ತ್ಯಾಜ್ಯ ಸಂಗ್ರಹಣೆಗೆ ಶುಲ್ಕ ವಿಧಿಸಲು ಸೂಚನೆ
Team Udayavani, Mar 2, 2021, 3:32 PM IST
ದೇವನಹಳ್ಳಿ: ಜಿಲ್ಲೆಯಲ್ಲಿರುವ ಎಲ್ಲ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿನ ಮನೆ-ಮನೆಗೆ ತೆರಳಿ, ವಿಂಗಡಣೆ ಮಾಡಿರುವ ಕಸ ಸಂಗ್ರಹಣೆ ಮಾಡಬೇಕು ಹಾಗೂ ತ್ಯಾಜ್ಯ ಸಂಗ್ರಹಣೆಗೆ ನಿರ್ದಿಷ್ಟಶುಲ್ಕ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೊಬ್ಬರ ವನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲುಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರಸಭೆಹಾಗೂ ಪುರಸಭೆಗಳು ರಾಷ್ಟ್ರೀಯ ಹಸಿರುನ್ಯಾಯಾಧೀಕರಣದ ಪೀಠ ನೀಡಿರುವ ಎಲ್ಲ ಆದೇಶಗಳನ್ನು ತಪ್ಪದೇ ಪಾಲಿಸುವ ಕುರಿತು ಮಾಧ್ಯಮಗಳ ಮೂಲಕ ಜಾಹೀರಾತು ನೀಡುವುದು.ಕರಪತ್ರ ಹಂಚುವ ಮೂಲಕ ಕಸ ವಿಂಗಡಣೆ ಹಾಗೂ ಶುಲ್ಕ ವಿಧಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಈಗಾಗಲೇ ಜಮೀನು ಮಂಜೂರು ಮಾಡಲಾಗಿದ್ದು, ಸರ್ವೆ ಮಾಡಿಸಿ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಎಂದರು.
5 ಸಾವಿರ ರೂ. ನಿಗದಿ: ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ ಮಾತನಾಡಿ, ದೇವನಹಳ್ಳಿ ಪುರಸಭೆಯಲ್ಲಿ ಪ್ರತಿದಿನ 2ಟನ್ ಹಸಿ ಕಸ ಸಂಗ್ರಹವಾಗುತ್ತಿದ್ದು, ದಿನವೊಂದಕ್ಕೆ0.5 ಟನ್ ಗೊಬ್ಬರ ತಯಾರಾಗುತ್ತಿದೆ. ಪ್ರತಿ ಟನ್‌ಗೆ ಐದು ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ. ಪ್ರತಿತಿಂಗಳು ಒಂದು ಟನ್ ಗೊಬ್ಬರ ಮಾರಾಟಮಾಡಲಾಗುತ್ತಿದೆ. ವಿಜಯಪುರ ಪುರಸಭೆಯಲ್ಲಿ ಪ್ರತಿದಿನ ಒಂದು ಟನ್ ಹಸಿ ಕಸ ಸಂಗ್ರಹವಾಗುತ್ತಿದೆ ಎಂದು ಮಾಹಿತಿ ನೀಡಿದರು.
15 ಟನ್ ಗೊಬ್ಬರ ಮಾರಾಟ: ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಪ್ರತಿದಿನ 8 ಟನ್ ಹಸಿಕಸ ಸಂಗ್ರಹಣೆಯಾಗುತ್ತಿದ್ದು, ಪ್ರತಿದಿನ 4ಟನ್ ಗೊಬ್ಬರತಯಾರಾಗುತ್ತಿದೆ. ಪ್ರತಿ ಟನ್‌ಗೆ 1 ಸಾವಿರ ರೂಪಾಯಿನಿಗದಿ ಪಡಿಸಲಾಗಿದ್ದು, ಪ್ರತಿ ತಿಂಗಳು 15 ಟನ್ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ದಾಸ್ತಾನಿನಲ್ಲಿ144 ಟನ್ ಗೊಬ್ಬರ ಶೇಖರಿಸಲಾಗಿದ್ದು, ರೈತರಿಗೆ ಈದರದಲ್ಲೇ ಮಾರಾಟ ಮಾಡಲಾಗುತ್ತಿದೆ ಎಂದರು.
ಹೊಸಕೋಟೆ ನಗರಸಭಾ ವ್ಯಾಪ್ತಿಯಲ್ಲಿ ಪ್ರತಿದಿನ 7ಟನ್ ಹಸಿ ಕಸ ಸಂಗ್ರಹವಾಗುತ್ತಿದ್ದು, ಗೊಬ್ಬರವನ್ನು ನೇರವಾಗಿ ರೈತರಿಗೆ ಉಚಿತವಾಗಿ ನೀಡಲಾಗುತ್ತಿದೆ. ನೆಲಮಂಗಲ ನಗರಸಭೆಯಲ್ಲಿ ಪ್ರತಿದಿನ 3 ಟನ್ ಹಸಿ ಕಸ ಸಂಗ್ರಹವಾಗುತ್ತಿದ್ದು, ಪ್ರತಿದಿನ ಒಂದು ಟನ್‌ಗೊಬ್ಬರ ತಯಾರಾಗುತ್ತಿದೆ.ರೈತರಿಗೆ ಉಚಿತವಾಗಿ ನೀಡಲಾಗುತ್ತಿದೆ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿ.ಎಸ್. ಜಯಸ್ವಾಮಿ, ನಗರಸಭೆ ಆಯುಕ್ತರು, ಪುರಸಭೆಮುಖ್ಯಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಜಿಪಿಎಸ್ ತಂತ್ರಜ್ಞಾನ ಅಳವಡಿಸಿ :
ಕೆಲವು ಕಡೆ ರೈತರು ಜಮೀನು ನೀಡಲು ನಿರಾಕರಿಸಿದ ಘಟನೆಗಳು ನಡೆದಿದ್ದು, ಅಂತಹ ಸಂದರ್ಭದಲ್ಲಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಬೇಕು. ಕಸ ಸಂಗ್ರಹಣೆ ಮಾಡುವ ಎಲ್ಲ ವಾಹನಗಳಿಗೆ ಜಿಪಿಎಸ್ ತಂತ್ರಜ್ಞಾನ ಅಳವಡಿಸಬೇಕು. ವಿಲೇವಾರಿ ಸಂದರ್ಭದಲ್ಲಿ
ಪ್ಲಾಸ್ಟಿಕ್‌ನಂತಹ ವಸ್ತುಗಳನ್ನು ಹರಾಜು ಪ್ರಕ್ರಿಯೆ ನಡೆಸಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದರೊಂದಿಗೆ ನಗರ ವ್ಯಾಪ್ತಿಯಲ್ಲಿ ಹೊಸ ಮನೆ ನಿರ್ಮಿಸುವ ಸಂದರ್ಭದಲ್ಲಿ ಹಳೆಯ ಮನೆ ನೆಲಸಮ ಮಾಡುವ ವೇಳೆ ಕಟ್ಟಡಸಾಮಗ್ರಿಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.