ಸಂತ್ರಸ್ತರಿಗೆ ರಕ್ಷಣೆ ಕಲ್ಪಿಸಿ: ಜಿಲ್ಲಾಧಿಕಾರಿ
Team Udayavani, Dec 22, 2019, 4:53 PM IST
ದೇವನಹಳ್ಳಿ : ಜಿಲ್ಲೆಯಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ, ದೌರ್ಜನ್ಯಕ್ಕೆ ಒಳಗಾದ ತೃತೀಯ ಲಿಂಗಿಗಳನ್ನು ಗುರುತಿಸಿ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಸಮಾಲೋಚನೆ, ತಾತ್ಕಾಲಿಕ ವಸತಿಯಂತಹ ಸಖೀ ಯೋಜನೆಯಡಿ ಸಾಂತ್ವನ ಸೇವೆ ಒದಗಿಸಿ ರಕ್ಷಣದ ಕಲ್ಪಿಸಿ ಎಂದು ಡೀಸಿ ಪಿ.ಎನ್.ರವೀಂದ್ರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಸಖೀ- ಒನ್ ಸ್ಟಾಪ್ ಸೆಂಟರ್ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದ ಅನುದಾನಿತ ಸಖೀ-ಓಎಸ್‌ಸಿ ಯೋಜನೆಯ ಪ್ರಮುಖ ಉದ್ದೇಶ ದೌರ್ಜನ್ಯಕ್ಕೊಳಗಾಗಿ ನೂಂದ ಸಂತ್ರಸ್ತ ಮಹಿಳೆಯರಿಗೆ ಒಂದೇ ಸೂರಿನಡಿ ಎಲ್ಲಾ ರೀತಿಯ ತುರ್ತು ಚಿಕಿತ್ಸೆ ಮತ್ತು ಮನೋಸ್ಥೈರ್ಯ ತುಂಬುವುದಾಗಿದೆ. ಸಂತ್ರಸ್ತರು 181 ಸಹ ಯವಾಣಿಗೆ ಕರೆ ಮಾಡುವುದರ ಮೂಲಕ ತಮಗಾದ ದೌರ್ಜನ್ಯದ ಬಗ್ಗೆ ತಿಳಿಸಿ ಮತ್ತು ಅಗತ್ಯ ಸೇವೆಯನ್ನು ಪಡೆದು ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸ್ ಮತ್ತು ನ್ಯಾಯಾಲಯದಲ್ಲಿ ದೂರು ದಾಖಲಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಅಲ್ಲದೆ ಶೀಘ್ರವಾಗಿ ಸಖೀ ಕೇಂದ್ರಕ್ಕೆ ಅ ಗತ್ಯ ವಿರುವ ಸಮಾಲೋಚಕರು-ಒಂದು ಹುದ್ದೆ ಹಾಗೂ ಸಮಾಜ ಸೇವಾ ಕಾರ್ಯಕರ್ತ ಮೂರು ಹುದ್ದೆಗೆನಿಯಮಾನುಸಾರ ಸಖೀಗೆ ಭರ್ತಿ ಮಾಡಲಾಗುವುದು ಎಂದರು. ದೊಡ್ಡಬಳ್ಳಾಪುರ ಡಿವೈಎಸ್ ಪಿ.ಟಿ.ರಂಗಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪುಷಾ ಜಿ.ರಾಯ್ಕರ್ , ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.