ಆಲೂಗಡ್ಡೆ ಬಿತ್ತನೆ ಬೆಳೆ – ಈಗ ದುಬಾರಿ!

Team Udayavani, Dec 15, 2021, 10:51 AM IST

agri potato

ದೇವನಹಳ್ಳಿ: ಬಯಲುಸೀಮೆಯ ಪ್ರದೇಶವಾಗಿರುವುದರಿಂದ ನೀರಿನ ಅಭಾವದ ನಡುವೆಯೂ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆ ಬೆಳೆಯುವುದರ ಮೂಲಕ ತಮ್ಮ ಜೀವನವನ್ನು ಕಟ್ಟಿಕೊಂಡಿರುವ ರೈತರಿಗೆ ಬರೀ 1,600 ರೂ.ಗೆ ಮಾರಾಟ ಆಗುತ್ತಿದ್ದ ಬಿತ್ತನೆ ಆಲೂಗಡ್ಡೆ ಮೂಟೆ 3,200ರಿಂದ 3,600 ರೂ.ಗೆ ದಿಢೀರ್‌ ಬೆಲೆ ಏರಿಕೆ ಆಗುವ ಮೂಲಕ ಜಿಲ್ಲೆಯ ಆಲೂಗಡ್ಡೆಯ ಬೆಳೆಗಾರರನ್ನು ಬೆಲೆ ಏರಿಕೆ ಬಿಸಿ ದಂಗಾಗಿಸಿದೆ.

ತಿಂಗಳ ಹಿಂದೆ ತೀವ್ರ ಮಳೆಯಿಂದ ಬಿತ್ತನೆ ಆಲೂಗಡ್ಡೆ ಯಾರೂ ಖರೀದಿ ಮಾಡಿರಲಿಲ್ಲ. ಆದರೆ, ಇದೀಗ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ರೈತರು ಬಿತ್ತನೆಗೆ ಮುಂದಾಗಿರುವ ಕಾರಣಕ್ಕೆ ವಿವಿಧ ಕಡೆಗಳಿಂದ ಬಿತ್ತನೆ ಆಲೂಗಡ್ಡ ತರಿಸಿ ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ. ಬಿತ್ತನೆ ಆಲೂಗಡ್ಡೆ ಬೆಲೆ ಹೆಚ್ಚಿಸಿರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ.

ಮಳೆಯಿಂದ ಆದ ಬೆಳೆನಷ್ಟದಿಂದ ಈಗಷ್ಟೇ ರೈತರು ಚೇತರಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಬೆಳೆ ನಷ್ಟ ಪರಿಹಾರವು ಬಹಳಷ್ಟು ರೈತರ ಕೈ ಸೇರಿಲ್ಲ. ಹೂವು, ಹಣ್ಣು, ತರಕಾರಿ ಮಳೆಗೆ ಕೊಚ್ಚಿ ಹೋಗಿ ರೈತರು ಇನ್ನಿಲ್ಲದ ಪರಿಪಾಟು ಅನುಭವಿಸುತ್ತಿದ್ದಾರೆ. ಪ್ರಸ್ತುತ ಬಿತ್ತನೆ ಆಲೂಗಡ್ಡೆ 50 ಕೆ.ಜಿ. ಮೂಟೆ ದರ 1,600 ರೂಪಾಯಿಗಳಿಂದ 4 ಸಾವಿರ ರೂ.ಗೆ ಏರಿಕೆ ಕಂಡಿದೆ.

ತಾಲೂಕಿನ ಬಹುತೇಕ ರೈತರು, ಬಿತ್ತನೆ ಆಲೂಗಡ್ಡೆ ತರಲಿಕ್ಕಾಗಿ ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಗೆ ಹೋಗುತ್ತಾರೆ. ಅಲ್ಲಿನ ಬೆಲೆ ಕೇಳಿ ಸುಸ್ತಾಗುತ್ತಿದ್ದಾರೆ.

ರೈತರ ಅಸಮಾಧಾನ: ವ್ಯಾಪಾರಸ್ಥರು, ಪಂಜಾಬ್‌ನ ಜಲಂಧರ್‌ನಿಂದ ಚಿಪ್ರೋನಾ, ಚೆಂಬಲ್‌, ಪೆಪ್ಸಿ, ಜ್ಯೋತಿ ಸೇರಿದಂತೆ ಬಗೆ ಬಗೆಯ ಬಿತ್ತನೆ ಆಲೂಗಡ್ಡೆಯನ್ನು ಮಾರುಕಟ್ಟೆಗೆ ತರಿಸುತ್ತಾರೆ. ಬಿತ್ತನೆಗೆ ಅಕ್ಟೋಬರ್‌ ಬಳಿಕ ಸೂಕ್ತ ಸಮಯವಾಗಿರುವ ಕಾರಣ ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತಿದೆ.

ಆದರೆ, ಇತ್ತಿಚೇಗೆ ಸುರಿದ ಧಾರಾಕಾರ ಮಳೆಗೆ ಬಿತ್ತನೆಯ ಆಲೂಗಡ್ಡೆ ತೋಟದಲ್ಲಿ ಕೊಳೆತು ಹಾಳಾಗಿದ್ದು, ಹೊಸದಾಗಿ ಬಿತ್ತನೆ ಕೈಗೊಳ್ಳಲು ಬಯಸಿರುವ ರೈತರಿಗೆ ದರದ ಏರಿಕೆಯ ಬಿಸಿ ತಟ್ಟಿದೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃತಕ ಅಭಾವ ಸೃಷ್ಟಿ:

ಬೆಳೆಗಾರರ ಆರೋಪ ಕೆಲ ರೈತರು ಹೇಳುವ ಪ್ರಕಾರ ಅಗತ್ಯ ದಾಸ್ತಾನಿದ್ದರೂ ಮಧ್ಯವರ್ತಿಗಳು ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದು, ಬೆಲೆ ಇಳಿಕೆ, ರೈತರಿಗೆ ಅನುಕೂಲವಾಗುವ ವಿಚಾರವಾಗಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿರುವುದು ಬೆಳೆಗಾರರ ಅಸಮಾಧಾನಕ್ಕೆ ಕಾರಣವಾಗಿದೆ.

ನಮ್ಮ ಜಿಲ್ಲೆಯ ದೇವನಹಳ್ಳಿ ಭಾಗದಲ್ಲಿ 80 ರಿಂದ 120 ಹೆಕ್ಟೇರ್‌ ಪ್ರದೇಶದಲ್ಲಿ ಆಲೂಗಡ್ಡೆ ಬಿತ್ತನೆ ಮಾಡುತ್ತಾರೆ. ಇವರೆಲ್ಲರೂ ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಗೆ ಹೋಗಿ ಬಿತ್ತನೆ ಆಲೂಗಡ್ಡೆಯನ್ನು ತರುತ್ತಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಉಪನಿರ್ದೇಶಕರನ್ನು ಸಂಪರ್ಕ ಮಾಡಿದ್ದೇವೆ. ಅವರು ಜಿಲ್ಲಾಧಿಕಾರಿಯನ್ನು ಸಂಪರ್ಕ ಮಾಡುತ್ತಿದ್ದಾರೆ. ನಾವು ಕೂಡಾ ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ನಡೆಸುತ್ತೇವೆ. ●ಗುಣವಂತ, ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ

ಬೆಲೆಯು ದಿಢೀರನೇ ಏರಿಕೆ ಆಗಿರುವುದರಿಂದ ರೈತರು ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ಅನಿವಾರ್ಯ ಆಗಲಿದೆ. ●ಮುನಿಶಾಮಪ್ಪ, ರೈತ.

  •  – ಎಸ್‌.ಮಹೇಶ್‌

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.