ಸೋಂಕು ರಹಿತ ಸ್ಥಿತಿ ಕಾಪಾಡಿಕೊಳ್ಳಿ

Team Udayavani, May 4, 2020, 4:34 PM IST

ಸೋಂಕು ರಹಿತ ಸ್ಥಿತಿ ಕಾಪಾಡಿಕೊಳ್ಳಿ

ಹೊಸಕೋಟೆ: ತಾಲೂಕಿನಲ್ಲಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಿ ಪ್ರಸ್ತುತ ಇರುವ ಸ್ಥಿತಿ ಕಾಪಾಡಿಕೊಳ್ಳಲು ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಶರತ್‌ ಬಚ್ಚೇಗೌಡ ಮನವಿ ಮಾಡಿದರು.

ತಾಲೂಕಿನ ಚೊಕ್ಕಹಳ್ಳಿಯಲ್ಲಿ ನಡೆದ ದಿನಸಿ ಕಿಟ್‌ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದಾದ್ಯಂತ ಮೇ 4ರಿಂದ 17ರವರೆಗೂ ಲಾಕ್‌ ಡೌನ್‌ನ್ನು ವಿಸ್ತರಿಸಿದ್ದು ಸರ್ಕಾರದ ಸೂಚನೆ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು.

ತಾಲೂಕಿನ ಬೈಲನರಸಾಪುರದಲ್ಲಿ ಸೋಂಕು ಪತ್ತೆಯಾಗಿದ್ದ 4 ವ್ಯಕ್ತಿಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು ಸೋಂಕು ಮುಕ್ತರಾಗಿದ್ದನ್ನು ದೃಢಪಡಿಸಿಕೊಂಡು ಬಿಡುಗಡೆ ಮಾಡಲಾಗಿದೆ. ಅಲ್ಲದೇ, 14 ದಿನ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಏ.10ರ ನಂತರ ಇದುವರೆಗೂ ಯಾವುದೇ ಸೋಂಕು ಪ್ರಕರಣ ಕಂಡುಬಂದಿಲ್ಲವಾ ದರೂ ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವುದರಿಂದ ಕೇಂದ್ರ ಸರ್ಕಾರ ಕೆಂಪು ವಲಯವಾಗಿ ಪರಿಗಣಿಸಲು ಕಾರಣವಾಗಿದೆ ಎಂದರು.

ಮುಂದುವರಿಕೆ: ಲಾಕ್‌ಡೌನ್‌ ಅವಧಿ ವಿಸ್ತರಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರಿಸುವುದು ಅನಿವಾರ್ಯ. ಔಷಧಿ ಅಂಗಡಿಗಳಿಗೆ ವಿನಾಯ್ತಿ ನೀಡಿದ್ದು ದಿನಸಿ, ತರಕಾರಿ, ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಗ್ಗೆ 9 ರಿಂದ 11, ಮಧ್ಯಾಹ್ನ 4 ರಿಂದ 6 ಗಂಟೆವರೆಗೂ ಮಾತ್ರ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸಿ.ಮಂಜುನಾಥ್‌, ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದ ಸುತ್ತಮುತ್ತಲಿನ ಪ್ರದೇಶ ಹಾಗೂ ಗ್ರಾಪಂ ವ್ಯಾಪ್ತಿಗೆ ಒಳಪಟ್ಟಿರುವ 11 ಗ್ರಾಮಗಳಲ್ಲಿ 4500 ಕಾರ್ಮಿಕರು, ಬಡಜನರು, ವಲಸಿಗರಿಗೆ ದಿನಸಿ ಪದಾರ್ಥಗಳು, ತರಕಾರಿ ಕಿಟ್‌ ವಿತರಿಸಲಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಲಲಿತಾ, ಸದಸ್ಯರಾದ ಹನುಮಂತರೆಡ್ಡಿ, ಮಂಜುಳಾ, ಟಿಎಪಿಸಿ ಎಂಎಸ್‌ ನಿರ್ದೇಶಕ ಮಂಜುನಾಥ್‌, ಮುಖಂಡ ಮಸ್ತಾನಪ್ಪ, ಬಂಗಾರಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.