ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ
Team Udayavani, Dec 31, 2019, 5:04 PM IST
ದೊಡ್ಡಬಳ್ಳಾಪುರ: ಬಿಜೆಪಿ ತಾಲೂಕು ಹಾಗೂ ನಗರದ ಯುವ ಮೋರ್ಚಾ ಘಟಕದ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕೃಷೈಕ್ಯರಾದ ಉಡುಪಿ ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರಿಗೆ ಸಂತಾಪ ಸೂಚಿಸಲಾಯಿತು. ಬಿಜೆಪಿ ನಗರ ಅಧ್ಯಕ್ಷ ಎಚ್‌ಎಸ್. ಶಿವಶಂಕರ್ ಮಾತನಾಡಿ, ಇಂದು ರಕ್ತವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ.ರಕ್ತದಾನದಿಂದ ಮಾತ್ರವೇ ರಕ್ತವನ್ನು ಪಡೆಯಬೇಕಾಗಿದ್ದು, ವಾಜಪೇಯಿ ಜನ್ಮ ದಿನಾಚರಣೆ ಅಂಗವಾಗಿ ಹಲವಾರು ಬಿಜೆಪಿ ಕಾರ್ಯಕರ್ತರು ಹಾಗು ಸಾರ್ವಜನಿಕರು ರಕ್ತದಾನ ಮಾಡುತ್ತಿರುವುದು ಅಭಿನಂದನೀಯ ಎಂದರು.
ಶಿಬಿರದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ ಹನುಮಂತರಾಯಪ್ಪ, ಮಾಜಿ ಶಾಸಕ ಜೆ. ನರಸಿಂಹಸ್ವಾಮಿ, ಮುಖಂಡರಾದ ಅಶ್ವಥ್ ನಾರಾಯಣ ಸ್ವಾಮಿ, ಟಿ.ವಿ ಲಕ್ಷ್ಮೀನಾರಾಯಣ್, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಶಿವಶಂಕರ್,ತಾಲೂಕು ಯುವಮೋರ್ಚಾ ಅಧ್ಯಕ್ಷ ಡಿ.ಬಿ ಚಂದ್ರೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಎನ್. ನಾಗರಾಜ್, ಮಾಜಿ ಜಿಲ್ಲಾಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ನಗರ ಪ್ರಧಾನ ಕಾರ್ಯದರ್ಶಿ ಮುನಿರಾಜ್, ತಾಲೂಕು ಕಾರ್ಯದರ್ಶಿ ರಾಜಘಟ್ಟ ಕಾಂತರಾಜ್ ,ಶಿವಾನಂದರೆಡ್ಡಿ ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಹಿರಿಯ ಬಿಜೆಪಿ ಮುಖಂಡರಾದ ಕೆ.ಟಿ.ವೆಂಕಟಚಲಯ್ಯ, ನಗರ ಬಿಜೆಪಿ
ಕಾರ್ಯದರ್ಶಿ ಎಂ.ಕೃಷ್ಣಮೂರ್ತಿ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವತ್ಸಲ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಗಿರಿಜಾ, ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ರಾದ ಶಿವು, ಶಿವಕುಮಾರ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.