ಮಾಯಾವತಿ ಪ್ರಧಾನಿ ಆಗುವುದು ಖಚಿತ

Team Udayavani, Apr 12, 2019, 1:57 PM IST

bg
ದೊಡ್ಡಬಳ್ಳಾಪುರ: ಈ ಬಾರಿ ಮಾಯಾವತಿ ಪ್ರಧಾನಿ ಆಗುವು ದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಇಲ್ಲಿನ ನೀರು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಧ್ವನಿಯಾಗಲು ಬಿಎಸ್‌ಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಡಾ.ಸಿ.ಎಸ್‌.ದ್ವಾರಕನಾಥ್‌ ಅವರು ಮತದಾರರಲ್ಲಿ ಮನವಿ ಮಾಡಿದರು.  ಬಿಎಸ್‌ಪಿ ಚುನಾವಣಾ ಪ್ರಚಾರದ ಬೈಕ್‌ ರ್ಯಾಲಿಯನ್ನು ಉದ್ಘಾಟಿಸಿದ ನಂತರ ರೋಡ್‌ ಶೋನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಳೆದ 10 ವರ್ಷದಿಂದ ನೀರು ನೀಡುತ್ತೇನೆಂದು ಸುಳ್ಳು ಹೇಳುತ್ತಿರುವ ವೀರಪ್ಪ ಮೊಯ್ಲಿ ಲೋಕಸಭೆ ಯಲ್ಲಿ ನೀರಿನ ಕುರಿತು ಇದುವರೆಗೂ ಮಾತನಾಡಿಲ್ಲ. ಇಲ್ಲಿನ ಕಾಂಗ್ರೆಸ್‌ ಆಗಲಿ, ಬಿಜೆಪಿ ಆಗಲಿ ತಮ್ಮ ಅಭಿವೃದ್ಧಿ ಕುರಿತು ಮಾತನಾಡದೇ ಒಬ್ಬರ ಮೇಲೊಬ್ಬರು ವಾಗ್ಧಾಳಿ ನಡೆಸುತ್ತಾ ಜನರನ್ನು ಮತ ಕೇಳುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು  ಇದೀಗ ಜನರಲ್ಲಿ ಅರಿವು ಮೂಡುತ್ತಿದೆ. ಇವರ ನಾಟಕಗಳನ್ನು ನೋಡುತ್ತಿರುವ ಜನ ಈ ಬಾರಿ ತಕ್ಕ ಪಾಠ ಕಲಿಸುತ್ತಾರೆಂದು ಹೇಳಿದರು.
ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಪುರುಷೋತ್ತಮ ಮಾತನಾಡಿ, ಕಳೆದ 70 ವರ್ಷಗಳಿಂದ ದೇಶವನ್ನು ಆಳಿದ ಕಾಂಗ್ರೆಸ್‌ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳು ಬಡತನ ಹೋಗಲಾಡಿಸಲು ಶ್ರಮಿಸಲಿಲ್ಲ. ಮತಗಳ ಖರೀದಿ ಮಾಡುತ್ತಾ, ಜನರನ್ನು ಯಾಮಾರಿಸುತ್ತಾ ಅಧಿಕಾರ ನಡೆಸುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.
ಆಶ್ವಾಸನೆಗಳನ್ನು ನೀಡಿ ನೊಂದವರು, ಬಡವರು, ಶೋಷಿತರ ಮತಗಳನ್ನು ಕೊಳ್ಳೆ ಹೊಡೆಯುತ್ತಿರುವ ಇವರೇ ದೇಶದ ಬಡತನಕ್ಕೇ ನೇರ ಹೊಣೆಗಾರರಾಗಿದ್ದಾರೆ. ಹೀಗಾಗಿ, ಜನರು ತಮ್ಮ ಮತಗಳನ್ನು ಮಾರಿಕೊಳ್ಳದೇ ಪ್ರಾಮಾಣಿಕವಾಗಿ ಮತ ಚಲಾವಣೆ ಮಾಡಬೇಕು. ಬಡವರ ಧ್ವನಿಯಾದ ಬಿಎಸ್‌ಪಿ ಪಕ್ಷವನ್ನು ಬೆಂಬಲಿಸಬೇಕು. ನಿಮ್ಮ ಭವಿಷ್ಯವನ್ನು ನಿಮ್ಮ ಒಂದು ಮತದಿಂದ ರೂಪಿಸಿಕೊಳ್ಳಬಹುದು ಎಂಬ ಅರಿವಿನಿಂದ ಮತ ಚಲಾಯಿಸಬೇಕೆಂದು ಮತ ದಾರರಲ್ಲಿ ಮನವಿ ಮಾಡಿದರು.
ಬೈಕ್‌ ರ್ಯಾಲಿ: ನಗರ ಸೇರಿದಂತೆ ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ಬಿಎಸ್‌ಪಿ ಮುಖಂಡರು ಹಾಗೂ ಕಾರ್ಯಕರ್ತರು ಬೆಂಬಲಿಗರು ಸೇರಿ ಬೈಕ್‌ ರ್ಯಾಲಿ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿ ಡಾ.ಸಿ.ಎಸ್‌. ದ್ವಾರಕನಾಥ್‌ ಪರ ಭರ್ಜರಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಬಿಎಸ್‌ಪಿ ತಾಲೂಕು, ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಕಾರ್ಯಕರ್ತರು ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.