ಬೆಳೆ ಸಮೀಕ್ಷೆ ಮಾಹಿತಿ ನೀಡಲು ಸೂಚನೆ
Team Udayavani, Oct 14, 2017, 11:50 AM IST
ನೆಲಮಂಗಲ: ಬೆಳೆ ಸಮೀಕ್ಷೆ ಮಾಹಿತಿ, ಕೃಷಿಕರ ಹೊಲಗಳಲ್ಲಿ ಬೆಳೆಯಲಾಗಿರುವ ಬೆಳೆ ಕುರಿತಾಗಿ ನಿಖರ ಮಾಹಿತಿ ಸಂಗ್ರಹಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಬೇಕು ಎಂದು ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ತಹಶೀಲ್ದಾರ್ ಎನ್.ರಮೇಶ್ ಸೂಚಿಸಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳೆ ಸಮೀಕ್ಷೆ ಅಂಗವಾಗಿ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕಂದಾಯ ಇಲಾಖೆ ಮತ್ತಿತರ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
30 ದಿನಗಳೊಳಗಾಗಿ ಮಾಹಿತಿ: ಒಂದು ತಿಂಗಳ ಬಳಿಕ ರೈತರಿಗೆ ತಮ್ಮ ಹೊಲಗಳ ಮಾಹಿತಿ ಅಂತರ್ಜಾಲದ ಮೂಲಕ ಲಭ್ಯವಾಗಲಿದೆ. ಇದರಿಂದ ಬರ ಗಾಲ ಎದುರಾದ ವೇಳೆ ರೈತರಿಗೆ ಸೂಕ್ತರೀತಿ ಪರಿಹಾರ ನೀಡಲು ಸರ್ಕಾರಕ್ಕೆ ಉಪಯೋಗವಾಗಲಿದೆ. ತಾಲೂಕಿನಾದ್ಯಂತ 63 ಮಂದಿ ನೌಕರರನ್ನು 3 ತಂಡಗಳು ಗ್ರಾಮಗಳಿಗೆ ಭೇಟಿನೀಡಿ ಪ್ರತಿಯೊಂದು ಗ್ರಾಮದಲ್ಲಿ ಬೆಳೆಯುವಂತಹ ಬೆಳೆ ಮತ್ತು ಕೃಷಿಭೂಮಿ ಮಾಹಿತಿ ಪಡೆಯಲು ಮೊಬೈಲ್‌ಗಳ ಮೂಲಕವೇ ಮಾಹಿತಿ ಸಂಗ್ರಹಿಸಲು ನೂತನವಾದ ಆ್ಯಪ್‌ಗ್ಳನ್ನು ಸರ್ಕಾರದಿಂದಲೇ ಸಿದ್ಧಪಡಿಸಲಾಗಿದ್ದು, 30 ದಿನಗಳೊಳಗಾಗಿ ಇಲಾಖೆ ಅಧಿಕಾರಿಗಳೇ ರೈತರ ಜಮೀನಿಗೆ ಖುದ್ದಾಗಿ ಭೇಟಿ ನೀಡಿ ಸೂಕ್ತ ಮಾಹಿತಿ ಸಂಗ್ರಹಿಸಲಿದ್ದಾರೆ. ಬೆಳೆ ಸಮೀಕ್ಷೆ ಮನಸ್ಸಿಗೆ ಬಂದಂತೆ ವರದಿ ನೀಡಬಾರದು ಎಂದು ಎಚ್ಚರಿಸಿದರು.
ಸಾವಧಾನದಿಂದ ಉತ್ತರ ನೀಡಿ: ರೈತರು ತಮ್ಮ ಮೊಬೈಲ್ ಸಂಖ್ಯೆ ಮತ್ತು ಒಪ್ಪಿಗೆ ಪತ್ರ ನೀಡುವ ಮೂಲಕ ಸಮೀಕ್ಷಕರಿಗೆ ಸಹಕರಿಸ ಬೇಕು. ಕೃಷಿಕರು ಗೊಂದಲ ಕ್ಕೊಳಗಾಗದೇ ತಮ್ಮ ಹೊಲಗಳಲ್ಲಿ ಬೆಳೆಯು ವಂತಹ ಬೆಳೆಗಳ ಮಾಹಿತಿ ನೀಡಬೇಕು. ಸಮೀಕ್ಷಕರು ಬಂದವೇಳೆ ಕೇಳುವ ಪ್ರಶ್ನೆಗಳಿಗೆ ಸಾವಧಾನ ದಿಂದ ಉತ್ತರ ನೀಡಬೇಕು. ಅವಶ್ಯವಿದ್ದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಲಾಗುತ್ತದೆ. ಇದು ರಾಜ್ಯಾದ್ಯಂತ ಏಕಕಾಲಕ್ಕೆ ನಡೆಸಲಾಗುತ್ತಿರುವುದು ಅನುಕೂಲಕರ
ವಾಗಿದೆ. ತಾಲೂಕಿನ ಕಂದಾಯ ಇಲಾಖೆ ವತಿಯಿಂದ ಬೆಳೆ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆ: ತಾಲೂಕು ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಗಟ್ಟೆಗಳ ಮರುವಿಂಗಡಣೆ ಕುರಿತಾಗಿ
ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಸಭೆ ಆಯೋಜಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ 1200 ಮತಗಳಿಗೂ ಹೆಚ್ಚಾಗಿರುವ ಮತಗಟ್ಟೆಗಳು ಹಾಗೂ ಪಟ್ಟಣ ಮತ್ತು ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 1400ಕ್ಕೂ ಹೆಚ್ಚು ಮತಗಳಿರುವ ಮತಗಟ್ಟೆಗಳ ಮರುವಿಂಗಡಣೆ ಮಾಡಲಾಗುತ್ತಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿ ರುವ 243 ಮತಗಟ್ಟೆಗಳ ಪೈಕಿ ಸುಮಾರು 21 ಮತಗಟ್ಟೆಗಳು
ಮರುವಿಂಗಡಣೆಯಾಗಲಿವೆ. ಈ ಕುರಿತಾಗಿ ಅ.16ರಂದು ಸಂಜೆ 4ಗಂಟೆಗೆ ತಾಲೂಕು ಕಚೇರಿ ಸಭಾಂಗಣದಲ್ಲಿ ಸಭೆ
ಆಯೋಜಿಸಲಾಗಿದೆ, ಸಭೆಯಲ್ಲಿ ಮತಗಟ್ಟೆ ಅಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು, ರಾಜಸ್ವನಿರೀಕ್ಷಕರುಗಳು ಭಾಗವಹಿಸಲಿದ್ದು ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಆಸಕ್ತ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರೇಡ್2 ತಹಶೀಲ್ದಾರ್ ರಮೇಶ್, ಲೆಕ್ಕಪರಿಶೋಧಕ ಕ್ರಷ್ಣಪ್ಪ, ಉಪತಹಶೀಲ್ದಾರ್ ರಾಜೇಂದ್ರ, ಶಿರಸ್ತೇದಾರ್ ಕೆಂಪೇಗೌಡ, ರಾಜಸ್ವನಿರೀಕ್ಷಕ ಹರೀಶ್, ಅಶ್ವತ್ಥ್, ಕುಮಾರಸ್ವಾಮಿ ಸೇರಿದಂತೆ ತಾಲೂಕಿನ ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Kuchuku Movie: ಟೀಸರ್‌ನಲ್ಲಿ ಕುಚುಕು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.