ಇತರೆ ಪಕ್ಷದ ಮುಖಂಡರು ಬಿಜೆಪಿ ಸೇರ್ಪಡೆ
Team Udayavani, Apr 24, 2023, 12:40 PM IST
ದೇವನಹಳ್ಳಿ: ಮಾಜಿ ಶಾಸಕರಾದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ, ಮಾಜಿ ಶಾಸಕ ಜಿ.ಚಂದ್ರಣ್ಣ, ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಸುಂದರೇಶ್ ರವರ ನೇತೃತ್ವದಲ್ಲಿ ಪಟ್ಟಣದ ಬಿಜೆಪಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸೇರ್ಪಡೆ ಕಾರ್ಯಕ್ರಮದಲ್ಲಿ ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಆರ್.ಕೆ.ನಂಜೇಗೌಡ ಹಾಗೂ ನಾಗೇಶ್‌ಬಾಬು ಅವರು ತಮ್ಮ ಬೆಂಬಲಿಗ ರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.
ಬೆಂ.ಗ್ರಾ.ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾ ಯಣಸ್ವಾಮಿ ಮಾತನಾಡಿ, ತಾಲೂಕಿನ ವಿವಿಧ ಪಕ್ಷಗಳ ಅನೇಕ ಮುಖಂಡರು, ಯುವಕರು ಬಿಜೆಪಿಯತ್ತ ಮುಖ ಮಾಡಿರುವುದು ದೇವನ ಹಳ್ಳಿ ಕ್ಷೇತ್ರದಲ್ಲಿ ಕಮಲ ಅರಳುವುದು ಖಚಿತ, ಯುವಕರ ಸೇರ್ಪಡೆಯಿಂದ ಕ್ಷೇತ್ರದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಬಿಜೆಪಿ ಸೇರ್ಪಡೆಗೊಂಡ ನಾಗೇಶ್‌ಬಾಬು ಮಾತನಾಡಿ, ಬಿಜೆಪಿ ಸರ್ಕಾರದ ಆಡಳಿತ ವೈಖರಿ, ದೇಶಪ್ರೇಮವನ್ನು ಮೆಚ್ಚಿ ಅನೇಕ ಕಾರ್ಯಕರ್ತರ ಬೆಂಬಲದೊಂದಿಗೆ ಸೇರ್ಪಡೆ ಗೊಂಡಿದ್ದೇವೆ, ಮತ್ತಷ್ಠು ಅಭಿಮಾನಿಗಳು ಬಿಜೆಪಿ ಸೇರಲಿದ್ದಾರೆ ಎಂದರು.
ಆರ್.ಕೆ.ನಂಜೇಗೌಡ ಮಾತನಾಡಿ, ನಾನು ಜೆಡಿಎಸ್‌ನಲ್ಲಿ ಉಸಿರು ಕಟ್ಟಿಸುವ ವಾತಾವರಣ ದಿಂದ ಬೇಸರಗೊಂಡು ಬಿಜೆಪಿ ಸೇರಿದ್ದೇನೆ ಎಂದರು.
ಮುಖಂಡರಾದ ಭಗವಂತಪ್ಪ, ಎಮ್. ಗೋಪಾಲಪ್ಪ, ಗೌರಮ್ಮ, ಆರ್.ಕೆ.ವೆಂಕಟೇಗೌಡ, ಸಂಜೀವಮೂರ್ತಿ, ಸೋಮ, ಟಿ.ಆರ್.ಆನಂದ್, ಅಶ್ವತ್ಥಗೌಡ, ಶ್ರೀಕಾಂತ್, ನವೀನ್, ಸತೀಶ್, ಶಿವಕುಮಾರ್, ವಿಕಾಸ್ ಗೌಡ, ಧನುಷ್‌ಗೌಡ, ವಿಜಯ ಕುಮಾರ್, ಮಂಜುನಾಥ್ ಅನೇಕರು ಬಿಜೆಪಿ ಸೇರ್ಪಡೆ ಗೊಂಡರು.
ಬಿಜೆಪಿ ಕಾರ್ಮಿಕ ಪ್ರಕೋಷ್ಠದ ಜಿಲ್ಲಾಧ್ಯಕ್ಷ ನೀಲೇರಿ ಅಂಬರೀಶ್‌ಗೌಡ, ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಯೋಜನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಎಲ್.ಎನ್. ಅಶ್ವತ್ಥನಾರಾಯಣ್, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಚ್.ಎಂ.ರವಿ ಕುಮಾರ್, ಮುಖಂಡ ಚೇತನ್‌ಕುಮಾರ್, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಬಿ.ಶ್ರೀನಿವಾಸ್ ,ಎಪಿಎಂಸಿ ಮಾಜಿ ನಿರ್ದೇಶಕ ಸುಧಾಕರ್, ತಾ.ಅಧ್ಯಕ್ಷ ಸುಂದರೇಶ್(ಸುನಿಲ್), ಪ್ರ. ಕಾರ್ಯ ದರ್ಶಿಗಳಾದ ನಿಲೇರಿ ಮಂಜುನಾಥ್, ರವಿಕುಮಾರ್, ಮುಖಂಡರು ಗಳಾದ ದೇಸು ನಾಗರಾಜ್, ಸುಬ್ಬೇಗೌಡ, ವಿನಯ್‌ಕುಮಾರ್, ಸಂದೀಪ್, ಅನಿಲ್‌ಕುಮಾರ್, ಮಹಿಳಾ ಮೋರ್ಚಾದ ಅಧ್ಯಕ್ಷೆ ವಿಮಲಾ ಶಿವಕುಮಾರ್, ಪುನೀತಾ, ಮಂಜುಳಾಗುರುಸ್ವಾಮಿ, ದಾಕ್ಷಾಯಿಣಿ, ಲಕ್ಷ್ಮೀ, ಭರತ್, ಮಹೇಶ್, ಸಾಗರ್, ಬಾಬು, ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.