ತಾ.ಆಸ್ಪತ್ರೆ ಮೇಲ್ದರ್ಜೆಗೆ ಸಿಗದ ಅನುಮೋದನೆ

ಶಾಸಕರ ಮನವಿಗೆ ಸ್ಪಂದಿಸದ ರಾಜ್ಯ ಸರ್ಕಾರ , ಸಚಿವ ಸಂಪುಟ ನಿರ್ಣಯ ಮುಂದೂಡಿಕೆ

Team Udayavani, Oct 31, 2020, 2:08 PM IST

ತಾ.ಆಸ್ಪತ್ರೆ ಮೇಲ್ದರ್ಜೆಗೆ ಸಿಗದ ಅನುಮೋದನೆ

ದೊಡ್ಡಬಳ್ಳಾಪುರ: ತಾಲೂಕಿನ ತಾಯಿ ಮತ್ತು ಮಗು ತಾಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸಿಗಬೇಕಾದ ಆಡಳಿತಾತ್ಮಕ ಅನುಮೋದನೆ ಸಿಗದೇ ಸಂಪುಟ ನಿರ್ಣಯವನ್ನು ಮುಂದೂಡ ಲಾಗಿರುವುದು ತಾಲೂಕಿನ ಜನರಿಗೆ ನಿರಾಸೆ ಮೂಡಿಸಿದೆ.

3.5 ಲಕ್ಷ ಜನಸಂಖ್ಯೆ ಇರುವ ತಾಲೂಕಿನಲ್ಲಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮೊದಲು ನಗರದ ಹಳೆ ಬಸ್‌ ನಿಲ್ದಾಣದ ಬಳಿ ಕ್ಯಾರ್ಯ ನಿರ್ವಹಿಸುತ್ತಿತ್ತು. ಇದೀಗ ಆಸ್ಪತ್ರೆ ಪ್ರವಾಸಿ ಮಂದಿರದ ಬಳಿ ಇರುವ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಆಸ್ಪತ್ರೆಗೆ ನಿತ್ಯ 1,500 ಕ್ಕೂ ಹೆಚ್ಚು ಹೊರ ರೋಗಿಗಳು ಭೇಟಿ ನೀಡುತ್ತಿದ್ದಾರೆ. ಇದರೊಂದಿಗೆ ಹೆರಿಗೆ ವಾರ್ಡ್‌, ಇತರೆ ತುರ್ತು ಚಿಕಿತ್ಸೆಗಳಿಗಾಗಿ ನಿತ್ಯ ನೂರಾರು ರೋಗಿಗಳು ದಾಖಲಾಗುತ್ತಿದ್ದಾರೆ.

ಆದರೆ, ರೋಗಿಗಳ ಸಂಖ್ಯೆಗೆ ಅನುಗುಣವಾಗಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಆಸ್ಪತ್ರೆಯ ಸ್ಥಿತಿಗತಿಗಳ ಸುಧಾರಣೆಗಾಗಿ ಯೋಜನೆ ರೂಪುಗೊಂಡಿತ್ತು.

ಕೋವಿಡ್‌-19 ಒತ್ತಡ: ಕೋವಿಡ್‌ ಸೋಂಕಿ ನಂತಹ ಕಷ್ಟದ ಸಂದರ್ಭದಲ್ಲಿ ತಾಲೂಕಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಿದ್ದರೆ, ಜನತೆಗೆ ಮತ್ತಷ್ಟು ಸೌಲಭ್ಯ ದೊರಕುತ್ತಿತ್ತು. ಕೇವಲ 2 ಮಾತ್ರ ಆಕ್ಸಿಜನ್‌ ಸೌಲಭ್ಯ ಇರುವುದರಿಂದ ಕೋವಿಡ್‌ ಸೋಂಕಿತರನ್ನು ಇತರ ತಾಲೂಕಿಗೆ ಅಥವಾ ಖಾಸಗಿ ಆಸ್ಪತ್ರೆಗೆ ಕಳಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಕ್ಸಿಜನ್‌ ಕೊರತೆ ಯಿಂದಾಗಿ ಸಾವು ನೋವುಗಳು ಉಂಟಾ ಗುತ್ತಿರುವುದರಿಂದ ಜನರ ಆತಂಕ ಹೆಚ್ಚಿಸಿದೆ.ಸಿಗದ ಆಡಳಿತಾತ್ಮಕ ಅನುಮೋದನೆ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಿರ್ಮಾಣವಾದ ಆಸ್ಪತ್ರೆ ತಾಲೂಕಿನ ಜನರಿಗೆ ಉತ್ತಮ ಚಿಕಿತ್ಸೆ ನೀಡುತ್ತಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನಗರದಲ್ಲಿನ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ 250 ಹಾಸಿಗೆ ಆಸ್ಪತ್ರೆ ಮಾಡಲು 10 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಡಲಾಗಿತ್ತು. ಆದರೆ ಜಿಲ್ಲಾಸ್ಪತ್ರೆಗೆ ಪೂರಕವಾದ ಸೌಲಭ್ಯಗಳು ಸಿಗದೇ ವಿಳಂಬವಾಗುತ್ತಿವೆ.

ದೊಡ್ಡಬಳ್ಳಾಪುರ ತಾಲೂಕಿನ 250 ಹಾಸಿಗೆ ಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ಯನ್ನಾಗಿ ಒಟ್ಟು 89.10 ಕೋಟಿ ರೂ. ಅಂದಾಜು ಮೊತ್ತದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡದೆ, ಸಚಿವ ಸಂಪುಟ ನಿರ್ಣಯವನ್ನು ಮುಂದೂಡಲಾಗಿದೆ. ಈ ಕುರಿತಂತೆ ಶಾಸಕ ಟಿ.ವೆಂಕಟರಮಣಯ್ಯ ಪದೇ ಪದೇ ಸದನದಲ್ಲಿ ಮನವಿ ಮಾಡಿದರೂ, ರಾಜ್ಯ ಸರ್ಕಾರದಿಂದ ಅನುಮೋದನೆ ಸಿಕ್ಕಿಲ್ಲ.

ಮಲತಾಯಿ ಧೋರಣೆ :  ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆ ಯನ್ನು ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡುವಂತೆ ಪದೇ ಪದೇ ಮನವಿಮಾಡಿದರು ರಾಜ್ಯ ಸರ್ಕಾರ ಸ್ಪಂದಿಸದೆ ಮಲತಾಯಿ ಧೋರಣೆ ಮಾಡುತ್ತಿದೆ. ಈ ಹಿಂದೆ ಪೂರ್ತಿ ಪ್ರಮಾಣದ ಸಂಪುಟ ವಿಸ್ತರಣೆ ನಂತರ ಅನುಮೋದನೆ ನೀಡಲಾಗುವುದು ಎಂದು ಉತ್ತರ ನೀಡಲಾಗಿತ್ತು. ಆದರೆ ಈ ವೇಳೆ ಯಾವುದೇ ಉತ್ತರ ನೀಡದೆ, ಸಚಿವ ಸಂಪುಟ ನಿರ್ಣಯ ಮುಂದೂಡುವ ಮೂಲಕ ಕೋವಿಡ್‌ ಕಷ್ಟದ ಸಂದರ್ಭದಲ್ಲಿ ಜನರಿಗೆ ಬಹು ಅಗತ್ಯವಾಗಿದ್ದ ಸೌಲಭ್ಯದಿಂದ ವಂಚಿತರನ್ನಾಗಿಸುತ್ತಿದೆ ಎನ್ನುತ್ತಾರೆ ಶಾಸಕ ಟಿ.ವೆಂಕಟರಮಣಯ್ಯ

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.