ಹಿಂದುಳಿದವರ ಕಲ್ಯಾಣಕ್ಕಾಗಿ ಯೋಜನೆ ಜಾರಿ

60 ವರ್ಷಗಳ ಕಾಲ ಒಂದೇ ಕುಟುಂಬಕ್ಕೆ ಅಧಿಕಾರ ; ಹಸಿರು ಕರ್ನಾಟಕಕ್ಕೆ ಸೀಡ್‌ಬಾಲ್‌ ಕಾರ್ಯಕ್ರಮ

Team Udayavani, Aug 9, 2021, 2:23 PM IST

ಹಿಂದುಳಿದವರ ಕಲ್ಯಾಣಕ್ಕಾಗಿ ಯೋಜನೆ ಜಾರಿ

ದೇವನಹಳ್ಳಿ: ಒಬಿಸಿ ಬಿಜೆಪಿಗೆ ಬೆನ್ನೆಲುಬಾಗಿದೆ. ದೇಶದಲ್ಲಿಶೇ.50ರಷ್ಟು ಹಿಂದುಳಿದ ವರ್ಗದವರಿದ್ದಾರೆ. ಸ್ವಾತಂತ್ರ್ಯದ ನಂತರ ಕಾಂಗ್ರೆಸ್‌ 60 ವರ್ಷಗಳ ಕಾಲ ಒಂದೇ ಕುಟುಂಬದವರು ಅಧಿಕಾರ ನಡೆಸಿದ್ದಾರೆಯೇ ಹೊರತು ಬೇರೆ ಯಾರಿಗೂ ಅವಕಾಶ ನೀಡಿಲ್ಲ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಕೆ.ಲಕ್ಷ್ಮಣ್‌ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಒಬಿಸಿ ಮೋರ್ಚಾದ ವತಿಯಿಂದ ಸೀಡ್‌ಬಾಲ್‌ ಕಾರ್ಯಕ್ರಮದ ಮೂಲಕ ಹಸಿರು ಕರ್ನಾಟಕಕ್ಕೆ ಬದ್ಧವಾಗಿದೆ. ಬಿಜೆಪಿ ಕೇವಲ ರಾಜಕಾರಣಕ್ಕೆ ಮಾತ್ರ ಸೀಮಿತವಾಗಿಲ್ಲ, ರಾಜ್ಯದ ಪರಿಸರ ಸಂರಕ್ಷಣೆಗೂ ಕೂಡಾ ಹೆಚ್ಚಿನ ಆದ್ಯತೆ ನೀಡುತ್ತಿದ್ದು, 5 ಲಕ್ಷ ಸಸಿಗಳನ್ನು ಬೆಳೆಸುವಂತಹ ಕಾರ್ಯಕ್ರಮ ಮಾಡಿದೆ. ಕೋವಿಡ್‌ ಸಂಕಷ್ಟದ ಸಮಯದಲ್ಲಿ ಜನರ ಅಗತ್ಯತೆಗಳನ್ನು ಪೂರೈಕೆ ಮಾಡುವಂತಹಕಾರ್ಯಕ್ರಮಗಳನ್ನುಮಾಡಿಕೊಂಡು ಬಂದಿದೆ. ಮಾಲಿನ್ಯ ಮುಕ್ತ ರಾಜ್ಯವನ್ನಾಗಿ ಮಾಡಲು
ಪಣ ತೊಟ್ಟು ಕೆಲಸ ಮಾಡುತ್ತಿದೆ. ನಂದಿಬೆಟ್ಟದಲ್ಲೂ ಕೂಡಾ ಸೀಡ್‌ಬಾಲ್‌ಗ‌ಳನ್ನು ಭೂಮಿಗೆ ಹಾಕುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.

ಶೇ.21ರಿಂದ 27ರಷ್ಟು ಮೀಸಲಾತಿ: ದೇಶದ ಇತಿಹಾಸದಲ್ಲಿ ಕೇಂದ್ರದಲ್ಲಿ 27 ಮಂದಿಯನ್ನು ಕ್ಯಾಬಿನೆಟ್‌ ಸಚಿವರನ್ನಾಗಿ ಮಾಡಿಲ್ಲ. ನರೇಂದ್ರ
ಮೋದಿ ಸರ್ಕಾರದಲ್ಲಿ ಸಾಧ್ಯವಾಗಿದೆ. ದೇಶದಲ್ಲಿ ಹಿಂದುಳಿದ ವರ್ಗಗಳಕಲ್ಯಾಣಕ್ಕಾಗಿ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆರ್ಥಿಕವಾಗಿ ಹಿಂದುಳಿದಿರುವ ವರ್ಗಗಳಿಗೆ ಶಕ್ತಿ ತುಂಬಿಸುವಂತಹ ಕೆಲಸ ಮಾಡಲಾಗಿದೆ. ಮಂಡಲ್‌ ಕಮಿಷನ್‌ ಜಾರಿಗೆ ತರಲು ಪ್ರಯತ್ನ ಮಾಡಿದ್ದ ಜನತಾ ಪಕ್ಷಕ್ಕೆ ಬೆಂಬಲವಿಲ್ಲದ ಕಾರಣ ನನೆಗುದಿಗೆ ಬಿದ್ದಿತ್ತು.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಷಾ ಅವರು ರಾಜ್ಯಸಭೆ, ಲೋಕಸಭೆಯಲ್ಲಿ ಬೆಂಬಲ ಪಡೆಯುವ ಮೂಲಕ ಸಂವಿಧಾನ ಬದ್ಧವಾಗಿ ಕಾಯ್ದೆ ಅನುಷ್ಠಾನಗೊಳಿಸಿ ಮಾಡಿ, ಶೇ.21ರಿಂದ 27ರಷ್ಟು ಮೀಸಲಾತಿ ನೀಡಿದ್ದಾರೆ ಎಂದು ಹೇಳಿದರು.

ಅರ್ಹರಿಗೆ ಸರ್ಕಾರಿ ಸೌಲಭ್ಯ ಸಿಗಲಿ: ಸಿ.ಇ.ಟಿ,ಯುಪಿಎಸ್‌ಸಿ, ನೀಟ್‌ ಪರೀಕ್ಷೆಗಳಲ್ಲಿ ಹಿಂದುಳಿದ ವರ್ಗಗಳಿಗೆ ನೀಡಿದ ಮೀಸಲಾತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಂಡು ಉನ್ನತ ಸ್ಥಾನಗಳು ಅಲಂಕರಿಸಲು ಸಾಧ್ಯವಾಗಿದೆ. ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಬೇಕು ಎನ್ನುವುದು ಅವರ ಆಶಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಲಸಿಕೆ ಕಡ್ಡಾಯಕ್ಕೆ ತಡೆ ನೀಡಲು ಸುಪ್ರೀಂ ನಕಾರ : ಕೇಂದ್ರಕ್ಕೆ ನೋಟಿಸ್

ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸಂವಿಧಾನದಡಿಯಲ್ಲಿ ಮೀಸಲಾತಿ ನೀಡುವಲ್ಲಿ ಕಾಂಗ್ರೆಸ್‌ ವಿಫ‌ಲವಾಗಿತ್ತು. ನೆಹರು ಮೊದಲುಗೊಂಡು ರಾಜೀವ್‌ ಗಾಂಧಿಯವರೆಗೂ ಮೀಸಲಾತಿ ಜಾರಿ ಮಾಡಲಿಲ್ಲ. ಸ್ವಾತಂತ್ರ್ಯದ ನಂತರ 70 ವರ್ಷಗಳಲ್ಲಿ ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡಲು ಸಾಧ್ಯವಾಗದಿರುವ ಬದಲಾವಣೆಗಳನ್ನು ಕೇವಲ 7 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿ ಪ್ರಧಾನಿಯಾಗುವುದು ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ತಳಮಟ್ಟದಲ್ಲಿ ಪಕ್ಷ ಸಂಘಟನೆ: ರಾಜ್ಯ ಘಟಕದ ಒಬಿಸಿ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು ಮಾತನಾಡಿ, ರಾಜ್ಯದಲ್ಲಿ ಒಬಿಸಿ ಮೋರ್ಚಾವನ್ನು ಬೂತ್‌ ಮಟ್ಟದಿಂದ ತಳಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡಲಾಗುತ್ತದೆ. ಎಲ್ಲೆಡೆ ಪ್ರವಾಸ ಮಾಡಿ, ಶಕ್ತಿ ತುಂಬುವ ಕೆಲಸವನ್ನು ಮಾಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಪ್ರತಿ ಕಾರ್ಯಕರ್ತರು, ಮುಖಂಡರು ಪ್ರತಿ ಮನೆಗೆ
ತಲುಪುವಂತೆ ಮಾಡಬೇಕು ಎಂದರು.

ರಾಷ್ಟ್ರೀಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್‌ ಸುವರ್ಣ, ಸುರೇಶ್‌ ಬಾಬು, ವಿವೇಕಾನಂದ, ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಬೂದಿಗೆರೆ ನಾರಾಯಣಸ್ವಾಮಿ, ರಾಜ್ಯ ಘಟಕದ ಎಸ್‌.ಸಿ.ಮೋರ್ಚಾ ಖಜಾಂಚಿ ಎಕೆಪಿ ನಾಗೇಶ್‌, ಬಿಜೆಪಿ ಹಿರಿಯ ಮುಖಂಡ ಗುರುಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಎ.ವಿ.ನಾರಾಯಣ ಸ್ವಾಮಿ, ರೈತ ಮೋರ್ಚಾ ಅಧ್ಯಕ್ಷ ರವಿಕುಮಾರ್‌, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೂದಿಗೆರೆ ನಾಗವೇಣಿ, ತಾಲೂಕು ಬಿಜೆಪಿ ಅಧ್ಯಕ್ಷ ಸುನಿಲ್‌, ತಾಲೂಕು ಉಪಾಧ್ಯಕ್ಷೆ ಪುನೀತಾ, ಜಿಲ್ಲಾ ಕಾರ್ಯದರ್ಶಿ ಕನಕರಾಜು, ತಾಲೂಕು ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್‌, ರವಿಕುಮಾರ್‌, ಜಿಲ್ಲಾ ಮಾಧ್ಯಮ ಪ್ರಮುಖ್‌ ಎಸ್‌. ರಮೇಶ್‌ಕುಮಾರ್‌ ಹಾಜರಿದ್ದರು.

ಮೀನುಗಾರಿಕೆಗಾಗಿ ಪ್ರತ್ಯೇಕ
ಬಜೆಟ್‌ಗೆ ಅವಕಾಶ
ಮೀನುಗಾರಿಕೆಗಾಗಿ ಪ್ರತ್ಯೇಕ ಬಜೆಟ್‌ಗೆ ಅವಕಾಶ ಮಾಡಿಕೊಡಲಾಗಿದೆ. ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಲಾಗಿದೆ. ಶೇ.50ರಷ್ಟು ಸಬ್ಸಿಡಿ
ನೀಡಿ, ಬೋಟ್‌ಗಳ ತಯಾರಿಕೆಗೆ ಸೌಲಭ್ಯ ನೀಡಲಾಗುತ್ತಿದೆ. ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಅವರ ನೆರವಿಗಾಗಿ ಪ್ರತ್ಯೇಕ
ಅನುದಾನ ಮೀಸಲಿಡಲಾಗಿದೆ. ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಅವಕಾಶವಿಲ್ಲ. ಮೋದಿ ಅವರ ಕುಟುಂಬಸ್ಥರನ್ನು ರಾಜಕಾರಣಕ್ಕೆ
ಬಿಟ್ಟುಕೊಂಡಿಲ್ಲ. ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣರಿಗೆ ಶೇ.10ರಷ್ಟು ಮೀಸಲಾತಿ ನೀಡಲಾಗಿದೆ. ನಿಜವಾದ ಸಾಮಾಜಿಕ ನ್ಯಾಯನ್ನು
ಬಿಜೆಪಿ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಎಲ್ಲಾ ಜಾತಿ ವರ್ಗದ ಸಮುದಾಯದವರು ಬಿಜೆಪಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು
ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಕೆ.ಲಕ್ಷ್ಮಣ್‌ ತಿಳಿಸಿದರು.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.