ಕೋವಿಡ್‌ ನಿಯಂತ್ರಣಕ್ಕೆ ಹಲವು ನಿರ್ಬಂಧ ಜಾರಿ


Team Udayavani, Apr 5, 2021, 12:27 PM IST

ಕೋವಿಡ್‌ ನಿಯಂತ್ರಣಕ್ಕೆ ಹಲವು ನಿರ್ಬಂಧ ಜಾರಿ

ದೇವನಹಳ್ಳಿ: ತಿಂಗಳಿಂದ ಕೋವಿಡ್ ಪ್ರಕರಣ ಏರಿಕೆ ಆಗುತ್ತಿದೆ. ಆದ್ದರಿಂದ ಸರ್ಕಾರದ ಆದೇಶದಂತೆ ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಿ,ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ವಿದ್ಯಾಗಮ ಸೇರಿ 6 ರಿಂದ9ನೇ ತರಗತಿ ಗಳನ್ನು ಸ್ಥಗಿತಗೊಳಿಸಲಾಗಿದ್ದು, 10, 11 ಹಾಗೂ 12ನೇ ತರಗತಿಗಳು ಎಂದಿ ನಂತೆ ಮುಂದುವರಿಯುತ್ತವೆ. ಆದಾಗ್ಯೂ, ತರಗತಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ. ಜಿಲ್ಲೆಯಲ್ಲಿನ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ತರಗತಿಗಳಲ್ಲಿ ಮಂಡಳಿಯ ವಿಶ್ವವಿದ್ಯಾಲಯಗಳಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣ ಹೊರತು ಪಡಿಸಿ, ಇತರೆ ಎಲ್ಲಾ ತರಗತಿಗಳನ್ನುಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ.

ತರಗತಿಗಳು ಸ್ಥಗಿತ: ವಸತಿ ಶಾಲೆಗಳು ಹಾಗೂ ಬೋರ್ಡಿಂಗ್‌ ಇರುವ ಶಾಲೆಗಳಲ್ಲಿ 10, 11 ಹಾಗೂ12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವವರು ಮತ್ತು ವೈದ್ಯಕೀಯ ಶಿಕ್ಷಣದ ತರಗತಿ ಹೊರತು ಪಡಿಸಿ, ಇತರೆ ಎಲ್ಲಾ ತರಗತಿ ಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ.

ನಿರ್ಬಂಧಗಳು ಏ.20ರವರೆಗೆ ಚಾಲ್ತಿ: ವಿವಿಧ ಸಭೆ/ ಸಮಾರಂಭ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶ ನೀಡಬಹುದಾದ ಸಾರ್ವಜನಿಕರ ಸಂಖ್ಯೆಯನ್ನುಮಾ.12ರಲ್ಲಿರುವ ಸುತ್ತೋಲೆಯಂತೆ ಮುಂದುವರಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿ ಕೊಳ್ಳುವುದು, ಇವುಗಳಿಗೆ ಸಂಬಂಧಪಟ್ಟಂತೆ ಈಗಾಗಲೇ ಜಾರಿಯಲ್ಲಿರುವನಿಯಮ, ಆದೇಶ. ಪೊಲೀಸ್‌ ಇಲಾಖೆ ಹಾಗೂಸ್ಥಳೀಯ ಆಡಳಿತಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು. ಈ ನಿಯಮಗಳನ್ನು ಯಾವುದೇ ವ್ಯಕ್ತಿ/ ವ್ಯಕ್ತಿಗಳು ಉಲ್ಲಂಘಿಸಿದ ಪಕ್ಷದಲ್ಲಿ, ಅಂತಹವರವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005ರ ವಿಭಾಗ 51 ರಿಂದ 60ರ ಅನ್ವಯ, ಐ.ಪಿ.ಸಿ. ಸೆಕ್ಷನ್ ‌188ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ವಿಭಾಗ 4,5 ಮತ್ತು 10 ರಂತೆಕ್ರಮ ಜರುಗಿಸಲಾಗುವುದು ಹಾಗೂ ಈ ಎಲ್ಲಾನಿಯಮ, ನಿರ್ಬಂಧಗಳು ಏ.20ರವರೆಗೆಚಾಲ್ತಿಯಲ್ಲಿರುತ್ತವೆ ಜಿಲ್ಲಾಧಿಕಾರಿ ಶ್ರೀನಿವಾಸ್‌ ಮಾಹಿತಿ ನೀಡಿದ್ದಾರೆ.

ಯಾವುದೇ ರ್ಯಾಲಿ, ಧರಣಿಗಿಲ್ಲ ಅವಕಾಶ :

ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ತರಹದ ರ್ಯಾಲಿ, ಮುಷ್ಕರ, ಧರಣಿ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗದಿಪಡಿಸಿರುವ ಆಸನ ವ್ಯವಸ್ಥೆ ಮೀರುವಂತಿಲ್ಲ. ಕಚೇರಿಗಳು ಹಾಗೂ ಇತರೆ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟುಮನೆಯಿಂದಲೇ ಕೆಲಸ ನಿರ್ವಹಿಸುವ ವ್ಯವಸ್ಥೆಯನ್ನು ಪಾಲಿಸುವುದು. ಜಿಲ್ಲೆಯ ಸಿನಿಮಾ ಹಾಲ್‌ಗ‌ಳಲ್ಲಿ ಒಂದು ಸೀಟು ಬಿಟ್ಟು ಕುಳಿತುಕೊಳ್ಳುವಂತೆ ಗರಿಷ್ಠ ಶೇ.50 ವೀಕ್ಷಕರಿಗೆ ಮಾತ್ರ ಅವಕಾಶ ಕಲ್ಪಿಸುವುದು ಹಾಗೂ ಜಿಲ್ಲೆಯಲ್ಲಿನ ಪಬ್‌, ಬಾರ್‌, ಕ್ಲಬ್‌, ರೆಸ್ಟೋರೆಂಟ್‌ಗಳಲ್ಲಿ ಗರಿಷ್ಠ ಗ್ರಾಹಕರ ಸಂಖ್ಯೆಯು ಶೇ.50 ಅನ್ನು ಮೀರುವಂತಿಲ್ಲ. ಶಾಪಿಂಗ್‌ ಮಾಲ್‌ಗ‌ಳು, ಮುಚ್ಚಿದ ಪ್ರದೇಶಗಳಲ್ಲಿರುವ ಮಾರ್ಕೆಟ್‌ಗಳು ಹಾಗೂ ಡಿಪಾರ್ಟ್ ಮೆಂಟಲ್‌ ಸ್ಟೋರ್‌ಗಳಲ್ಲಿ ಶಿಷ್ಟಾಚಾರದನ್ವಯ ಕೋವಿಡ್‌ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್, ದೈಹಿಕ ಅಂತರ ಪಾಲನೆ, ಹ್ಯಾಂಡ್‌ ಸಾನಿಟೈಸರ್‌, ಹ್ಯಾಂಡ್‌ವಾಷ್‌ಗಳ ಬಳಕೆ ಜಾರಿಗೊಳಿಸುವುದು ಈ ನಿಯಮ ಉಲ್ಲಂಘಿಸಿದಲ್ಲಿ ಮೇಲಿನ ಸ್ಥಳಗಳನ್ನು ಕೋವಿಡ್‌ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಮುಚ್ಚಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ ಮಹೋತ್ಸವಗಳು, ಮೇಳಗಳು, ಗುಂಪು ಸೇರುವುದರ ನಿಷೇಧ ಮುಂದುವರಿಯುತ್ತದೆ.

ಕೋವಿಡ್ ವೈರಸ್‌ನಿಂದಾಗಿ ಮುಚ್ಚಲ್ಪಟ್ಟ  ಕ್ಷೇತ್ರ :  ಧಾರ್ಮಿಕ ಸ್ಥಳಗಳಲ್ಲಿ ವೈಯಕ್ತಿಕವಾಗಿ ಪ್ರಾರ್ಥನೆ ಮಾಡಲು ಮಾತ್ರ ಅವಕಾಶವಿದ್ದು, ಗುಂಪು ಸೇರುವ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ. ಅಪಾರ್ಟ್‌ಮೆಂಟ್‌ ಕಾಂಪ್ಲೆಕ್ಸ್‌ಗಳಲ್ಲಿ, ಸಾಮಾನ್ಯವಾಗಿನಿವಾಸಿಗಳು/ಜನರು ಸೇರುವ ಸ್ಥಳಗಳಾದ ಜಿಮ್‌, ಪಾರ್ಟಿ ಹಾಲ್‌, ಕ್ಲಬ್‌ಹೌಸ್‌, ಈಜುಕೊಳಗಳು ಇತ್ಯಾದಿ ಮುಚ್ಚಲ್ಪಟ್ಟಿರುತ್ತವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.