ಸರ್ಕಾರ ರೈತರ ಮೇಲಿನ ಪ್ರಕರಣ ವಾಪಸ್ ಪಡೆಯಲಿ: ಎಂಟಿಬಿ
Team Udayavani, Aug 22, 2022, 6:43 PM IST
ವಿಜಯಪುರ : ಚನ್ನರಾಯಪಟ್ಟಣ ಹೋಬಳಿಯಲ್ಲಿ ರೈತರಿಂದ 1,777 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳಲು ಹೊರಟಿರುವ ಸರ್ಕಾರದ ಕ್ರಮವನ್ನೂ ಹಿಂದೆಯೂ ವಿರೋಧಿಸಿದ್ದೇನೆ ಮತ್ತು ಈಗಲೂ ವಿರೋಧಿಸುತ್ತೇನೆ . ಒಂದೇ ಹೋಬಳಿಯಲ್ಲಿ ಇಷ್ಟೊಂದು ದೊಡ್ಡ ಕೃಷಿ ಭೂಮಿಯನ್ನು ವಶಪಡಿಸಿಕೊಂಡರೆ ರೈತರಿಗೆ ಪೆಟ್ಟು ಬೀಳುತ್ತದೆ ಎಂದು ಎಂ.ಟಿ.ಬಿ.ನಾಗರಾಜ್ ತಿಳಿಸಿದರು.
ವಿಜಯಪುರ ಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತರು ಸ್ವ ಇಚ್ಛೆಯಿಂದ ಭೂಮಿ ನೀಡಿದರೆ ಮಾತ್ರ ಅಂಥ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು . ರೈತರನ್ನು ಒಕ್ಕಲೆಬ್ಬಿಸುವಂತಹ ಕೆಲಸ ಮಾಡಬಾರದು. ಅನ್ನದಾತರ ಮೇಲೆ ಪೊಲೀಸರ ಹಲ್ಲೆ ಅಕ್ಷಮ್ಯ . 70 ಕ್ಕೂ ಹೆಚ್ಚು ರೈತರ ಮೇಲೆ ಪ್ರಕರಣ ದಾಖಲಿಸಲಾಗಿದೆ . ಅವರ ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಕ್ರಮ ಸರಿಯಲ್ಲ. ರೈತರ ಮೇಲೆ ಹಾಕಿರುವ ಪ್ರಕರಣಗ ಳನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಪ್ರಾಥಮಿಕ ನೊಟೀಸ್ ಜಾರಿಗೊಳಿಸಿ ಪರಿಹಾರ ನಿಗದಿ ಮಾಡಿಲ್ಲ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು . ರೈತರು ಬೆಲೆ ಹೇಳಬೇಕು . ನಂತರ ಚರ್ಚೆಗೆ ಒಳಪಡಿಸಬೇಕು . ಆದರೆ ಇದ್ಯಾವುದೂ ಆಗಿಲ್ಲ. ರೈತರು ಗಾಬರಿಯಾಗುವುದು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.