ಶ್ರೀನಾಥ್‌ಗೌಡ, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ: ಸತೀಶ್‌ ಕುಮಾರ್‌, ಎಂವಿಜೆ ಆಸ್ಪತ್ರೆಯ ಸಹಾಯಕ ಮೆಡಿಕಲ್‌ ಸೂಪರಿಂಟೆಂಡೆಟ್‌ ಡಾ: ಪ್ರಮೋದ್‌ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.