ಗ್ರಾಪಂಗಳಲ್ಲಿ ಮಕ್ಕಳ ಗ್ರಾಮಸಭೆಗೆ ಆದೇಶ

ನವೆಂಬರ್‌-ಡಿಸೆಂಬರ್‌ನಲ್ಲಿ ಪ್ರತಿ ಗ್ರಾಪಂ ಮಟ್ಟದಲ್ಲಿ ಮಕ್ಕಳ ಸಭೆ „ ಮಕ್ಕಳಲ್ಲಿ ಪ್ರಾದೇಶಿಕ, ಶೈಕ್ಷಣಿಕ ಅರಿವಿಗೆ ಸಹಕಾರಿ  

Team Udayavani, Nov 10, 2021, 12:25 PM IST

Orders for children’s gram sabha in grapams

ದೇವನಹಳ್ಳಿ: ಮಕ್ಕಳ ಹಕ್ಕುಗಳು ಹಾಗೂ ಶಾಲೆಗೆ ಬೇಕಾದ ಮೂಲ ಸೌಕರ್ಯಗಳಿಗಾಗಿ ಮಕ್ಕಳಿಗಾಗಿ ಹಮ್ಮಿಕೊಳ್ಳುವ ಮಕ್ಕಳ ಗ್ರಾಮಸಭೆ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಪ್ರತಿವರ್ಷವೂ ಸಹ ಗ್ರಾಪಂ ವ್ಯಾಪ್ತಿಯಲ್ಲಿ ಮಕ್ಕಳ ಗ್ರಾಮಸಭೆಗಳನ್ನು ಸರ್ಕಾರ ನಡೆಸಿಕೊಂಡು ಬಂದಿದೆ. ಕಳೆದ 20 ತಿಂಗಳಿಂದ ಇಡೀ ಪ್ರಪಂಚವನ್ನೇ ಬೆಚ್ಚಿಬೀಳಿಸಿದ್ದ ಕೊರೊನಾದಿಂದಾಗಿ ಶಾಲೆಗಳನ್ನು ಮುಚ್ಚಲಾಗಿತ್ತು.

ಸರ್ಕಾರ ಶಾಲೆಗಳು ಪ್ರಾರಂಭವಾಗಿರುವು ದರಿಂದ ಗ್ರಾಪಂ ವ್ಯಾಪ್ತಿಯಲ್ಲಿ ಮಕ್ಕಳ ಹಕ್ಕು ಗಳು ಹಾಗೂ ಶಾಲೆಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳಲು ಗ್ರಾಮಸಭೆಯನ್ನು ಆಯೋಜಿಸಿತ್ತು. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ನವೆಂಬರ್‌ ಮತ್ತು ಡಿಸೆಂಬರ್‌ ತಿಂಗಳಲ್ಲಿ ಪ್ರತಿ ಗ್ರಾಪಂ ಮಟ್ಟದಲ್ಲಿ ಮಕ್ಕಳ ಗ್ರಾಮಸಭೆಗಳನ್ನು ಆಯೋಜಿಸಿ ಮಕ್ಕಳ ಆತ್ಮಸ್ಥೆ çರ್ಯ ವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ.

ಮಕ್ಕಳ ಭಾಗವಹಿಸುವಿಕೆಗೆ ಅವಕಾಶ: ರಾಜ್ಯ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಭಾಗವಹಿಸುವಿಕೆ ಹಕ್ಕು ಹಿನ್ನಲೆಯಲ್ಲಿ ಗ್ರಾಪಂಗಳಿಂದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ನಡೆಸಲು 2006ರಲ್ಲಿ ಪ್ರಮುಖ ನಿಲುವನ್ನು ತೆಗೆಕೊಂಡು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ 1989, ಭಾರತದ ಸಂವಿಧಾನದಲ್ಲಿ ಮಕ್ಕಳಿಗಿರುವ ಹಕ್ಕುಗಳನ್ನು ಮಾನ್ಯ ಮಾಡುವುದರಲ್ಲಿ ಮಹತ್ತರವಾದ ಹೆಜ್ಜೆಯನ್ನು ಇರಿಸಿದೆ. ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಹಿತಾಸಕ್ತಿಗೆ ಮಕ್ಕಳ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ:- Fatima sana shaikh ಬ್ಯೂಟಿಫುಲ್ ಫೋಟೋ ಗ್ಯಾಲರಿ

2006ರಿಂದ ಪ್ರತಿ ವರ್ಷವೂ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ನಡೆಸಿಕೊಂಡು ಬರಲಾಗಿದೆ. ಪ್ರಸ್ತುತ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ನ.14 ರಿಂದ ಜ.24ರವೆಗೆ 10 ವಾರಗಳ ಕಾಲ ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನ ಮತ್ತು ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ನಡೆಸಲು ಆದೇಶ ಹೊರಡಿಸಿದೆ.

ಮಕ್ಕಳಿಗೆ ವಿಶೇಷ ಗ್ರಾಮಸಭೆ: ಗ್ರಾಪಂಗಳು ಮತ್ತು ಶೈಕ್ಷಣಿಕಾಭಿವೃದ್ಧಿ ಸಂಸ್ಥೆಯು ಜಂಟಿಯಾಗಿ ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ಈ ವರ್ಷ ಎಲ್ಲಾ ಗ್ರಾಪಂಗಳಲ್ಲಿ ಕಡ್ಡಾಯವಾಗಿ ನಡೆಸಲು ಈಗಾಗಲೇ ಸುತ್ತೋ ಲೆ ಯನ್ನು ಹೊರಡಿಸಿದೆ. ಕಳೆದ 8 ವರ್ಷಗಳಿಂದ ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಮಕ್ಕಳ ಹಕ್ಕುಗಳ ವಿಶೇ ಷ ಗ್ರಾಮ ಸಭೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವ ಅನುಭವವನ್ನು ಹೊಂದಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಪಂಗಳಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಲು ಆದೇಶವಿದ್ದು, ಈ ಹಿಂದಿನ ಸಾಲಿನಲ್ಲಿ ಗ್ರಾಮಸಭೆ ನಡೆದಿರದ ಕಾರಣ ಈ ಬಾರಿ ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಸಿಗುವ ಹಾಗೂ ಗ್ರಾಮ ಸಭೆಗಳು ಮುಂದು ವರಿಸಿಕೊಂಡು ಹೋಗುವ ನಿರೀಕ್ಷೆ ಇದೆ.

 ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನದಲ್ಲಿ ಏನಿರುತ್ತೇ?

 „ ಮಕ್ಕಳ ಜನನ ನೊಂದಣಿ ಮತ್ತು ಜನನ ಪ್ರಮಾಣ ಪತ್ರಗಳ ವಿತರಣೆ

„ ಪೌಷ್ಟಿಕ ಆಹಾರ ಕುರಿತು ಮಾರ್ಗದರ್ಶನ

„ ಮಕ್ಕಳಿಗೆ ಚುಚ್ಚುಮದ್ದು ಪ್ರಾಮುಖ್ಯತೆ ಅರಿವು

„ ಮಕ್ಕಳ ಕ್ರೀಡಾಕೂಟ, ಸಾಂಸ್ಕೃತಿಕ ಮತ್ತು ಸ್ಥಳೀಯ ಸಾಂಪ್ರದಾಯಿಕ ಚಟುವಟಿಕೆಗಳು

„ ಮಕ್ಕಳ ಕಥೆ ಹೇಳುವುದು, ಜನಪದ ಗೀತೆಗಳು ಮತ್ತು ರಂಗಭೂಮಿ ಕಾರ್ಯಕ್ರಮಗಳು

„ ಮಾನಸಿಕ ಆರೋಗ್ಯ ಸಂಬಂತ ಕಾರ್ಯಕ್ರಮಗಳು

„ ಶೈಕ್ಷಣಿಕ ಮತ್ತು ವೃತ್ತಿಪರ ಮಾರ್ಗದರ್ಶನ ಕಾರ್ಯಕ್ರಮ

„ ಚಿತ್ರಕಲೆ ಕಾರ್ಯಕ್ರಮ

 ಮಕ್ಕಳ ವಿಶೇಷ ಗ್ರಾಪಂ ಸಭೆಯಲ್ಲಿ ಏನಿರುತ್ತೇ?

 „ ಗ್ರಾಪಂ ಮಕ್ಕಳ ಹಕ್ಕುಗಳ ರಕ್ಷಣೆ ಫೇಸ್‌ಬುಕ್‌ ಪೇಜ್‌

„ ಮಕ್ಕಳ ಸಮಸ್ಯೆಗಳ, ಬೇಡಿಕೆಗಳ, ಪ್ರಶ್ನೆಗಳ ಮಕ್ಕಳ ಧನಿ (ಸಹಾಯವಾಣಿ 1098)ಪೆಟ್ಟಿಗೆ

„ ಜನನ ನೊಂದಣಿ ಪ್ರಮಾಣ ಪತ್ರ, ಪೌಷ್ಠಿಕ ಆಹಾರ, ಚುಚ್ಚುಮದ್ದು, ಶಾಲಾ ದಾಖಲಾತಿ, ಬಾಲ್ಯ ವಿವಾಹ ಪ್ರಕರಣ

„ ಹೆಣ್ಣು ಮಕ್ಕಳಿಗೆ ಶಿಕ್ಷಣ, ಮಕ್ಕಳ ಜೀತ ಪದ್ಧತಿ ಮುಕ್ತತೆ, ಮಕ್ಕಳ ಸುರಕ್ಷತೆ, ಶಿಶುಮರಣ ಪ್ರಮಾಣ ತಗ್ಗಿಸುವ ಜಾಗೃತಿ ಕಾರ್ಯಕ್ರಮಗಳು

 “ಜಿಲ್ಲಾದ್ಯಂತ ಮತ್ತು ತಾಲೂಕಾದ್ಯಂತ ನ.14ರಿಂದ ಪ್ರತಿ ಗ್ರಾಪಂಗಳಲ್ಲಿ ಕಡ್ಡಾಯವಾಗಿ ಮಾಡಲು ಆದೇಶ ಇರುತ್ತದೆ. ಗ್ರಾಪಂ ಹಂತದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು. ಅವರ ಸಮಸ್ಯೆಗಳಿಗೆ, ಶಾಲೆಗಳಲ್ಲಿ ದೌರ್ಜನ್ಯ, ಪೋಷಕರ ಹಿನ್ನೆಲೆ, ಹೀಗೆ ಹಲವಾರು ರೀತಿಯ ಸಮಸ್ಯೆಗಳಿಗೆ ಧನಿಗೂಡಿಸಿ ಪರಿಹಾರ ಕೊಡಿಸುವ ಸರ್ಕಾರದ ಮಹತ್ವದ ಕಾರ್ಯಕ್ರಮ ಇದಾಗಿದೆ. ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರತಿ ಗ್ರಾಪಂಗಳಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯನ್ನು ಮಾಡಲಾಗುತ್ತದೆ.” – ಎಚ್‌.ಡಿ.ವಸಂತ್‌ಕುಮಾರ್‌, ತಾಪಂ ಇಒ

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.