ಮುಂಜಾಗ್ರತೆಗೆ ಆದ್ಯತೆ ನೀಡಿ: ಸಂಸದ ಬಚ್ಚೇಗೌಡ
Team Udayavani, Apr 5, 2020, 11:55 AM IST
ದೇವನಹಳ್ಳಿ: ಕೋವಿಡ್ 19 ಸೋಂಕು ಹರಡುವಿಕೆ ತಡೆಗೆ ಮುಂಜಾಗ್ರತೆ ಕ್ರಮಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ಬಿ.ಎನ್. ಬಚ್ಚೇಗೌಡ ತಿಳಿಸಿದರು.
ತಾಲೂಕು ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ನಡೆದ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಲಾಕ್‌ಡೌನ್ ಆದೇಶ ಶ್ಲಾಘನೀಯವಾಗಿದೆ. ಹರಡುವಿಕೆ ತಡೆಗೆ 4 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು, ತಾಲೂಕುವಾರು ತಹಶೀಲ್ದಾರ್‌ಗಳಿಗೆ ಹಂಚಲಾಗಿದೆ. ದೇವನಹಳ್ಳಿಗೆ 50 ಲಕ್ಷ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ತಾಲೂಕುಗಳಿಗೆ ತಲಾ 25 ಲಕ್ಷ ಬಿಡುಗಡೆಗೊಳಿಸಲಾಗಿದೆ. ಜತೆಗೆ ವಿಜ್ಞಾನ ಇಷ್ಟು ಮುಂದುವರಿದಿದ್ದರೂ, ಈವರೆಗೆ ಔಷಧ ಕಂಡುಹಿಡಿಯಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಶಾಸಕ ಟಿ.ವೆಂಕಟರಮಣಯ್ಯ, ಶರತ್ ಬಚ್ಚೇಗೌಡ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು. ಜಿಪಂ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಜಿಪಂ ಸಿಇಒ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಉಪ ಕಾರ್ಯದರ್ಶಿ ಕರಿಯಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾ ದೇವಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.