ಜಿಲ್ಲೆಯಲ್ಲಿ ಗಾಂಜಾ ಮಾರಾಟಗಾರರ ಬಂಧನ
Team Udayavani, Sep 2, 2020, 1:40 PM IST
ದೇವನಹಳ್ಳಿ: ನಗರದ ಹೊರವಲಯದ ಏರ್‌ಲೈನ್ಸ್ ಡಾಬಾದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ದೇವನಹಳ್ಳಿಯ ದಾಸರಬೀದಿ ನಾಗೇಶ್(25), ಹೊಸಕೋಟೆ ತಾಲೂಕಿನ ಕುಂಬಳಹಳ್ಳಿ ಗ್ರಾಮದ ನಿವಾಸಿ ಕೆ.ಮುನಿರಾಜು(33) ಬಂಧಿತರು. ಇವರಿಂದ 1.75 ಲಕ್ಷ ರೂ. ಮೌಲ್ಯದ 3.5 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ ಹೊರ ವಲಯದ ಏರ್‌ಲೈನ್ಸ್ ಡಾಬಾದ ಬಳಿ ಗಾಂಜಾ ಸಾಗಣೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಕೋಟೆ ಕಡೆಯಿಂದ ಗಾಂಜಾ ತಂದಿರುವುದಾಗಿ ಪೊಲೀಸರಿಗೆ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಗಾಂಜಾ ಮಾರಾಟದ ಬಹುದೊಡ್ಡದ ಜಾಲದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಹೀಗಾಗಿ ಪ್ರಕರಣ ದಾಖಲಿಸಿಕೊಂಡಿರುವ ದೇವನಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಡಿಸಿಪಿ ಭೀಮಶಂಕರ್‌ಗುಳೇದ್ ಮಾರ್ಗದರ್ಶನದಲ್ಲಿ ಎಸಿಪಿ ಸುಬ್ರಹ್ಮಣ್ಯ ಸೂಚನೆಯಂತೆ ದೇವನಹಳ್ಳಿ ಇನ್ಸ್‌ಪೆಕ್ಟರ್ ಮೊಹಮದ್ ರಫೀಕ್ ನೇತೃತ್ವದಲ್ಲಿ ಪಿಎಸ್‌ಐ ನಾಗರಾಜ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ರವಿಪಾಟೀಲ್, ವಿಜಯ್ ಕುಮಾರ್, ಇಸ್ಮಾಯಿಲ್, ಗಿರೀಶ್‌ಬಾಬು ಮತ್ತಿತರ ತಂಡ ಆರೋಪಿಗಳನ್ನು ವಶಕ್ಕೆ ಪಡೆದಿದೆ. ಉಪ ಪೊಲೀಸ್ ಆಯುಕ್ತರು, ಈಶಾನ್ಯ ವಿಭಾಗ, ದೇವನಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.