ಪ್ರವಾಹ ಪರಿಹಾರಕ್ಕೆ ಹೆಚ್ಚಿನ ನೆರವು: ಸಚಿವ

Team Udayavani, Aug 10, 2020, 8:57 AM IST

ಪ್ರವಾಹ ಪರಿಹಾರಕ್ಕೆ ಹೆಚ್ಚಿನ ನೆರವು: ಸಚಿವ

ನೆಲಮಂಗಲ: ರಾಜ್ಯದಲ್ಲಿ ಎದುರಾಗಿರುವ ಪ್ರವಾಹದ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು ನಷ್ಟ ಪರಿಹಾರಕ್ಕೆ ಪ್ರಧಾನಿ ಹೆಚ್ಚಿನ ನೆರವು ನೀಡುವ ವಿಶ್ವಾಸವಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು.

ನಗರದ ಅಡೆಪೇಟೆಯ ಶ್ರೀ ಹಿಪ್ಪೆ ಆಂಜನೇಯ ಸ್ವಾಮಿ ದೇವಾಲಯದ ಪುನರ್‌ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರವಾಹದಿಂದ ಸಮಸ್ಯೆ ಆಗಿರುವ ಜಿಲ್ಲೆಗಳ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ನಷ್ಟವಾಗಿರುವ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಕ್ಷಣ ಪರಿಹಾರ ನೀಡಲು ಎಲ್ಲಾ ತಯಾರಿ ನಡೆಸಲಾಗಿದೆ ಎಂದು ತಿಳಿಸಿದರು.

ಹಾಸನ ಜಿಲ್ಲೆಯಲ್ಲಿ 250ಕ್ಕೂ ಹೆಚ್ಚು ಮನೆಗಳು ಬಿದ್ದಿದ್ದು ತಾತ್ಕಾಲಿಕವಾಗಿ 10,000 ನೀಡಲಾಗಿದೆ. ಮನೆಗಳು ಬಿದ್ದಿರುವ ಪ್ರಮಾಣವನ್ನು ಸಮೀಕ್ಷೆ ಮಾಡಿ ಮೂರು ಹಂತದಲ್ಲಿ 1 ಲಕ್ಷ ರೂ., 3 ಲಕ್ಷ ರೂ. ಹಾಗೂ ಸಂಪೂರ್ಣ ಬಿದ್ದಿದ್ದರೆ 5ಲಕ್ಷ ರೂ. ಪರಿಹಾರ ನೀಡಲು ಪಟ್ಟಿ ಮಾಡಲಾಗುತ್ತಿದೆ ಎಂದು ಹೇಳಿದರು. ಹಾಸನ ಜಿಲ್ಲೆ ಸೇರಿದಂತೆ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಬಗ್ಗೆ ಅರಿತು ಬಂದಿದ್ದೇನೆ. ನೀರಾವರಿ ಇಲಾಖೆಯ ಸಭೆ ಮುಗಿಸಿಕೊಂಡು ಮತ್ತೆ ಸಂಕಷ್ಟದ ಪ್ರದೇಶಗಳಿಗೆ ಭೇಟಿ ನೀಡಲಿದ್ದೇನೆ. ಈಗಾಗಲೇ ಸಕಲೇಶ್ವರ ತಾಲೂಕಿನಲ್ಲಿ ಮೃತನಾದ ವ್ಯಕ್ತಿ ಮನೆಗೆ ತೆರಳಿ 5 ಲಕ್ಷ ರೂ.ಪರಿಹಾರದ ಚೆಕ್‌ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.

ಇತಿಹಾಸವುಳ್ಳ ದೇವಾಲಯ: ನಗರದ ಅಡೆಪೇಟೆಯ ಹಿಪ್ಪೆ ಆಂಜನೇಯ ಸ್ವಾಮಿ ದೇವಾಲಯ 800ವರ್ಷಗಳ ಇತಿಹಾಸ ಹೊಂದಿದ್ದು ದೇವಾಲಯವನ್ನು ಜೀರ್ಣೋದ್ಧಾರ ಮಾಡಿ ಪುನರ್‌ ಪ್ರತಿಷ್ಠಾಪನೆ ಮಾಡಲಾಯಿತು. ಆ.8 ರಿಂದ ಆ.10ರವರೆಗೂ ಆಂಜನೇಯಸ್ವಾಮಿ, ಮಹಾ ಗಣಪತಿ ದೇವಾಲಯದ ಪ್ರತಿಷ್ಠಾಪನೆ ನಡೆಯಲಿದೆ. ಈ ಸಂದರ್ಭದಲ್ಲಿ ಋಷಿಕುಮಾರ ಸ್ವಾಮೀಜಿ, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ನಗರಸಭೆ ಸದಸ್ಯ ಗಂಗಾಧರ್‌ಗಣಿ, ಸಬ್‌ ಇನ್ಸ್‌ಪೆಕ್ಟರ್‌ ಡಿ.ಆರ್‌. ಮಂಜುನಾಥ್‌, ರಾಜಸ್ವ ನಿರೀಕ್ಷಕ ರವಿಕುಮಾರ್‌, ವಕೀಲ ರಘುನಾಥ್‌ ಮತ್ತಿತರರಿದ್ದರು.

ಸೋಮವಾರ ಕಂದಾಯ ಸಚಿವರು ಹಾಗೂ ಗೃಹ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಜ್ಯದಲ್ಲಿ ಉಂಟಾಗಿರುವ ಪ್ರವಾ ಹದ ನಷ್ಟದ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಲಿದ್ದೇವೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ಸಂಕಷ್ಟದ ಪರಿಸ್ಥಿತಿಯ ಪರಿಹಾರವಾಗಿ ಹೆಚ್ಚಿನ ಅನುದಾನದ ನೆರವು ನೀಡಲಿದೆ.  ಗೋಪಾಲಯ್ಯ, ಸಚಿವ

ಟಾಪ್ ನ್ಯೂಸ್

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು ?

India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.