ಬಿಜೆಪಿ ವೈಫಲ್ಯ ಜನರಿಗೆ ಮನದಟ್ಟು ಮಾಡಿ; ಡಿ.ಕೆ. ಸುರೇಶ್
ಕಾಂಗ್ರೆಸ್ ಸರ್ಕಾರ ಇದ್ದಾಗ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತನ್ನು ನೀಡಿತ್ತು.
Team Udayavani, Apr 23, 2022, 4:23 PM IST
ದೇವನಹಳ್ಳಿ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ವಿದ್ಯಾರ್ಥಿ ಘಟಕದಿಂದ ಮನದಟ್ಟು ಮಾಡಬೇಕು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಪಟ್ಟಣದ ಗಿರಿಯಮ್ಮ ವೃತ್ತದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಘಟಕದ ನೂತನ ಜಿಲ್ಲಾಧ್ಯಕ್ಷ ಎಂ.ಮುಖೇಶ್ ಬಾಬು ಹಾಗೂ ಜಿಲ್ಲಾ, ತಾಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದಾ ^ಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ವಿದ್ಯಾರ್ಥಿ ಘಟಕಕ್ಕೆ ಹೆಚ್ಚಿನ ಇತಿಹಾಸವಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಬದಲಿಗೆ ಶೇ. 40% ಕಮಿಷನ್ ಸರ್ಕಾರ ಎಂಬ ಹೆಸರಿಗೆ ಪಾತ್ರವಾಗಿದೆ ಎಂದರು.
ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿ: ಪ್ರಧಾನಿ ಮೋದಿ ಕೇವಲ ಭಾಷಣ ಮಾಡುವುದಷ್ಟೇ. ಶಾಶ್ವತ ಕಾರ್ಯಕ್ರಮ ಮಾಡುವುದರಲ್ಲಿ ವಿಫಲರಾಗಿದ್ದಾರೆ. ಅಭಿವೃದ್ಧಿ ಮರೆತು ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನೂತನ ವಿದ್ಯಾರ್ಥಿ ಘಟಕದ ಅಧ್ಯಕ್ಷ ಎಂ.ಮುಖೇಶ್ ಬಾಬು ನಾಲ್ಕು ತಾಲೂಕುಗಳಲ್ಲಿ ವಿದ್ಯಾರ್ಥಿ ಘಟಕ ಸಂಘಟಿಸಿ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಬೇಕು. ಮೋದಿ ಸರ್ಕಾರ ಬಂದಮೇಲೆ ಪೆಟ್ರೋಲ್ ಡೀಸೆಲ್, ಅಡುಗೆ ಅನಿಲ, ದಿನನಿತ್ಯ ವಸ್ತುಗಳನ್ನು ಏರಿಕೆ ಮಾಡಿ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಿದ್ದಾರೆ ಎಂದು ಹೇಳಿದರು.
ಬಡವರ ಸಂಕಷ್ಟಕ್ಕೆ ಬಿಜೆಪಿ ಸ್ಪಂದಿಸಲ್ಲ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಮಾತನಾಡಿ, ಎತ್ತಿನಹೊಳೆ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಕಾಂಗ್ರೆಸ್ ಅಧಿಕಾರದಲ್ಲಿ ಈ ಯೋಜನೆಗೆ 13 ಸಾವಿರ ಕೋಟಿ ನೀಡಿದ್ದರು. ಎತ್ತಿನಹೊಳೆ ಯೋಜನೆ ಕಾಮಗಾರಿ ಕೆಲಸ ಮಾಡಿರುವ 3 ಸಾವಿರ ಕೋಟಿ ರೂ. ಹಣವನ್ನು ಬಿಡುಗಡೆಗೊಳಿಸಿಲ್ಲ. ಅದರ ಅರ್ಥ ಶೇ. 40ರಷ್ಟು ಕಮಿಷನ್ ಆಗಿರಬಹುದು. ಅಸಡ್ಡೆ, ನಿರ್ಲಕ್ಷ್ಯ, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ರೈತರ, ಸಾಮಾನ್ಯಜನರು, ಬಡವರ ಸಂಕಷ್ಟಕ್ಕೆ ಸ್ಪಂದಿಸುವ ಸರ್ಕಾರ ಅಲ್ಲ ಎಂದರು.
ಕ್ರಿಯಾಶೀಲರಾಗಿ ಕೆಲಸ ಮಾಡಿ: ಕಾಂಗ್ರೆಸ್ ವಿದ್ಯಾರ್ಥಿ ಘಟಕ ಕ್ರಿಯಾಶೀಲರಾಗಿ ಕೆಲಸ ಮಾಡ ಬೇಕು. ವಿದ್ಯಾರ್ಥಿಗಳು ಮನಸು ಮಾಡಿದರೆ ಪಕ್ಷ ವನ್ನು ಸಂಘಟಿಸಿ ಅಧಿಕಾರಕ್ಕೆ ತರಬೇಕು. ಕಾಂಗ್ರೆಸ್ ಸರ್ಕಾರ ಇದ್ದಾಗ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತನ್ನು ನೀಡಿತ್ತು. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಕೇಜ್ರಿ ವಾಲ್ ಮುಖ್ಯಮಂತ್ರಿಯಾಗಿದ್ದರೂ ಲೋಕ ಪಾಲ್ ಮಸೂದೆಯಿಲ್ಲ. ರಾಜ್ಯದಲ್ಲಿ ಅಮ್ ಆದ್ಮಿ ಪಕ್ಷ ಬರು ತ್ತದೆ ಎಂಬುವ ಭ್ರಮೆಯಲ್ಲಿದ್ದಾರೆ ಎಂದರು.
ನಾಯಕರ ಹಿಂದೆ ಹೋಗಬೇಡಿ: ಮಾಜಿ ಸಂಸದ ಧ್ರುವನಾರಾಯಣ್ ಮಾತನಾಡಿ, ಯಾವುದೇ ನಾಯಕರ ಹಿಂದೆ ಹೋಗಬೇಡಿ. ಅವರ ಮನೆಗಳ ಹತ್ತಿರ ತಿರುಗಾಡಬೇಡಿ. ಅದರ ಬದಲಾಗಿ ವಿದ್ಯಾರ್ಥಿ ಗಳ ಸಮಸ್ಯೆ ಅರಿತು ಬಗೆಹರಿಸಿದಾಗ ಮತ್ತಷ್ಟು ಪಕ್ಷ ಬಲವರ್ಧನೆಯಾಗುತ್ತದೆ ಎಂದರು.
ವಿಧಾನಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ಮುನಿನರ ಸಿಂಹಯ್ಯ, ರಾಷ್ಟ್ರೀಯ ಯುವಕಾಂಗ್ರೆಸ್ ಅಧ್ಯಕ್ಷ ಪಿ. ವಿ.ಶ್ರೀನಿವಾಸ್, ರಾಜ್ಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕೀರ್ತಿಗಣೇಶ್, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್, ಕಾರ್ಯದರ್ಶಿ ಎಸ್. ಆರ್.ರವಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಎಂ. ಮುಖೇಶ್ ಬಾಬು, ಜಿಪಂ ಮಾಜಿ ಸದಸ್ಯ ಕೆ.ಸಿ. ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಉಪಾಧ್ಯಕ್ಷ ದ್ಯಾವರಹಳ್ಳಿ ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮುನಿರಾಜು, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ನಾಗೇಶ್, ಮಾರುತಿ, ರೇಖಾ ವೇಣುಗೋಪಾಲ್, ನಾಗೇಗೌಡ, ಅಕ್ಕಯ್ಯಮ್ಮ, ಮುಖಂಡ ನಟರಾಜ್, ಮಾರುತಿ, ಅರ್ಜುನ್, ಸುನೀಲ್ ಕುಬೇರ್, ಕೇಶವ ರಾಜಣ್ಣ ಹಾಗೂ ಮತ್ತಿತರರು ಇದ್ದರು.
ರಾಜ್ಯದ ಭ್ರಷ್ಟ ಬಿಜೆಪಿ
ಸರ್ಕಾರ ಕೊನೆಗಾಣಿಸಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ಭ್ರಷ್ಟ ಬಿಜೆಪಿ ಸರ್ಕಾರವನ್ನು ಕೊನೆಗಾಣಿಸಬೇಕು. ವಿದ್ಯಾರ್ಥಿಗಳು ಮನಸು ಮಾಡಿದರೆ, ಯಾವುದೇ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ತಿಳಿಸಿ ಕೊಡಬೇಕು. ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ಘಟಕವನ್ನು ಸಂಘಟಿಸಬೇಕು. ವಿದ್ಯಾರ್ಥಿಗಳ ಸಮಸ್ಯೆ ಅರಿತು ಕೆಲಸ ಮಾಡಿದಾಗ ಮತ್ತಷ್ಟು ವಿದ್ಯಾರ್ಥಿ ಘಟಕ ಬಲಿಷ್ಠವಾಗುತ್ತದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.