ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿ
ಚುನಾವಣಾ ಪ್ರಕ್ರಿಯೆಯಲ್ಲಿ ಕ್ಷೇತ್ರದ ಶಾಸಕರು, ಸಂಸದರು ಭಾಗವಹಿಸಲು ಎಸಿ ಸೂಚನೆ
Team Udayavani, Oct 9, 2021, 11:36 AM IST
Representative Image
ದೊಡ್ಡಬಳ್ಳಾಪುರ: ನಗರಸಭೆ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನದ ಮೊದಲ ಅವಧಿಗೆ ಅ.26ರಂದು ಚುನಾವಣೆ ನಿಗದಿಪಡಿಸಲಾಗಿದ್ದು, ನಗರಸಭೆಯ ಚುನಾಯಿತ ಸದಸ್ಯರು, ಕ್ಷೇತ್ರದ ಶಾಸಕರು ಹಾಗೂ ಸಂಸದರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಸೂಚನೆ ನೀಡಿದ್ದಾರೆ.
ಅ.26ರಂದು ನಗರಸಭೆ ಕಾರ್ಯಾಲ ಯದಲ್ಲಿ ಮಧ್ಯಾಹ್ನ 1ಗಂಟೆಗೆ ಚುನಾವಣೆ ನಡೆಯಲಿದೆ. ಅಂದು 9ಗಂಟೆಗೆ ನಾಮಪತ್ರ ಸ್ವೀಕರಿಸಲಾಗುವುದು. ನಂತರ ಪ್ರಕ್ರಿಯೆಗಳು ಪೂರ್ಣಗೊಂಡು ಚುನಾವಣೆ ನಡೆಯಲಿದೆ. ಮೊದಲ 24 ತಿಂಗಳ ಅವಧಿಗೆ ನಗರಸಭೆಯ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆಗೆ, ಉಪಾದ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ಅಭ್ಯರ್ಥಿಗೆ ಮೀಸಲಾಗಿದೆ. ಇನ್ನೂ ಆಗದ ಮೈತ್ರಿ: ಚುನಾವಣೆಯಲ್ಲಿ ನಗರಸಭೆಯ ಒಟ್ಟು 31 ಸ್ಥಾನಗಳಲ್ಲಿ ಬಿಜೆಪಿ-12, ಕಾಂಗ್ರೆಸ್-9, ಜೆಡಿಎಸ್ -7 ಹಾಗೂ ಪಕ್ಷೇತರ -3 ಅಭ್ಯರ್ಥಿಗಳು ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:- ಪಂಚಭೂತಗಳ ಆರಾಧನೆಯಿಂದ ಭಗವಂತನ ಸಾನ್ನಿಧ್ಯ
ಯಾವ ಪಕ್ಷಕ್ಕೂ ಸಹ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷ ಸ್ಥಾನ ಯಾವ ಪಕ್ಷಕ್ಕೆ ಒಲಿಯಲಿದೆ ಎನ್ನುವ ಕುತೂಹಲ ಎಲ್ಲರಲ್ಲಿ ಕಾಡುತ್ತಿದೆ. ನಗರಸಭೆಯಲ್ಲಿ 12 ಜನ ಬಿಜೆಪಿ ಸದಸ್ಯರು, 3 ಜನ ಪಕ್ಷೇತರ ಸದಸ್ಯರು, ಸಂಸತ್ ಸದಸ್ಯರ ಒಂದು ಮತ ಸೇರಿದರೆ 16 ಮತಗಳಾಗಲಿವೆ. ಆದರೆ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡರೆ ಶಾಸಕರ ಒಂದು ಮತವು ಸೇರಿದಂತೆ 17 ಆಗಲಿದೆ. ಆದರೆ, ಯಾವ ಪಕ್ಷ ಯಾರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಈಗ ಚುನಾವಣಾ ದಿನಾಂಕ ಪ್ರಕಟವಾಗಿರುವುದರಿಂದ ಮೈತ್ರಿ ಕುರಿತಾಗಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.