ಪ್ರತಿ ಬೂತ್‌ಮಟ್ಟದಿಂದ ಬಿಜೆಪಿ ಪಕ್ಷ ಸಂಘಟಿಸಿ


Team Udayavani, Sep 5, 2022, 1:07 PM IST

ಪ್ರತಿ ಬೂತ್‌ಮಟ್ಟದಿಂದ ಬಿಜೆಪಿ ಪಕ್ಷ ಸಂಘಟಿಸಿ

ದೇವನಹಳ್ಳಿ: ತಾಲೂಕಿನ ಪ್ರತಿ ಗ್ರಾಮದಲ್ಲೂ ಬೂತ್‌ ಮಟ್ಟದಿಂದ ಬಿಜೆಪಿ ಪಕ್ಷವನ್ನು ಸಂಘಟಿಸಬೇಕು. 2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಬಿಜೆಪಿ ಶಾಸಕರನ್ನು ಗೆಲ್ಲಿಸಿ ಇತಿಹಾಸ ಸೃಷ್ಟಿಸಬೇಕು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.

ತಾಲೂಕಿನ ಇಲತೊರೆ ಗ್ರಾಮದಲ್ಲಿ ನಡೆದ ಬಿಜೆಪಿ ಸೇರ್ಪಡೆ, ಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ. ಬಿಜೆಪಿ ಶಾಸಕರನ್ನು ಇಲ್ಲಿ ಗೆಲ್ಲಿಸಿದರೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತದೆ. ರಾಜ್ಯದಲ್ಲಿ ಆಡಳಿತರೂಡ ಬಿಜೆಪಿ ಸರ್ಕಾರ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಅನುದಾನಗಳನ್ನು ನಿರಂತರ ಒದಗಿಸಿಕೊಡುತ್ತಿದೆ ಎಂದರು.

ಬೂತ್‌ಮಟ್ಟಗಳಿಗೆ ಶಕ್ತಿ ತುಂಬಿ: ವಿವಿಧ ಪಕ್ಷಗಳಿಂದ ಸೇರ್ಪಡೆಗೊಂಡ ಪ್ರತಿಯೊಬ್ಬರನ್ನೂ ಸ್ವಾಗತಿಸುತ್ತೇನೆ. ಪ್ರತಿ ಬೂತ್‌ಮಟ್ಟದಲ್ಲಿ ಬೂತ್‌ ಸಮಿತಿಗಳನ್ನು ರಚಿಸಿ ಬೂತ್‌ಮಟ್ಟಗಳಿಗೆ ಶಕ್ತಿ ತುಂಬಬೇಕು. ಒಂದೊಂದು ಬೂತ್‌ನಲ್ಲೂ ಹತ್ತತ್ತು ಜನರ ಸಮಿತಿಯನ್ನು ರಚಿಸಬೇಕು. ತಾವು ಶಾಸಕರಾಗಿದ್ದ ವೇಳೆಯಲ್ಲಿ ವಸತಿ ಶಾಲೆಗಳನ್ನು ಮಾಡಿ ಹಲವಾರು ವಿದ್ಯಾರ್ಥಿಗಳು ವಿದ್ಯಾವಂತರನ್ನಾಗಿ ಮಾಡುವಂತೆ ಮಾಡಲಾಗಿದೆ. ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಯಿತು ಎಂದರು.

ರೈತರಿಗೆ ಹಣ ಸಂದಾಯ: ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಲವಾರು ಜನಪರ ಯೋಜನೆ ಜಾರಿಗೆ ತಂದಿದೆ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಕೇಂದ್ರ ಸರ್ಕಾರ 6 ಸಾವಿರ ಹಾಗೂ ರಾಜ್ಯ ಸರ್ಕಾರ 4 ಸಾವಿರ ರೂ. ಒಟ್ಟಾರೆ 10 ಸಾವಿರ ರೈತರ ಖಾತೆಗಳಿಗೆ ನೇರವಾಗಿ ಜಮೆಯಾಗು ವಂತೆ ಮಾಡುವುದರ ಮೂಲಕ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರೈತರಿಗೆ ಹಣ ಸಂದಾಯ ಮಾಡಿದ ಸರ್ಕಾರವಾಗಿದೆ. ರೈತರ ಮಕ್ಕಳ ವಿದ್ಯಾರ್ಜನೆಗಾಗಿ ವಿದ್ಯಾನಿಧಿ ಯೋಜನೆ ರೈತರ ಆದಾಯ ದುಪ್ಪಟ್ಟಿಗೆ ಅನುಕೂಲವಾಗುವಂತಹ ಕಾರ್ಯಕ್ರಮ ಬಿಜೆಪಿ ಸರ್ಕಾರ ಮಾಡಿದೆ ಎಂದು ಹೇಳಿದರು.

ತಳಮಟ್ಟದಿಂದ ಪಕ್ಷ ಸಂಘಟಿಸಿ: ಬಿಜೆಪಿ ಮುಖಂಡ ಇಲತೊರೆ ಕೃಷ್ಣಪ್ಪ ಮಾತನಾಡಿ, ಕನ್ನಮಂಗಲ ಗ್ರಾಪಂ ವ್ಯಾಪ್ತಿಯಿಂದ ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಜನೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವಂತೆ ಆಗುತ್ತಿದೆ. ರೈತರು, ಮಹಿಳೆಯರು, ಕಾರ್ಮಿಕರು, ಬಡವರು, ದೀನದಲಿತರು, ಹಿಂದುಳಿದ ವರ್ಗದವರು ಸಾಮಾನ್ಯ ಜನರ ಕಲ್ಯಾಣಕ್ಕೆ ಬಿಜೆಪಿ ಸರ್ಕಾರ ಸಾಕಷ್ಟು ಯೋಜನೆ ರೂಪಿಸಿ ಜನರಿಗೆ ಮಾದರಿ ಸರ್ಕಾರ ನೀಡಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಶಾಸಕರನ್ನು ಗೆಲ್ಲಿಸಿಕೊಳ್ಳಬೇಕು ಎಂದು ಹೇಳಿದರು.

ಜನರಿಗೆ ಸರ್ಕಾರದ ಯೋಜನೆ ತಿಳಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮೂರು ವರ್ಷ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರೈಸಿದ ಹಿನ್ನೆಲೆ ಸೆ. 8ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಯುತ್ತಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಜನೋತ್ಸವ ಕಾರ್ಯಕ್ರಮ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಜನಸಾಮಾನ್ಯರಿಗೆ ನೀಡಿರುವ ಜನಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿಕೊಡಬೇಕು ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್‌, ಗ್ರಾಪಂ ಸದಸ್ಯರಾದ ಅಂಬುಜ ಕೃಷ್ಣಪ್ಪ, ಐ.ಸಿ. ಗೋಪಿನಾಥ್‌, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನೀಲೇರಿ ಮಂಜುನಾಥ್‌, ತಾಪಂ ಮಾಜಿ ಉಪಾಧ್ಯಕ್ಷ ಎಸ್‌.ಎಂ. ನಾರಾಯಣಸ್ವಾಮಿ, ಮುಖಂಡ ಇಲತೊರೆ ವಿಜಯಕುಮಾರ್‌, ಪಿ.ಮಂಜುನಾಥ್‌, ಜಯರಾಮ್‌, ನರಸಿಂಹ, ಹರೀಶ್‌, ಶಿವರಾಜ್‌, ನಾಗರಾಜ್‌ ,ಗೋಪಿ, ಶಾ®ಪ್ಪನಹಳ್ಳಿ ರವಿ, ಬೈರದೇನಹಳ್ಳಿ ರವಿ(ಕೆಂಪೇಗೌಡ), ತಿಂಡ್ಲು ಮಧು ಮತ್ತಿತರರು ಇದ್ದರು.

ಟಾಪ್ ನ್ಯೂಸ್

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.