ರೈತರ ವಿರೋಧಿ ಕಾಯ್ದೆಗಳಿಗೆ ಧಿಕ್ಕಾರ
Team Udayavani, Sep 28, 2020, 2:55 PM IST
ದೇವನಹಳ್ಳಿ: ಕೋವಿಡ್ ಸಂಕಷ್ಟದಲ್ಲಿ ಜನರ ಆರೋಗ್ಯ ರಕ್ಷಣೆ ಮಾಡಬೇಕಾದ ಸರ್ಕಾರ ರೈತ, ದಲಿತ ಹಾಗೂ ಕಾರ್ಮಿಕರ ವಿರೋಧಿ ಮಸೂದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಜಾರಿಗೊಳಿಸುತ್ತಿದೆ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ, ಕರ್ನಾಟಕ ಬಂದ್ ಪ್ರಯುಕ್ತ ವಿವಿಧ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ರೈತ, ಕಾರ್ಮಿಕ, ದಲಿತ ವಿರೋಧಿ ಕಾಯ್ದೆಗಳ ವಿರುದ್ಧ ದೇವನಹಳ್ಳಿ ಬಂದ್ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.
ತಿಭಟನೆ ರ್ಯಾಲಿ ದೇವನಹಳ್ಳಿ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಜಮಾವಣೆಯಾಗಿ ಹಳೇ ಬಸ್ ನಿಲ್ದಾಣದ ಮೂಲಕ ಬಜಾರ್ ರಸ್ತೆ, ಗಾಂಧಿ ಚೌಕ, ಹಳೆ ತಾಲೂಕು ಕಚೇರಿ ಮೂಲಕ ಬೈಪಾಸ್ ರಸ್ತೆ, ಕೆಂಪೇಗೌಡ ಸರ್ಕಲ್ ಬಳಿ ಜಮಾವಣೆಯಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಪ್ರತಿಭ ಟನೆಗೆ ರೈತರು, ವಿವಿಧ ಸಂಘಟನೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಈ ವೇಳೆ ತಾಪಂ ಮಾಜಿ ಅಧ್ಯಕ್ಷ ಬಿ.ಕೆ.ಶಿವಪ್ಪ, ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್, ಮಾನವ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ (ನಾಣಿ), ಕರವೇ ಗೌರವಾಧ್ಯಕ್ಷ ಚಂದ್ರಶೇಖರ್, ತಾಲೂಕು ಅಧ್ಯಕ್ಷ ಡಾ.ವೆಂಕಟರಾಜು, ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಚ್ಚಹಳ್ಳಿ ವೆಂಕಟೇಶ್, ತಾಲೂಕು ಅಧ್ಯಕ್ಷ ಮುನಿಶಾಮಪ್ಪ, ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್, ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರಧಾನ ನರಸಪ್ಪ ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.