ಚೀನಾ ದೇಶದ ಬೆಳವಣಿಗೆಗೆ ಸಣ್ಣ ಕೈಗಾರಿಕೆಯೇ ಕಾರಣ
Team Udayavani, Jun 4, 2022, 2:45 PM IST
ನೆಲಮಂಗಲ: ಸಣ್ಣ ಕೈಗಾರಿಕೆಗಳ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕಾಗುತ್ತದೆ. ಚೀನಾ ಬೆಳವಣಿಗೆಗೆ ಸಣ್ಣ ಕೈಗಾರಿಕೆಯೇ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದರು.
ತಾಲೂಕಿನ ಸೋಂಪುರ ಕೈಗಾರಿಕಾ ಪ್ರದೇಶದ ಹೊನ್ನೇನಹಳ್ಳಿ ಗ್ರಾಪಂ ವ್ಯಾಪ್ತಿಯ ಗೌರಿಶಂಕರ್ ಒಡೆತನದ ಎಲೈಟ್ ಕ್ಯಾರೋಗೇಟರ್ಸ್ ಕಂಪನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಮುಖ್ಯಮಂತ್ರಿಗಳು ವಿದೇಶಕ್ಕೆ ಹೋಗಿ ಕೈಗಾರಿಕೊದ್ಯಮಿಗಳನ್ನು ಆಕರ್ಷಿಸಲು, ಇನ್ವಸ್ಟರ್ ಮೀಟ್ ಮಾಡುತ್ತಿದ್ದಾರೆ, ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ನೀರಿಗೆ ಸಮಸ್ಯೆಯಿದೆ. ಎತ್ತಿನಹೊಳೆ ಯೋಜನೆ ಈಗ ಕಾರ್ಯಗತವಾಗುತ್ತಿದೆ. ಒಂದು ವರ್ಷದಲ್ಲಿ ಈ ಯೋಜನೆಬರಬಹುದು. ಆಗ ಕೈಗಾರಿಕಾ ಪ್ರದೇಶಕ್ಕೆ ನೀರು ಬರಬಹುದು ಎಂದರು.
ಪಠ್ಯದಲ್ಲಿ ದೂರದೃಷ್ಟಿ ಇರಬೇಕು: ಪಠ್ಯಕ್ರಮ ವಾದದ ಬಗ್ಗೆ ಮಾತನಾಡಿದ ಅವರು, ಮಕ್ಕಳಿಗೆ ಕಲಿಕೆಗೆ ತಾತ್ವಿಕವಾಗಿ ಯೋಚನೆ ಮಾಡ ಬೇಕಾಗುತ್ತದೆ. ಪಠ್ಯ ಪುಸ್ತಕಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇರಬೇಕು. ಪಠ್ಯದಲ್ಲಿ ದೂರದೃಷ್ಟಿಯಿರಬೇಕು. ಎಲ್ಲಾ ಧರ್ಮಗಳನ್ನು ಒಂದಾಗಿ ತೆಗೆದುಕೊಂಡು ಹೋಗಬೇಕು ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗುವ ಬಗ್ಗೆ ಮತ್ತು ರಾಜಕೀಯದ ಬಗ್ಗೆ ಮಾತನಾಡಲಾರೆ. ಆದರೆ, ಸಣ್ಣ ಕೈಗಾರಿಕೆಗಳು ಬೆಳೆದಾಗ ಮಾತ್ರ ದೇಶದ ಅಭಿವೃದ್ಧಿಯಾಗುತ್ತದೆ ಎಂದರು.
ದೇಶದ ಸಿಪಾಯಿಗಳಿದಂತೆ: ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಸಲಹೆಗಾರಪಿಜಿಕೆ ನಾಯರ್ ಮಾತನಾಡಿ, ಸರ್ಕಾರಕ್ಕೆ ಸಣ್ಣ ಕೈಗಾರಿಕೆಗಳಿಂದ ಎಲ್ಲಾ ಭಾಗದಲ್ಲಿ ಬೆಳವಣಿಗೆಗೆ ಆಗುತ್ತದೆ. ಕೈಗಾರಿಕೀಕರಣಕ್ಕೆ ರಾಜಕೀಯ ಪಕ್ಷಗಳನ್ನು ತರಬೇಡಿ. ಕೈಗಾರಿಕೋದ್ಯಮಿಗಳು ದೇಶದ ಸಿಪಾಯಿಗಳಿ ದಂತೆ. ನಾವು ಯುದ್ಧ ಸಲಕರಣೆಗಳನ್ನು ಉತ್ಪಾದನೆ ಮಾಡಿದಾಗ ಮಾತ್ರ ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆಯಾಗುತ್ತದೆ ಎಂದರು.
ಸಂಘದ ಅಧ್ಯಕ್ಷ ಕಂಠಪ್ಪ, ಕಂಪನಿ ಮುಖ್ಯಸ್ಥ ಗೌರಿಶಂಕರ್, ಕಂಪನಿ ಕಾರ್ಮಿಕರು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.