ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
Team Udayavani, Aug 11, 2021, 3:58 PM IST
ದೇವನಹಳ್ಳಿ: ವಿದ್ಯುತ್ ಖಾಸಗೀಕರಣ ಹಾಗೂ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಕೆ ವಿರೋಧಿಸಿ ಜಿಲ್ಲಾ ಮತ್ತು ತಾಲೂಕು ರೈತಸಂಘ
ವತಿಯಿಂದ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯ ರೈತ ಸಂಘದ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಮಾತನಾಡಿ,ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುಮುಖ್ಯವಾದ ವಿದ್ಯುತ್
ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ನಿರ್ಧಾರಕ್ಕೆ ಸರ್ಕಾರಗಳು ಮುಂದಾಗಿದ್ದು, ರೈತರ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸಿ ದರ ನಿಗದಿಗೊಳಿಸಲು ತೀರ್ಮಾನಿಸಿದೆ. ಇದರಿಂದ ರೈತ ಸಮುದಾಯಕ್ಕೆ ತೊಂದರೆಯಾಗಲಿದ್ದು, ಈ ನಿರ್ಧಾರವನ್ನು ಖಂಡಿಸುತ್ತೇವೆ. ಇತ್ತೀಚೆಗೆ ಸರ್ಕಾರ ಕೃಷಿಗೆ ಸಂಬಂಧಪಟ್ಟಂತೆ ಮೂರು ಕಾಯ್ದೆ ಜಾರಿಗೆ ತಂದಿದ್ದು, ಈ ಕೃಷಿ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸಿ ರೈತರು ಭೂಮಿ ಮಾರಿಕೊಂಡು ಒಕ್ಕಲೆಬ್ಬಿಸುವ ಕುತಂತ್ರವಾಗಿದೆ ಎಂದು ಕಿಡಿಕಾರಿದರು.
ರೈತರನ್ನು ದಿವಾಳಿ ಮಾಡಲು ಮುಂದಾದ ಸರ್ಕಾರ: ಜಿಲ್ಲಾ ಹಸಿರು ಸೇನೆ ಅಧ್ಯಕ್ಷ ಕೆ.ಎಸ್.ಹರೀಶ್ ಮಾತನಾಡಿ, ಪಂಪ್ ಸೆಟ್‌ಗಳ ಮೇಲೆ
ಇಷ್ಟ ಬಂದ ರೀತಿ ಹಣವನ್ನು ಮೀಟರ್‌ಗಳ ಮೂಲಕ ಹಾಕಿ, ರೈತರನ್ನು ದಿವಾಳಿ ಮಾಡಲು ಸರ್ಕಾರ ಮುಂದಾಗಿದೆ. ವಿದ್ಯುತ್ ಖಾಸಗೀಕರಣ ಮಾಡಿದರೆ ಲಕ್ಷಾಂತರ ಬೆಸ್ಕಾಂ ನೌಕರರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ,ಜಾಗತೀಕರಣಮತ್ತುಉದಾರೀಕರಣ ಹೆಸರಿನಲ್ಲಿ ಅಧಿಕಾರದ ಹಿಡಿದಂತಹಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ದೇಶದ ಆಹಾರ ಭದ್ರತೆಯನ್ನು ಕಾಪಾಡಿಕೊಂಡು ಬಂದಿರುವ ರೈತ ಪ್ರತಿನಿಧಿಸುವ ಕೃಷಿ ಕ್ಷೇತ್ರ ಮತ್ತು ಇದಕ್ಕೆ
ಸಂಬಂಧಪಟ್ಟ ಇಲಾಖೆಯನ್ನು ಖಾಸಗಿ ಕಂಪನಿ ಮತ್ತು ಬಂಡವಾಳ ಶಾಹಿಗಳಿಗೆ ಹಸ್ತಾಂತರ ಮಾಡುತ್ತಿರುವ ನಿರ್ಧಾರವನ್ನು ರದ್ದುಪಡಿಸಬೇಕು. ಕೃಷಿ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸಲು ಹೊರಟಿರುವುದು ಅಪಾಯಕಾರಿ ಸಂಗತಿ ಎಂದರು.
ಇದನ್ನೂ ಓದಿ:ಆನಂದ ಸಿಂಗ್ ಭೇಟಿ ವಿಚಾರದಲ್ಲಿ ಮಾಹಿತಿ ಬಿಟ್ಟು ಕೊಡದ ಸ್ಪೀಕರ್
ಪ್ರತಿಭಟನಾಕಾರರು ಜಿಲ್ಲಾಧಿಕಾರಿಕೆ.ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘದ ರಾಜ್ಯ ನಿರ್ದೇಶಕ ಕೆಂಚೇಗೌಡ, ದೇವನಹಳ್ಳಿ ತಾಲೂಕು ರೈತ ಸಂಘದ ಅಧ್ಯಕ್ಷ ಗಾರೆ ರವಿಕುಮಾರ್, ಕಾರ್ಯಾಧ್ಯಕ್ಷ ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿದಲೂರು ರಮೇಶ್,
ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ವಕೀಲ ಸಿದ್ದಾರ್ಥ, ಮುನಿಶಾಮಪ್ಪ, ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನ ರಾಜ್ಯಾಧ್ಯಕ್ಷ ಮುನಿ ಆಂಜಿನಪ್ಪ ಹಾಗೂ ರೈತ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.