ರಾಗಿ ಖರೀದಿಸದೇ ಅಧಿಕಾರಿಗಳು ಪರಾರಿ

ಕೋಪಗೊಂಡಿದ್ದ ರೈತರು ಅಧಿಕಾರಿಗಳುನ್ನು ತರಾಟೆಗೆ ತೆಗೆದುಕೊಂಡರು. 

Team Udayavani, May 24, 2022, 6:20 PM IST

ರಾಗಿ ಖರೀದಿಸದೇ ಅಧಿಕಾರಿಗಳು ಪರಾರಿ

ನೆಲಮಂಗಲ: ತಾಲೂಕಿನ ರೈತರ ರಾಗಿಖರೀದಿ ಮಾಡಬೇಕಾದ ರಾಗಿ ಖರೀದಿ ಕೇಂದ್ರ ಅಧಿಕಾರಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಪರಾರಿಯಾಗಿದ್ದು,
ರೈತರು ರಾಗಿ ಮಾರಾಟ ಮಾಡಲು ಪರದಾಡುವಂತಾಗಿದ್ದು, ರೈತರ ಹಿಡಿಶಾಪಕ್ಕೆ ಅಧಿಕಾರಿಗಳು ಗುರಿಯಾದ ಘಟನೆ ಕೆಂಪಲಿಂಗನಹಳ್ಳಿ ಬಳಿಯ ರಾಗಿ ಖರೀದಿ
ಕೇಂದ್ರದ ಬಳಿಯಲ್ಲಿ ಸಂಭವಿಸಿದೆ.

ತಾಲೂಕಿನ ಕಳೆದ ಎರೆಡು ದಿನ ರೈತರು ತಮ್ಮ ರಾಗಿಯನ್ನು ರಾಗೀ ಖರೀದಿ ಕೇಂದ್ರಕ್ಕೆ ಮಾರಾಟಕ್ಕೆಂದು ತಂದು ಸರತಿ ಸಾಲಿನಲ್ಲಿ ನಿಂತಿದ್ದರು. ಮಧ್ಯಾಹ್ನವಾದರೂ ರಾಗಿ ಖರೀದಿ ಕೇಂದ್ರದ ಚಟುವಟಿಕೆ ಪ್ರಾರಂಭವಾಗದ ಹಿನ್ನೆಲೆ ಕಾಯ್ದು ಕಾಯ್ದು ಕೋಪಗೊಂಡಿದ್ದ ರೈತರು ಅಧಿಕಾರಿಗಳುನ್ನು ತರಾಟೆಗೆ ತೆಗೆದುಕೊಂಡರು.

ಕ್ರಮ ಜರುಗಿಸಲು ಒತ್ತಾಯ: ಈ ವೇಳೆ ಸ್ಥಳದಲ್ಲಿದ್ದ ಕೇಂದ್ರದ ಅಧಿಕಾರಿಗಳು ರಾಗಿ ಖರೀದಿ ಮತ್ತು ಸಾಗಾಣಿಕೆಯ ಗುತ್ತಿಗೆ ಪಡೆದುಕೊಂಡಿರುವ ಗುತ್ತಿಗೆದಾರರು
ಸೋಮವಾರ ರಾಗಿ ಸಾಗಣೆ ಮಾಡಲು ಲಾರಿಗಳನ್ನು ಕಳುಹಿಸಿಲ್ಲ ಎಂದು ಸಬೂಬು ಹೇಳಿದ್ದಾರೆ. ಅಧಿಕಾರಿಗಳ ಉತ್ತರದಿಂದ ಆಕ್ರೋಶಗೊಂಡ ರೈತರು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗದುಕೊಳ್ಳುತಿದ್ದಂತೆ ಅಧಿಕಾರಿಗಳು ತಮ್ಮ ಕಾಲಿಗೆ ಬುದ್ಧಿ ಹೇಳಿದ್ದಾರೆ.

ರೈತರ ಸಮಸ್ಯೆಗಳನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸದ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರಾಗಿ ಮಾರಾಟ ಮಾಡಲು ಬಂದಿದ್ದ ರೈತರು ಆಗ್ರಹಿಸಿದ್ದಾರೆ.

ಬಡ ರೈತರಿಗೆ ಅನ್ಯಾಯ: ಭಾರತೀಯ ಕಿಸಾನ್‌ ಸಂಘದ ರಾಜ್ಯ ಪ್ರದಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್‌ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ಕಳೆದೆರೆಡು ದಿನಗಳಿಂದ ಕಾಯ್ದು ಕುಳಿತಿದ್ದ ರೈತರನ್ನು ಕೈಬಿಟ್ಟು ಲಂಚ ನೀಡಿದ ಕೆಲವೇ ರೈತರಿಗೆ ಟೋಕನ್‌ ನೀಡಿ ಅವರನ್ನು ದೊಡ್ಡಬಳ್ಳಾಪುರಕ್ಕೆ ಕಳುಹಿಸಿ ಕೊಡಲಾಗಿದೆ. ಇದರಿಂದ ಬಡ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿ  ಸರ್ಕಾರ ಸತ್ತು ಹೋಗಿದೆ. ಸಚಿವರುಗಳು ಎಲ್ಲಿಗೆ ಹೋಗಿದ್ದಾರೆಂಬುದು ಗೊತ್ತಿಲ್ಲ, ಅವರಿಗೆ ರೈತರ ಸಮಸ್ಯೆ ಆಲಿಸಿ ಬಗೆಹರಿಸುವ ಮನಸ್ಥಿತಿಯಿಲ್ಲ ಎಂದರು.

ಹೋರಾಟದ ಎಚ್ಚರಿಕೆ
ಆಡಳಿತ ನಡೆಸುವವರು ಮೈಮರೆತು ಕುಳಿತಂತಿದೆ. ರೈತರ ಕಷ್ಟವನ್ನು ಬಗೆಹರಿಸುತ್ತೇವೆಂದು ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬರುವವರು ತಮ್ಮ ಸ್ವಂತ ಹಿತಾಸಕ್ತಿಯನ್ನು ಕಾಯ್ದುಕೊಳ್ಳುತ್ತಿದ್ದಾರೆ. ಈ ಸಮಸ್ಯೆ ಪರಿಹರಿಸಲು ಸ್ಥಳೀಯ ತಾಲೂಕು ಆಡಳಿತ ಮುಂದಾಗಬೇಕು. ಇಲ್ಲವಾದಲ್ಲಿ ರೈತರು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಭಾರತೀಯ ಕಿಸಾನ್‌ ಸಂಘದ ರಾಜ್ಯ ಪ್ರದಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್‌ ಎಚ್ಚರಿಕೆಯನ್ನು ನೀಡಿದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.