ಸ್ವಾಭಿಮಾನ ವೃದ್ಧಿಗೆ ಸರ್ವಜ್ಞರ ವಚನಗಳು ಸಹಕಾರಿ


Team Udayavani, Feb 25, 2019, 7:29 AM IST

swabhi.jpg

ನೆಲಮಂಗಲ: ಜಗತ್ತಿನ ಜನರಿಗೆ ಜೀವನದ ಮೌಲ್ಯಗಳ ಜೊತೆಗೆ ಸ್ವಾಭಿಮಾನವನ್ನು ಹೆಚ್ಚಿಸಲು ಸರ್ವಜ್ಞರ ವಚನಗಳು ಸಹಕಾರಿಯಾಗಿವೆ ಎಂದು ಸಂಸದ ವೀರಪ್ಪ ಮೊಯ್ಲಿ ತಿಳಿಸಿದರು. ಪಟ್ಟಣದ ಚಿಕ್ಕೆಲ್ಲಯ್ಯ ಕಲ್ಯಾಣ ಮಂಟಪದಲ್ಲಿ ತಾಲೂಕು ಕುಂಬಾರರ ಸಂಘದಿಂದ ಆಯೋಜಿಸಲಾಗಿದ್ದ ಕವಿ ಸರ್ವಜ್ಞರ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುಂಬಾರ ಸಮುದಾಯದ ಜನರು ಶ್ರಮಜೀವಿಗಳಾಗಿದ್ದು, ತಮ್ಮ ವೃತ್ತಿಯಲ್ಲಿಯೇ ದೇವರನ್ನು ಕಾಣುವ ಶ್ರೀಮಂತ ಹೃದಯದವರಾಗಿದ್ದಾರೆ. ಜಗತ್ತಿಗೆ ಸರ್ವಜ್ಞರು ನೀಡಿದ ಕೊಡುಗೆ ಅಪಾರ. ಉತ್ತಮ ಜ್ಞಾನಿಗಳಾಗಬೇಕಾದರೆ ಸರ್ವಜ್ಞರ ವಚನಗಳನ್ನು ಅರ್ಥ ಮಾಡಿಕೊಂಡು ಅವರ ಮಾರ್ಗದರ್ಶನಗಳನ್ನು ಅನುಸರಿಸಿದರೆ ಸಾಕು ಎಂದರು. 

ಸಮುದಾಯ ಭವನ: ಕುಂಬಾರ ಸಂಘದವರು ಒಟ್ಟುಗೂಡಿ ಸಮಾಜವನ್ನು ಮುನ್ನಡೆಸುತ್ತಿರುವುದು ಸ್ವಾಗತಾರ್ಹ. ಕುಂಬಾರರ ಸಂಘದ ಬೇಡಿಕೆಯಾದ ಸಮುದಾಯ ಭವನ ನಿರ್ಮಾಣ ಮತ್ತು ಕುಂಬಾರ ನಿಗಮ, ಮಂಡಳಿ ಸ್ಥಾಪನೆ, ಪ್ರಾರ್ಥನಾ ಭವನ ನಿರ್ಮಾಣ ಮಾಡಲು ಜಿಲ್ಲಾಧಿಕಾರಿಗಳ ಬಳಿ ಸ್ಥಳಕ್ಕಾಗಿ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು. 

ಶಾಸಕರ ಭರವಸೆ: ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ಕುಂಬಾರ ಸಮುದಾಯದ ಜನರು ಒಗ್ಗಟ್ಟಿನಿಂದ ಸರ್ವಜ್ಞ ಜಯಂತಿ ಆಚರಣೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಅದೇ ರೀತಿ, ಸಮುದಾಯದ ಜನರು ಒಂದಾಗಿ ಭವನ ನಿರ್ಮಾಣಕ್ಕೆ ಜಾಗವನ್ನು ಗುರುತಿಸಿದರೆ ಮುಂಜೂರು ಮಾಡಿಕೊಡಲು ಮುಂದಾಗುತ್ತೇನೆ ಎಂದು ತಿಳಿಸಿದರು.

ಅದ್ದೂರಿ ಮೆರವಣಿಗೆ: ಕುಂಬಾರರ ಸಂಘ ಆಯೋಜಿಸಿದ್ದ ಕವಿ ಸರ್ವಜ್ಞರ ಜಯಂತಿ ಪ್ರಯುಕ್ತ ತಾಲೂಕು ಕಚೇರಿ ಆವರಣದಿಂದ ಚಿಕ್ಕೆಲ್ಲಯ್ಯ ಕಲ್ಯಾಣ ಮಂಟಪದ ವರೆಗೂ ಸಾಂಸೃತಿಕ ಕಲಾತಂಡಗಳ ಜೊತೆ ಸರ್ವಜ್ಞರ ಭಾವಚಿತ್ರವನ್ನು ಬೆಳ್ಳಿ ಪಲ್ಲಕ್ಕಿಯಲ್ಲಿರಿಸಿ ವಿವಿಧ ಬಗೆಯ ಪುಷ್ಪಗಳಿಂದ ಸಿಂಗರಿಸಿ, ಅದ್ದೂರಿ ಮೆರವಣಿಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಂಜನಮೂರ್ತಿ, ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎನ್‌.ಪಿ.ಹೇಮಂತ್‌ಕುಮಾರ್‌, ಜಿಲ್ಲಾ ಪಂಚಾಯತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ತಿಮ್ಮರಾಯಪ್ಪ, ಪುರಸಭೆ ಸದಸ್ಯ ನಾಗರಾಜು, ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ವೆಂಕಟಾಚಲಯ್ಯ, ತಾಲೂಕುಸಂಘದ ಅಧ್ಯಕ್ಷ ಹನುಮಂತರಾಯಪ್ಪ,

ದೊಡ್ಡಬಳ್ಳಾಪುರ ಅಧ್ಯಕ್ಷ ವಿರೂಪಾಕ್ಷಯ್ಯ, ಹೊಸಕೋಟೆ ಅಧ್ಯಕ್ಷ ಮಹೇಶ್‌, ಕುಂಬೇಶ್ವರ ಸೇವಾ ಟ್ರಸ್ಟ್‌ ಅಧ್ಯಕ್ಷ ಆರ್‌.ಶೀನಿವಾಸ್‌, ಖಜಾಂಚಿ ಗಿರೀಶ್‌, ಕಾರ್ಯದರ್ಶಿ ಎಲ್‌.ಶೀನಿವಾಸ್‌, ಸಂಘದ ಗೌರವಾಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷೆ ಪದ್ಮಾವತಿ, ಪುಟ್ಟರಾಜು, ರೇಣುಕಪ್ರಸಾದ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.