ಘಾಟಿಯಲ್ಲಿ ಶ್ರದ್ಧಾ ಭಕ್ತಿಯಿಂದ ನಾಗರಪಂಚಮಿ ಆಚರಣೆ
Team Udayavani, Aug 6, 2019, 3:00 AM IST
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಹಬ್ಬಗಳ ಸಾಲಿನ ಮೊದಲ ಹಬ್ಬ ನಾಗರಪಂಚಮಿಯನ್ನು ತಾಲೂಕಿನಲ್ಲಿ ಸಂಭ್ರಮ-ಸಡಗರ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಜನಪದರಲ್ಲಿ ಅಣ್ಣ ತಂಗಿಯರ ಬಾಂಧವ್ಯದ ಬೆಸುಗೆಯಾಗಿ ಆಚರಿಸಲ್ಪಡುವ ಈ ಹಬ್ಬದಲ್ಲಿ ನಾಗಪೂಜೆ ಪ್ರಮುಖವಾಗಿದೆ. ಈ ದಿನದಂದು ನಾಗರಕಲ್ಲುಗಳಿಗೆ, ಹುತ್ತಗಳಿಗೆ ಪೂಜೆ ಸಲ್ಲಿಸಿ ಮನೆಯಲ್ಲಿ ಸಿಹಿಯೂಟ ಮಾಡುವ ಮೂಲಕ ಆಚರಿಸಲಾಗುತ್ತದೆ.
ಭಾನುವಾರವಷ್ಟೇ ನಾಗರ ಚೌತಿ ಆಚರಿಸಲಾಯಿತು. ಮದುವೆಯಾದ ನವ ದಂಪತಿಗಳು ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಮಹಿಳೆಯರು ನಾಗ ಪ್ರತಿಷ್ಠಾಪನೆಯಾಗಿರುವ ದೇವಾಲಯಗಳಿಗೆ ತೆರಳಿ ನಾಗರ ಕಲ್ಲಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ತಾಲೂಕಿನ ಘಾಟಿ ಪುಣ್ಯಕ್ಷೇತ್ರದಲ್ಲಿನ ನಾಗರಕಲ್ಲುಗಳಿಗೆ ಸಹಸ್ರಾರು ಭಕ್ತಾದಿಗಳು ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು. ಸಹಸ್ರಾರು ಭಕ್ತರು ದೇವಾಲಯದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ನಾಗರಪಂಚಮಿ ವಿಶೇಷವಾಗಿ ಸುಬ್ರಹ್ಮಣ್ಯ ಸ್ವಾಮಿಯ ರಾಜಬೀದಿ ಉತ್ಸವ ನಡೆಯಿತು.
ನಾಗರ ಕಲ್ಲುಗಳನ್ನು ಪೂಜಿಸುವುದರಿಂದ ನಾಗದೋಷದಿಂದ ಉಂಟಾಗುವ ಎಲ್ಲಾ ಸಮಸ್ಯೆ ಬಗೆ ಹರಿಯುತ್ತದೆ. ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ದೇವಸ್ಥಾನ ನಾಗದೋಷಗಳಿಗೆ ಹೆಸರವಾಸಿ ಪುಣ್ಯಕ್ಷೇತ್ರ. ಇಲ್ಲಿ ಮಕ್ಕಳ ದೋಷ. ಸ್ತ್ರೀ ದೋಷಗಳಿದ್ದರೆ ಇಲ್ಲಿ ಬಂದು ನಾಗರಕಲ್ಲುಗಳಿಗೆ 5 ವಾರ ಪೂಜೆ ಸಲ್ಲಿಸಿದರೆ ದೋಷ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆಯಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ನಿಧಿ ಹೇಳುತ್ತಾರೆ.
ನಗರದ ನೆಲದಾಂಜನೇಯಸ್ವಾಮಿ ದೇವಾಲಯ ಮೊದಲಾಗಿ, ಕೆರೆಕಟ್ಟೆ ನಾಗರಕಲ್ಲುಗಳು ಹಾಗೂ ವಿವಿಧ ದೇವಾಲಯದಲ್ಲಿನ ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮದುವೆಯಾದ ಹೆಣ್ಣುಮಕ್ಕಳನ್ನು ತವರು ಮನೆಗೆ ಕರೆಸಿಕೊಂಡು ಅವರಿಗೆ ಉಡಿ ತುಂಬುವುದು, ಅವರು ತಮ್ಮ ತವರು ಮನೆಗೆ ಒಳಿತಾಗಲಿ ಎಂದು ಹಾರೈಸುವುದು. ವರ್ಷ ಪೂರ್ತಿ ಕೆಲಸ ಮಾಡುವ ರೈತಾಪಿ ಜನರಿಗೆ ಹಾವು ಕಚ್ಚಬಾರದು ಎನ್ನುವ ನಂಬಿಕೆಯಿಂದ ಹಾಲು ಎರೆದು ಪೂಜಿಸುವುದು ಹಬ್ಬದ ವಿಶೇಷತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.