ಮೊಬೈಲ್ ಆರೋಗ್ಯ ತಪಾಸಣಾ ವಾಹನ ಕೊಡುಗೆ
Team Udayavani, Jan 27, 2020, 5:15 PM IST
ಹೊಸಕೋಟೆ: ತಾಲೂಕಿನ ದೇವನಗೊಂದಿಯಲ್ಲಿರುವ ಭಾರತ್ ಪೆಟ್ರೋಲಿಯಂ ಸಂಸ್ಥೆಯ ವತಿಯಿಂದ ಮೊಬೈಲ್ ಆರೋಗ್ಯ ತಪಾಸಣಾ ವಾಹನವನ್ನು ಕೊಡುಗೆಯಾಗಿ ನೀಡಲಾಗಿದೆ ಎಂದು ಸಂಸ್ಥೆಯ ಮಾರುಕಟ್ಟೆ ಮುಖ್ಯಸ್ಥ ಸಂಜೀವ್‌ಕುಮಾರ್ ಹೇಳಿದರು. ಅವರು ಸಂಸ್ಥೆಯ ಆವರಣದಲ್ಲಿ ಮೊಬೈಲ್ ಆರೋಗ್ಯ ತಪಾಸಣಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಆರೋಗ್ಯವಂತ ಸಮಾಜ ನಿರ್ಮಿಸಲು ವಾಹನವನ್ನು ನೀಡಲಾಗಿದ್ದು ವಾರದಲ್ಲಿ 6 ದಿನಗಳ ಕಾಲ ಸೇವೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರಾಯೋಗಿಕವಾಗಿ ತಾಲೂಕಿನ ಅನುಗೊಂಡನಹಳ್ಳಿ ಮತ್ತು ಜಡಿಗೇನಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿದ್ದು ಪ್ರಾಥಮಿಕ ತಪಾಸಣಾ ಯಂತ್ರಗಳನ್ನು ಒಳಗೊಂಡು ತುರ್ತು ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ.
ಇದರಿಂದ ಗಡಿಪ್ರದೇಶದ ನಿವಾಸಿಗಳಿಗೆ ಉಪಯೋಗವಾಗಲಿದ್ದು ಈ ಸೇವೆಯನ್ನು ಹಂತ ಹಂತವಾಗಿ ತಾಲೂಕಿನಾದ್ಯಂತ ವಿಸ್ತರಿಸಲು ಯೋಜಿಸಲಾಗಿದೆ. ವಾರ್ಷಿಕ 25 ಸಾವಿರ ರೋಗಿಗಳು ಈ ವ್ಯವಸ್ಥೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದ್ದು ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಸೌಲಭ್ಯ ಒದಗಿಸಲಾಗಿದೆ ಎಂದರು. ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ರಿತೀಶ್ ಎಂ. ಲೊನಾರಿ, ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.