ರಾಜ್ಯದಲ್ಲಿ ವೈದ್ಯರ ಸಮಸ್ಯೆ ಬಾರದಂತೆ ಕ್ರಮ: ಗಿರೀಶ್
Team Udayavani, Jul 9, 2020, 6:34 AM IST
ನೆಲಮಂಗಲ: ರಾಜ್ಯದಲ್ಲಿ ವೈದ್ಯರ ಕೊರತೆ ಕಂಡು ಬರುವುದಿಲ್ಲ, ಬಂದರೂ ತಕ್ಷಣ ಸರಿಪಡಿಸಿಕೊಳ್ಳಲಾಗುತ್ತದೆ ಎಂದು ವೈದ್ಯಕೀಯ ಇಲಾಖೆ ನಿರ್ದೇಶಕ ಡಾ.ಗಿರೀಶ್ ತಿಳಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸರ್ಕಾರದ ವತಿ ಯಿಂದ ನಿರ್ಮಾಣ ಮಾಡಲಾಗುತ್ತಿರುವ ಸುಮಾರು 10100 ಬೆಡ್ ಗಳ ಕೋವಿಡ್ ಹಾರೈಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ರಾಜ್ಯದಲ್ಲಿ 1 ಲಕ್ಷ ಬೆಡ್ ವ್ಯವಸ್ಥೆ ಮಾಡಲಾಗಿದ್ದು ವೈದ್ಯರನ್ನು ನಿಯೋಜನೆ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆ, ನರ್ಸಿಂಗ್ ಕಾಲೇಜುಗಳ ಆಡಳಿತ ಮಂಡಳಿ ಸ್ಪಂದಿಸಿದ್ದು ಎಲ್ಲರ ಸಹಕಾರದೊಂದಿಗೆ ಸಕಲ ಸಿದಟಛಿತೆ ಮಾಡಿಕೊಳ್ಳಲಾಗಿದೆ ಎಂದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 600ಕ್ಕೂ ಹೆಚ್ಚು ನರ್ಸಿಂಗ್ ರೂಮ್, ಸರ್ಕಾರಿ, ಖಾಸಗಿ 56 ಮೆಡಿಕಲ್ ಕಾಲೇಜು, 600 ನರ್ಸಿಂಗ್ ಕಾಲೇಜನ್ನು ಕೇಂದ್ರಗಳಾಗಿ ಬಳಸಿಕೊಳ್ಳಲಾಗುತ್ತದೆ.
ಆಯುರ್ವೇದ, ಡೆಂಟಲ್, ಆಲೋಪತಿ, ಖಾಸಗಿ ಆಸ್ಪತ್ರೆಗಳ ವೈದ್ಯರು ಸೇರಿ ನರ್ಸಿಂಗ್ ವಿದ್ಯಾರ್ಥಿಗಳು, ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್ ಆಸ್ಪತ್ರೆ, ಆರೈಕೆ ಕೇಂದ್ರಗಳಿಗೆ ನಿಯೋಜನೆ ಮಾಡಲಿದ್ದಾರೆಂದರು. ರಾಜ್ಯದಲ್ಲಿ 50 ಬೆಡ್ ಗಳಿರುವ ಸರ್ಕಾರಿ,ಖಾಸಗಿ ಆಸ್ಪತ್ರೆ ಸೇರಿದಂತೆ 1 ಲಕ್ಷ ಬೆಡ್ ವ್ಯವಸ್ಥೆ ಮಾಡಲಾಗಿದ್ದು 17 ತಂಡಗಳಲ್ಲಿ ವೈದ್ಯರ ನಿಯೋಜನೆ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಹೇಳಿದರು.
ಹಾಗೆಯೇ ಕೋವಿಡ್ 19 ಸೋಂಕಿತರಿಂದ ವೈದ್ಯರಿಗೂ ಸಮಸ್ಯೆ ಯಾಗುತ್ತಿರುವುದರಿಂದ ಜನ ಸಾಮಾನ್ಯರಲ್ಲಿ ಆತಂಕ ವಿರುತ್ತದೆ. ಆದರೆ ಎಲ್ಲಾ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುತ್ತಿದ್ದು ವೈದ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.