ಕಾಂಗ್ರೆಸ್ ಕಿತ್ತೊಗೆಯಲು ಜನರ ನಿರ್ಧಾರ
Team Udayavani, Apr 15, 2022, 2:22 PM IST
ಮಹದೇವಪುರ: ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತು ಹೊಗೆಯಬೇಕೆಂದು ಜನರು ತೀರ್ಮಾನಿಸಿದ್ದಾರೆ. ಜನರಿಗೆ ಬಿಜೆಪಿ ಆಡಳಿತದಲ್ಲಿ ತೃಪ್ತಿಯಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.
ಕ್ಷೇತ್ರದ ಸಾದರಮಂಗಲದಲ್ಲಿ ಬಿಜೆಪಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಬಡವರು, ಮಹಿಳೆಯರಿಗೆ ಉತ್ತಮ ಸೌಲಭ್ಯ, ಕಲ್ಯಾಣ ಯೋಜನೆಗಳು ದೊರೆತಿವೆ ಎಂದರು.
ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಕ್ಷೇತ್ರದಲ್ಲಿ ದಲಿತರು ಹೆಚ್ಚಿನ ಸಾಧನೆಯ ಮಾಡುವ ಮೂಲಕ ಪ್ರಗತಿಪರರಾಗ ಬೇಕಿದೆ. ಕಟ್ಟಕಡೆ ವ್ಯಕ್ತಿಗೂ ಸೇವೆ, ಸೌಲಭ್ಯ, ಯೋಜನೆಗಳು ಸಲ್ಲಬೇಕು ಎಂಬುದೇ ಬಿಜೆಪಿ ಸಿದ್ಧಾಂತ ಎಂದರು.
ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತರಲ್ಲ, ಅವರು ದೇಶಕ್ಕೆ ಸಂವಿಧಾನ ವನ್ನು ನೀಡಿದ ಸಮಿತಿ ಅಧ್ಯಕ್ಷರಾಗಿ, ಸಮಾಜಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞ ರಾಗಿ, ಇತಿಹಾಸಕಾರರಾಗಿ ಹೀಗೆ ಅವರಿಗೆ ತಿಳಿಯದ ಕ್ಷೇತ್ರವಿರಲಿಲ್ಲ. ಹಿಂದುಳಿದವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆ ತರುವ ಜೊತೆಗೆ ಎಲ್ಲರ ಕರೆದೊ ಯ್ಯುವ ಉದ್ದೇಶ ಅವರದಾಗಿತ್ತು ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಗ್ರಾಮಾಂತರ ಅಧ್ಯಕ್ಷ ನಟರಾಜ್, ಮುಖಂಡರಾದ ಹೂಡಿ ಪಿಳ್ಳಪ್ಪ, ಮಾರಪ್ಪ, ಚೆನ್ನಸಂದ್ರ ಚಂದ್ರಶೇಖರ್, ಬೈರತಿ ರಮೇಶ್, ವೀರ ಸ್ವಾಮಿ ರೆಡ್ಡಿ, ಪ್ರಶಾಂತ್ ರೆಡ್ಡಿ, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.