ಹಿರಿಯ ನಾಗರಿಕರ ಮನೆ ಬಾಗಿಲಿಗೇ ಔಷಧ


Team Udayavani, Oct 2, 2021, 3:02 PM IST

ಹಿರಿಯ ನಾಗರಿಕರ ಮನೆ ಬಾಗಿಲಿಗೇ ಔಷಧ

ದೇವನಹಳ್ಳಿ: ಜಿಲ್ಲೆಯಲ್ಲಿರುವ ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ನಡೆಸಿ, ರಕ್ತದೊತ್ತಡ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಉಚಿತವಾಗಿ ಮಾತ್ರೆಗಳನ್ನು ತಲುಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದರು.

ತಾಲೂಕಿನ ಬೀರಸಂದ್ರ ಗ್ರಾಮದ ಬೆಂ. ಗ್ರಾ. ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಕಚೇರಿ ಸಭಾಂಗಣದಲ್ಲಿ ಜಿÇÉಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಿವ್ಯಾಂಗರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಬಿಪಿ, ಶುಗರ್‌ನಂತಹ ಕಾಯಿಲೆಗಳನ್ನು ಗುಣಪಡಿಸುವ ಮಾತ್ರೆಗಳನ್ನು ಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಉಚಿತವಾಗಿ ಮನೆಗೆ ತಲುಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಪ್ರತಿ ತಾಲೂಕಿನಲ್ಲಿ ತಲಾ 20 ಮಂದಿ ಹಿರಿಯ ನಾಗರಿಕರನ್ನು ಗುರುತಿಸಿ, ಅವರಿಗೆ ಕಂಪ್ಯೂಟರ್‌ ತರಬೇತಿ ನೀಡುವ ಮೂಲಕ ಡಿಜಿಟಲ್‌ ಸಾಕ್ಷರತೆಗೆ ಒತ್ತು ನೀಡಲಾಗುವುದು. ತರಬೇತಿ ಪಡೆದವರಿಗೆ ಟ್ಯಾಬ್‌ ನೀಡಲಾಗುವುದರಿಂದ ಇದು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ದಿವ್ಯಂಗರ ಅದಾಲತ್‌ ನಡೆಸಿ: ತಾಲೂಕುಮಟ್ಟದಲ್ಲಿ ಪ್ರತಿ ತಿಂಗಳು ದಿವ್ಯಂಗರ ಅದಾಲತ್‌ಗಳನ್ನು ನಡೆಸುವ ಮೂಲಕ ತಳಮಟ್ಟದಲ್ಲಿಯೇ ಅವರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.

ಹಿರಿಯ ನಾಗರಿಕರು ಸದಾಕಾಲ ಹುಮ್ಮಸ್ಸು, ಚೈತನ್ಯ ದಾಯಕವಾಗಿ ಜೀವನ ನಡೆಸಬೇಕು. ಇನ್ನೊಂದು ವಾರದೊಳಗಾಗಿ ಜಿಲ್ಲೆಯ 4 ತಾಲೂಕುಗಳಲ್ಲಿ ಹಿರಿಯ ನಾಗರಿಕರ ದಿನಾಚರಣೆಯನ್ನು ಮಾಡಲು ತಹಶೀಲ್ದಾರ್‌ಗಳಿಗೆ ಸೂಚಿಸಲಾಗು ವುದು.  ಹಿರಿಯರನ್ನು ವಯಸ್ಸಾದ ಕಾಲದಲ್ಲಿ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಹಿರಿಯರಿಗೆ ಆಸರೆಯಾಗಿ: ಜಿಪಂ ಸಿಇಒಎಂ.ಆರ್‌.ರವಿಕುಮಾರ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರಿನ್ನು ವೃದ್ಧಾಶ್ರಮಗಳಿಗೆ ಬಿಡುವ ಪದ್ಧತಿ ಹೆಚ್ಚುತ್ತಿರುವುದು ಅತ್ಯಂತ ಕಳವಳಕಾರಿ ಯಾದ ಸಂಗತಿಯಾಗಿದ್ದು, ಮಕ್ಕಳು ತಮ್ಮ ಪೋಷಕರಿಗೆ ಉತ್ತಮ ಸೌಲಭ್ಯ ಒದಗಿಸಿ ಆರೈಕೆ ಮಾಡಬೇಕು.

ಯುವಕರು ನಗರ ಜೀವನಕ್ಕೆ ಮಾರುಹೋಗಿ ತಮ್ಮ ಸಂಬಂಧಗಳನ್ನು ಕಡಿದುಕೊಳ್ಳುತ್ತಿದ್ದಾರೆ. ವಿಭಕ್ತ ಕುಟುಂಬದಿಂದ ಹಿರಿಯ ನಾಗರಿಕರು ಹೆಚ್ಚು ಸಮಸ್ಯೆ ಅನುಭವಿಸುತ್ತಿರುವುದರಿಂದ ಅವಿಭಕ್ತ ಕುಟುಂಬಗಳು ಹೆಚ್ಚಾಗಬೇಕು. ಮಕ್ಕಳು ಹಿರಿಯರಿಗೆ ಹೆಚ್ಚಿನ ಪ್ರೀತಿ ಮತ್ತು ಗೌರವ ನೀಡುವ ಮೂಲಕ ಆಸರೆಯಾಗಿ ರಬೇಕು ಎಂದರು.

ನಾಗರಿಕರಿಗೆ ಬಹುಮಾನ ವಿತರಣೆ: ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ನೀಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ಅಪರ ಜಿಲ್ಲಾಧಿಕಾರಿ ವಿಜಯಾ. ಈ. ರವಿಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನಿತಾಲಕ್ಷಿ ಜಿಲ್ಲಾ ದಿವ್ಯಾಂಗ ಕಲ್ಯಾಣಾಧಿಕಾರಿ ಜಗದೀಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಶ್ರೀವಾಣಿ ಕೋನಾರೆಡ್ಡಿ ಸೇರಿದಂತೆ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಇದ್ದರು.

ಕುಂದುಕೊರತೆ ಆಲಿಸಿ ಪರಿಹಾರ ನೀಡಿ-

ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಬ್ಯಾಂಕ್‌ಗಳಲ್ಲಿ ಪ್ರತ್ಯೇಕ ಸಾಲು ಮೀಸಲಿಡುವಂತೆ ಹಾಗೂ ಹಿರಿಯರಿಗೆ ಪ್ರಥಮ ಆದ್ಯತೆ ನೀಡುವಂತೆ ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಲಾಗುವುದು. ಜಿಲ್ಲಾಮಟ್ಟದಲ್ಲಿರುವ ಹಿರಿಯ ನಾಗರಿಕರ ಸಹಾಯವಾಣಿಯಂತೆ ತಾಲೂಕುಮಟ್ಟದಲ್ಲಿಯೂ ಸಹಾಯವಾಣಿ ಸ್ಥಾಪಿಸಿ, ಅವರ ಕುಂದುಕೊರತೆಗಳನ್ನು ಆಲಿಸಬೇಕು ಹಾಗೂ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಸೂಚಿಸಿದರು.

ಟಾಪ್ ನ್ಯೂಸ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

5

Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ

18-metro

Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ

Balaganur: Body of newborn baby found in canal

Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ

17-bng

Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.